Cattle Shed Mgnrega Subsidy : ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣಕ್ಕೆ (Cattle Shed) ಸರ್ಕಾರ ಸಹಾಯಧನ ನೀಡಲಾಗುತ್ತದೆ. ಅಗತ್ಯ ಇರುವವರು ನಿಮ್ಮ ಗ್ರಾಮ ಪಂಚಾಯತಿಯಲ್ಲಿಯೇ (Grama Panchayat) ಅರ್ಜಿ ಹಾಕಿ ಈ ಸಹಾಯಧನವನ್ನು ಪಡೆಯಬಹುದಾಗಿದೆ. ರಾಜ್ಯದಲ್ಲಿ ಈ ಯೋಜನೆಯಡಿ ಸಹಸ್ರಾರು ರೈತರು, ಹೈನುಗಾರರು ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಾಣಿಕೆಯೊಂದಿಗೆ ಉತ್ತಮ ಆದಾಯ ಗಳಿಸುತ್ತಿದ್ದಾರೆ.
ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ
ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ ವರಗೆ ವೈಯಕ್ತಿಕ ಕಾಮಗಾರಿ ಪಡೆಯಲು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲಕ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಅವಕಾಶವನ್ನು ಬಳಸಿಕೊಂಡು ರೈತರು ಈ ಕೆಳಗಿನ ಕಾಮಗಾರಿಗಳಿಗೆ ಸಹಾಯಧನ ಪಡೆದುಕೊಳ್ಳಬಹುದಾಗಿದೆ.
ಹಸು, ಕುರಿ, ಕೋಳಿ, ಹಂದಿ ಸಾಕಾಣಿಕೆ ಮೂಲಕ ಸ್ವಯಂ ಉದ್ಯೋಗ ಮಾಡಲಿಚ್ಛಿಸುವವರು ಶೆಡ್ ನಿರ್ಮಾಣದಂತಹ ವೈಯಕ್ತಿಕ ಕಾಮಗಾರಿ, ಕೃಷಿ ಹೊಂಡ, ಕ್ಷೇತ್ರ ಬದು, ತೋಟಗಾರಿಕೆ ಬೆಳೆ, ರೇಷ್ಮೆ ಹಾಗೂ ಅರಣ್ಯ ಬೆಳೆಗಳು ಸೇರಿದಂತೆ ಇತರೆ ವೈಯಕ್ತಿಕ ಕಾಮಗಾರಿ ಪಡೆಯಬಹುದು.
ಕೊಟ್ಟಿಗೆ ನಿರ್ಮಾಣಕ್ಕೆ ಎಷ್ಟು ಸಹಾಯಧನ?
ದನದ ಶೆಡ್ ಅಥವಾ ಕೊಟ್ಟಿಗೆ ನಿರ್ಮಾಣಕ್ಕೆ ಈ ಮೊದಲು ಸಾಮಾನ್ಯ ವರ್ಗದ ರೈತರಿಗೆ 19,500 ರೂಪಾಯಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 43,000 ರೂಪಾಯಿ ಸಹಾಯಧನ ಸಿಗುತ್ತಿತ್ತು. ಈಗ ಪರಿಷ್ಕೃತ ಆದೇಶದಂತೆ ಎಲ್ಲ ವರ್ಗದವರಿಗೂ ಸಮನಾಗಿ 57,000 ರೂಪಾಯಿ ಸಹಾಯಧನ ನೀಡಲಾಗುತ್ತಿದೆ.
ಈ 57,000 ರೂಪಾಯಿ ಮೊತ್ತದಲ್ಲಿ ಸುಮಾರು 10,556 ರೂಪಾಯಿ ಕೂಲಿ ಮೊತ್ತವಾಗಿ ಸಿಗುತ್ತಿದ್ದು; ಉಳಿಕೆ 46,644 ರೂಪಾಯಿ ಈ ಯೋಜನೆಯಡಿ ಸಹಾಯಧನವಾಗಿ ಸಿಗುತ್ತದೆ. ಈ ಹಣವನ್ನು ದನದ ಕೊಟ್ಟಿಗೆ ನಿರ್ಮಾಣಕ್ಕೆ ಬೇಕಾಗುವ ಸಾಮಗ್ರಿಗಳ ಖರೀದಿ, ನಿರ್ಮಾಣ ವೆಚ್ಚಕ್ಕೆ ಬಳಸಿಕೊಳ್ಳಬಹುದು.
ದನದ ಕೊಟ್ಟಿಗೆ ನೆರವು ಪಡೆಯುವುದು ಹೇಗೆ?
ಈ ಯೋಜನೆಯ ಪ್ರಯೋಜನ ಪಡೆಯಲು ಬಹುಮುಖ್ಯವಾಗಿ ಜಾಬ್ ಕಾರ್ಡ್ ಹೊಂದಿರಬೇಕು. ನಿಮ್ಮೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನಮೂನೆ 1ನ್ನು ಭರ್ತಿ ಮಾಡಿ ಕುಟುಂಬದ 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲಾ ಸದಸ್ಯರ ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಇವುಗಳ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಜಾಬ್‌ಕಾರ್ಡ್ ಪಡೆಯಬಹುದು.
ಜಾಬ್ ಕಾರ್ಡ್ ಹೊಂದಿರುವ, 4ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಕೊಟ್ಟಿಗೆ ಸಹಾಯಧನ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಇಂಥವರು ಸ್ಥಳೀಯ ಪಶು ವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರ ಪಡೆದು ಅರ್ಜಿ ಸಲ್ಲಿಸಬಹುದು. ಈ ಕುರಿತ ಹೆಚ್ಚಿನ ಮಾಹಿತಿಗೆ ನಿಮ್ಮೂರ ಗ್ರಾಮ ಪಂಚಾಯತಿಗೆ ಭೇಟಿ, ಅಗತ್ಯ ವಿವರ ಪಡೆದುಕೊಳ್ಳಿ…
2 thoughts on “ದನದ ಕೊಟ್ಟಿಗೆ ನಿರ್ಮಾಣಕ್ಕೆ 57,000 ಸಹಾಯಧನ | ಹೀಗೆ ಅರ್ಜಿ ಸಲ್ಲಿಸಿ… Cattle Shed Mgnrega Subsidy”