EducationNews

Dasara Holiday Extension- ಮತ್ತೆ 10 ದಿನ ದಸರಾ ರಜೆ ವಿಸ್ತರಣೆ | ಅಕ್ಟೋಬರ್ 23ರಿಂದ ಶಾಲೆಗಳು ಆರಂಭ

Dasara Holiday Extension

Spread the love

ರಾಜ್ಯ ಸರ್ಕಾರ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಿದ್ದು; (Dasara Holiday Extension) ಅಕ್ಟೋಬರ್ 23ರಿಂದ ಶಾಲೆಗಳು ಪುನರ್ ಆರಂಭವಾಗಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ರಾಜ್ಯ ಸರ್ಕಾರ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 10 ದಿನಗಳ ಕಾಲ ರಜೆ ಘೋಷಣೆ ಮಾಡಿದ್ದು; ದಸರಾ ರಜೆ ಅಕ್ಟೋಬರ್ 18ರ ವರೆಗೂ ಮುಂದುವರೆಯಲಿದೆ. ಅಕ್ಟೋಬರ್ 19ರಿಂದ ನಾಲ್ಕು ದಿನ ದೀಪಾವಳಿ ರಜೆ ಇರಲಿದ್ದು; ಅಕ್ಟೋಬರ್ 23ರಿಂದ ಶಾಲೆಗಳು ಆರಂಭವಾಗಲಿವೆ.

ಇದನ್ನೂ ಓದಿ: Railway Recruitment 2025- ಪಿಯುಸಿ, ಪದವೀಧರರಿಗೆ ರೈಲ್ವೆ ಹುದ್ದೆಗಳು | ಸ್ಟೇಷನ್ ಮಾಸ್ಟರ್, ಟಿಕೆಟ್ ಕಲೆಕ್ಟರ್ ಸೇರಿ 10,620 ಹುದ್ದೆಗಳಿಗೆ ಅರ್ಜಿ ಆಹ್ವಾನ

ದಸರಾ ರಜೆ 10 ದಿನ ವಿಸ್ತರಣೆ

ಸಮೀಕ್ಷೆ ಕಾರ್ಯ ಸಮರ್ಪಕವಾಗಿ ನಡೆಯಲು, ಶಾಲೆ ಆರಂಭಗೊಂಡರೆ ಅದಕ್ಕಾಗಿ ಶಿಕ್ಷಕರಿಗೆ ಆಗುವ ಸಮಸ್ಯೆಗಳ ಕುರಿತು, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತೃತ್ವದಲ್ಲಿ ಶಿಕ್ಷಕ ಸಂಘದ ಮುಖಂಡರು ಹಾಗೂ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದಲ್ಲಿ ಇನ್ನೂ ಕನಿಷ್ಠ 10 ದಿನಗಳ ಕಾಲ ರಜೆ ನೀಡಬೇಕೆಂದು ಮನವಿ ಮಾಡಿದ್ದರು.

ಸಮೀಕ್ಷೆದಾರರ ಶಾಲೆ ಒಂದು ಕಡೆಯಿಂದ, ಸಮೀಕ್ಷೆ ನಡೆಯುವ ಸ್ಥಳ ಮತ್ತೊಂದೆಡೆ ಇದೆ. ಹೀಗಾಗಿ ಎರಡೂ ಕಾರ್ಯ ಒಟ್ಟಿಗೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಮನವರಿಕೆ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸಿ, ಅಕ್ಟೋಬರ್ 8 ರಿಂದ ಅಕ್ಟೋಬರ್ 18ರ ವರೆಗೆ ದಸರಾ ರಜೆ (Dasara holiday) ವಿಸ್ತರಿಸಿದ್ದಾರೆ.

ರಾಜ್ಯ ಸರ್ಕಾರ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಿದ್ದು; ಅಕ್ಟೋಬರ್ 23ರಿಂದ ಶಾಲೆಗಳು ಪುನರ್ ಆರಂಭವಾಗಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ...
Dasara Holiday Extension

ಇದನ್ನೂ ಓದಿ: E-Swathu- ದೀಪಾವಳಿ ನಂತರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ

ಸಮೀಕ್ಷಕರಿಗೆ 20 ಲಕ್ಷ ರೂ. ಪರಿಹಾರ

ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷಕರು ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದ್ದು; ಕೆಲವು ಕಡೆ ಸಾವುಗಳು ಕೂಡ ಸಂಭವಿಸಿವೆ. ಈಚೆಗೆ ಬಾಗಲಕೋಟೆ ಜಿಲ್ಲೆ ಬಾಗಲಕೋಟೆ ತಾಲ್ಲೂಕು ರಾಂಪೂರ ಬಳಿ ಸಮೀಕ್ಷೆಗೆ ತೆರಳಿದ ಶಿಕ್ಷಕಿಯೊಬ್ಬರು ಸೇರಿ ಮೂವರು ಮೃತಪಟ್ಟಿದ್ದರು.

ಹೀಗಾಗಿ ಜಾತಿ ಸಮೀಕ್ಷೆ ಮಾಡುವಾಗ ಮೃತಪಟ್ಟ ಸಮೀಕ್ಷಕರಿಗೆ ಪರಿಹಾರ ನೀಡಲು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಇದನ್ನೂ ಓದಿ: PUC Pass Head Constable – ಪಿಯುಸಿ ಪಾಸಾದವರಿಗೆ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು | 509 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 23ರಿಂದ ಶಾಲೆಗಳು ಆರಂಭ

ಜಾತಿ ಸಮೀಕ್ಷೆ ಹಿನ್ನಲೆಯಲ್ಲಿ ಮುಂದೂಡಲಾದ ದಸರಾ ರಜೆ ಅಕ್ಟೋಬರ್ 18ಕ್ಕೆ ಮುಕ್ತಾಯವಾಗಲಿದ್ದು; ಇನ್ನು ಅಕ್ಟೋಬರ್ 19 ರಿಂದ ಅಕ್ಟೋಬರ್ 22ರ ವರೆಗೆ ದೀಪಾವಳಿ ರಜೆಗಳಿವೆ. ಹೀಗಾಗಿ ಅಕ್ಟೋಬರ್ 23 ರಂದು ಶಾಲೆಗಳು ಪುನರಾರಂಭಗೊಳ್ಳಲಿವೆ.

ಇನ್ನು 10 ದಿನಗಳ ಕಾಲ ದಸರಾ ರಜೆ ವಿಸ್ತರಿಸಲು ಕಾರಣರಾದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ, ಶಿಕ್ಷಣ ಸಚಿವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅಭಿನಂದನೆ ಸಲ್ಲಿಸಿದ್ದಾರೆ.

Minimum Balance Rule Cancelled- ಇನ್ಮುಂದೆ ಈ ಬ್ಯಾಂಕ್ ಖಾತೆಗಳಲ್ಲಿ `ಕನಿಷ್ಠ ಬ್ಯಾಲೆನ್ಸ್’ ನಿಯಮ ರದ್ದು!


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!