Deepika Scholarship 2026 – ದೀಪಿಕಾ ವಿದ್ಯಾರ್ಥಿವೇತನ 2026: ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು | ಅರ್ಜಿ ಸಲ್ಲಿಸುವುದು ಹೇಗೆ?

Spread the love

WhatsApp Group Join Now
Telegram Group Join Now

ದೀಪಿಕಾ ವಿದ್ಯಾರ್ಥಿವೇತನ (Deepika Scholarship 2026) ಯೋಜನೆಯಡಿ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಅರ್ಹತೆ, ದಾಖಲೆಗಳು ಮತ್ತು ಲಿಂಕ್ ಇಲ್ಲಿದೆ…

ಬೆಂಗಳೂರು: ಉನ್ನತ ಶಿಕ್ಷಣ ಪಡೆಯಬೇಕೆಂಬ ಕನಸು ಕಂಡಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿನಿಯರಿಗೆ ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ ಭರ್ಜರಿ ಸಿಹಿಸುದ್ದಿ ನೀಡಿವೆ.

ಆರ್ಥಿಕ ಮುಗ್ಗಟ್ಟಿನಿಂದಾಗಿ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ (Deepika Scholarship Scheme) ಅಡಿಯಲ್ಲಿ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯ ವಿಶೇಷತೆ ಏನು? ಯಾರಿಗೆ ಈ ಹಣ ಸಿಗಲಿದೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: 1 BHK Flat ₹9.7 Lakhs- ಸರ್ಕಾರದಿಂದ ಕೇವಲ ₹9.7 ಲಕ್ಷಕ್ಕೆ 1 ಬಿಎಚ್‌ಕೆ ಫ್ಲಾಟ್ | ಅರ್ಜಿ ಆಹ್ವಾನ

ಏನಿದು Deepika Scholarship Scheme?

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜೀ ಫೌಂಡೇಶನ್ (Azim Premji Foundation – APF) ಜಂಟಿಯಾಗಿ ಈ ಯೋಜನೆಯನ್ನು ರೂಪಿಸಿವೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಓದಿ, ಈಗ ಪದವಿ (Degree) ಅಥವಾ ಡಿಪ್ಲೊಮಾ ಶಿಕ್ಷಣಕ್ಕೆ ಸೇರಿರುವ ವಿದ್ಯಾರ್ಥಿನಿಯರಿಗೆ ಇದು ವರದಾನವಾಗಿದೆ.

ಕಳೆದ 2025ರ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಪ್ರಸ್ತುತ 2025-26ನೇ ಸಾಲಿನ ಎರಡನೇ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಇದನ್ನೂ ಓದಿ: Karnataka CET Application Started 2026- ಸಿಇಟಿ ಅರ್ಜಿ ಸಲ್ಲಿಕೆೆ ಆರಂಭ | ಕೆಇಎ ಮಹತ್ವದ ಮಾಹಿತಿ ಇಲ್ಲಿದೆ…

Deepika Scholarship 2026
Deepika Scholarship 2026

What is the scholarship amount? – ವಿದ್ಯಾರ್ಥಿವೇತನದ ಮೊತ್ತ ಎಷ್ಟು?

ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಅವರ ಕೋರ್ಸ್ ಮುಗಿಯುವವರೆಗೆ ಪ್ರತಿ ವರ್ಷ ಆರ್ಥಿಕ ನೆರವು ಸಿಗಲಿದೆ. ಪ್ರತಿ ವರ್ಷಕ್ಕೆ ತಲಾ 30,000 ರೂ. ಆರ್ಥಿಕ ನೆರವು ದೊರೆಯುತ್ತದೆ.

  • ಪದವಿ ವಿದ್ಯಾರ್ಥಿನಿಯರಿಗೆ: 4 ವರ್ಷಗಳ ಕೋರ್ಸ್ ಆಗಿದ್ದರೆ ಒಟ್ಟು 1.20 ಲಕ್ಷ ರೂ. ಸಹಾಯಧನ.
  • ಡಿಪ್ಲೊಮಾ ವಿದ್ಯಾರ್ಥಿನಿಯರಿಗೆ: 2 ವರ್ಷಗಳ ಕೋರ್ಸ್ ಆಗಿದ್ದರೆ ಒಟ್ಟು 60,000 ರೂ. ಸಹಾಯಧನ.

ನೇರವಾಗಿ ವಿದ್ಯಾರ್ಥಿನಿಯರ ಬ್ಯಾಂಕ್ ಖಾತೆಗೆ ಈ ಹಣ ಜಮೆಯಾಗುವುದರಿಂದ ಮಧ್ಯವರ್ತಿಗಳ ಕಾಟವಿರುವುದಿಲ್ಲ.

ಇದನ್ನೂ ಓದಿ: KSCCF Recruitment 2026- ಪಿಯುಸಿ, ಪದವಿಧರರಿಗೆ ಸಹಕಾರ ಮಹಾ ಮಂಡಳಿಯಲ್ಲಿ ಉದ್ಯೋಗಾವಕಾಶ | ಅರ್ಜಿ ಆಹ್ವಾನ

Who is eligible to apply? – ಅರ್ಜಿ ಸಲ್ಲಿಸಲು ಯಾರು ಅರ್ಹರು?

ಸರ್ಕಾರಿ ಶಾಲಾ ಶಿಕ್ಷಣ: ಈ ವಿದ್ಯಾರ್ಥಿವೇತನ ಪಡೆಯಲು ವಿದ್ಯಾರ್ಥಿನಿಯರು ಕಡ್ಡಾಯವಾಗಿ 10ನೇ ತರಗತಿ ಮತ್ತು ಪಿಯುಸಿಯನ್ನು (12ನೇ ತರಗತಿ) ಕರ್ನಾಟಕದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿಯೇ ಪೂರೈಸಿರಬೇಕು.

ಪ್ರಸ್ತುತ ವ್ಯಾಸಂಗ: 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಅಥವಾ ಡಿಪ್ಲೊಮಾ ಕೋರ್ಸ್ಗೆ ದಾಖಲಾಗಿರಬೇಕು. ಪ್ರಸ್ತುತ ನೀವು ಸರ್ಕಾರಿ ಅಥವಾ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದರೂ ಪರವಾಗಿಲ್ಲ, ಆದರೆ ಹಿಂದಿನ ಶಿಕ್ಷಣ ಸರ್ಕಾರಿ ಸಂಸ್ಥೆಯಲ್ಲೇ ಆಗಿರಬೇಕು.

ಲಿಂಗ: ಇದು ಕೇವಲ ಹೆಣ್ಣು ಮಕ್ಕಳಿಗೆ (ವಿದ್ಯಾರ್ಥಿನಿಯರಿಗೆ) ಮಾತ್ರ ಸೀಮಿತವಾದ ವಿದ್ಯಾರ್ಥಿವೇತನ ಯೋಜನೆಯಾಗಿದೆ.

WhatsApp Group Join Now
Telegram Group Join Now

ಕೋರ್ಸ್’ಗಳು: ಬಿ.ಎ, ಬಿ.ಕಾಂ, ಬಿ.ಎಸ್ಸಿ ಮಾತ್ರವಲ್ಲದೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ (Medical) ವಿದ್ಯಾರ್ಥಿನಿಯರಿಗೂ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: LIC Bima Sakhi Yojana- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಎಲ್‌ಐಸಿ ಉದ್ಯೋಗ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶ

Documents required to apply – ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • 10ನೇ ಮತ್ತು 12ನೇ ತರಗತಿಯ ಅಂಕಪಟ್ಟಿಗಳು
  • ಆಧಾರ್ ಕಾರ್ಡ್
  • ಪ್ರಸ್ತುತ ವರ್ಷದ ಕಾಲೇಜು ಪ್ರವೇಶಾತಿ ರಶೀದಿ (Admission Receipt/ID Card)
  • ಬ್ಯಾಂಕ್ ಪಾಸ್‌ಬುಕ್ ಪ್ರತಿ
  • ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ

ಇದನ್ನೂ ಓದಿ: National Scholarship Portal- ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ: ವಿದ್ಯಾರ್ಥಿಗಳಿಗೆ 1.25 ಲಕ್ಷ ರೂ. ವರೆಗೆ ಸರ್ಕಾರದ ಆರ್ಥಿಕ ನೆರವು

How to apply? – ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿನಿಯರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಮೊದಲು ಅಜೀಂ ಪ್ರೇಮ್‌ಜೀ ಫೌಂಡೇಶನ್‌ನ ಅಧಿಕೃತ ವೆಬ್‌ಸೈಟ್‌ azimpremjifoundation.orgಗೆ ಭೇಟಿ ನೀಡಿ.

Deepika Scholarship 2026
Deepika Scholarship 2026

ಅಲ್ಲಿ ನೀಡಿರುವ ‘Deepika Scholarship 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿಯನ್ನು ಸಬ್‌ಮಿಟ್ ಮಾಡಿ.

ನೆನಪಿಡಿ: ಅರ್ಜಿ ಸಲ್ಲಿಸಲು 2026ರ ಜನವರಿ 31 ಕೊನೆಯ ದಿನಾಂಕವಾಗಿದೆ. ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಕೊನೆಯ ದಿನದವರೆಗೆ ಕಾಯದೆ ಈಗಲೇ ಅರ್ಜಿ ಸಲ್ಲಿಸುವುದು ಉತ್ತಮ.

ಇದನ್ನೂ ಓದಿ: 1.5 Lakh Kotak Kanya Scholarship- 1.5 ಲಕ್ಷ ರೂ. ಕೋಟಕ್ ಕನ್ಯಾ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಹಾಕಿ…

ಹಣದ ಕೊರತೆಯಿಂದಾಗಿ ರಾಜ್ಯದ ಯಾವುದೇ ಹೆಣ್ಣು ಮಗು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಆಶಯವಾಗಿದೆ. ನಿಮ್ಮ ಪರಿಚಯದ ಯಾರಾದರೂ ಸರ್ಕಾರಿ ಶಾಲೆಯಲ್ಲಿ ಓದಿ ಈಗ ಕಾಲೇಜು ಸೇರಿದ್ದರೆ, ಅವರಿಗೆ ಈ ಮಾಹಿತಿಯನ್ನು ತಕ್ಷಣ ತಲುಪಿಸಿ. ಒಂದು ಸಣ್ಣ ಮಾಹಿತಿ ಒಬ್ಬ ವಿದ್ಯಾರ್ಥಿನಿಯ ಭವಿಷ್ಯವನ್ನೇ ಬದಲಿಸಬಹುದು!

ಕೊನೆಯ ದಿನಾಂಕ ಜನವರಿ 31, 2026

SBI Digital Personal Loan- ಎಸ್‌ಬಿಐ ಡಿಜಿಟಲ್ ಪರ್ಸನಲ್ ಲೋನ್ | ₹35 ಲಕ್ಷದ ವರೆಗೆ ಸಾಲ ಸೌಲಭ್ಯ | ಸಂಪೂರ್ಣ ಮಾಹಿತಿ ಇಲ್ಲಿದೆ…


Spread the love
error: Content is protected !!