ದಿತ್ವಾ ಸೈಕ್ಲೋನ್ (Ditva Cyclone) ದಕ್ಷಿಣ ಭಾರತದಲ್ಲಿ ಆವಾಂತರ ಸೃಷ್ಟಿಸಿದೆ. ಹವಾಮಾನ ಇಲಾಖೆ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಗಾಳಿ, ಮಳೆ ಮುನ್ಸೂಚನೆ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ…
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ದಿತ್ವಾ ಚಂಡಮಾರುತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ.
ಶ್ರೀಲಂಕಾದಲ್ಲಿ ಅಪಾರ ಆಸ್ತಿಪಾಸ್ತಿ, ಜೀವಹಾನಿ ಮಾಡಿರುವ ದಿತ್ವಾ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿ ಮತ್ತು ತಮಿಳುನಾಡು-ಪುದುಚೇರಿ ಕರಾವಳಿ ತೀರದಲ್ಲಿದೆ. ಮುಂದಿನ 24 ಗಂಟೆಗಳಲ್ಲಿ ಈ ಚಂಡಮಾರುತವು ತಮಿಳುನಾಡು ಕರಾವಳಿಗೆ ಸಮಾನಾಂತರವಾಗಿ ಉತ್ತರ ದಿಕ್ಕಿಗೆ ಚಲಿಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ಚಂಡಮಾರುತದ ಪ್ರಭಾವದಿಂದಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು (ಗ್ರಾಮಾಂತರ ಮತ್ತು ನಗರ), ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
ಇನ್ನು, ಬಳ್ಳಾರಿ. ಚಿತ್ರದುರ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಇದನ್ನೂ ಓದಿ: KMF Maize Direct Purchase- ಕೆಎಂಎಫ್ನಿಂದ ಮೆಕ್ಕೆಜೋಳ ನೇರ ಖರೀದಿ ಆರಂಭ | ಕ್ವಿಂಟಾಲ್ಗೆ ₹2,400 ಬೆಲೆ ನಿಗದಿ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗಲಿದ್ದು, ಉತ್ತರ ಕನ್ನಡ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಕೆಲವು ಕಡೆಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣವಿರುತ್ತದೆ. ಗರಿಷ್ಠ ತಾಪಮಾನ 21ಲಿಅ ಮತ್ತು ಕನಿಷ್ಠ ತಾಪಮಾನ 18ಲಿಅ ಇರಲಿದೆ.
ಬೆಂಗಳೂರಿಗೆ ದಿತ್ವಾ ಸೈಕ್ಲೋನ್ ಎಫೆಕ್ಟ್
ದಿತ್ವಾ ಸೈಕ್ಲೋನ್ ರಾಜಧಾನಿ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಡಿಸೆಂಬರ್ 9ರ ವರೆಗೆ ಸಾಧಾರಣ ಮಳೆಯಾಗಲಿದೆ. ಜೊತೆಗೆ ಥಂಡಿ ವಾತಾವರಣ ಮುಂದುವರಿಯಲಿದೆ. ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದೆ.
ಕೆಲ ಪ್ರದೇಶಗಳಲ್ಲಿ ಮುಂಜಾನೆ ಮಂಜು ಬೀಳಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 22 ಡಿ.ಸೆ ಮತ್ತು 18 ಡಿ.ಸೆ. ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Karnataka Bank Personal Loan- ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ | ಕಡಿಮೆ ಬಡ್ಡಿಯಲ್ಲಿ ₹25 ಲಕ್ಷವರೆಗೆ ಸುಲಭ ಸಾಲ