ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
9.970 ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ | 10ನೇ, ಐಟಿಐ, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ

ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮುಂಗಾರು ಪೂರ್ವ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ನಾಲೈದು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಕೆಲ ಕಡೆ ಉತ್ತಮ ಮಳೆಯಾಗಿದೆ.
ಇನ್ನೂ ಒಂದು ವಾರ ಕರಾವಳಿಯ ಮೂರು ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ಏಪ್ರಿಲ್ 3ರ ವರೆಗೆ ಹಗುರ ಮಳೆಯಾಗಲಿದೆ.
ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?
ಮಾರ್ಚ್ 27ರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹವಾಮಾನ ವರದಿ ಪ್ರಕಾರ, ಕೊಡಗಿನ ನಾಪೋಕ್ಲುದಲ್ಲಿ ಅತಿ ಹೆಚ್ಚು 5 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೈಲಹೊಂಗಲ 4 ಸೆಂ.ಮೀ., ಶಿವಮೊಗ್ಗದ ಹಂಚದಕಟ್ಟೆ, ಸೋಮವಾರ ಪೇಟೆ, ಭಾಗಮಂಡಲ, ಹಾರಂಗಿಯಲ್ಲಿ ತಲಾ 3 ಸೆಂ.ಮೀ, ಶೃಂಗೇರಿ, ಬಾಳೆಹೊನ್ನೂರು, ಖಾನಾಪುರ, ಸಂಕೇಶ್ವರದಲ್ಲಿ ತಲಾ 2 ಸೆಂ.ಮೀ, ಬೆಳಗಾವಿ, ಗದಗ, ಕೊಣನೂರು ಹಾಗೂ ಹಗರಿಬೊಮ್ಮನಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.