Flipkart Foundation ನವರು ವಿಶೇಷ ವಿದ್ಯಾರ್ಥಿವೇತನ (Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ‘ಫ್ಲಿಪ್‌ಕಾರ್ಟ್ ಫೌಂಡೇಶನ್’ನವರು Flipkart Scholarship ಎಂಬ ವಿಶಿಷ್ಟ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ರೂ.50,000ರಷ್ಟು ಆರ್ಥಿಕ ನೆರವು ಒದಗಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಅವರ ಉನ್ನತ ಶಿಕ್ಷಣದ ಕನಸುಗಳನ್ನು ನೆರವೇರಿಸಿಕೊಳ್ಳಲು ನೆರವಾಗುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಸದರಿ ವಿದ್ಯಾರ್ಥಿವೇತನ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಬೇಕಾಗುವ ದಾಖಲೆಗಳೇನು? ಇತ್ಯಾದಿ ಮಾಹಿತಿ ಇಲ್ಲಿದೆ…
ವಿದ್ಯಾರ್ಥಿವೇತನದ ಮೊತ್ತ ವೆಷ್ಟು?
ಮೊದಲೇ ಹೇಳಿದಂತೆ ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್ ಯೋಜನೆಯಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗೆ ಒಮ್ಮೆಗೇ ರೂ.50,000ರಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ. ಹಣವನ್ನು ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ಈ ಹಣವನ್ನು ಕೆಳಗಿನ ಉದ್ದೇಶಗಳಿಗೆ ಉಪಯೋಗಿಸಬಹುದು:
- ಕಾಲೇಜು ಅಥವಾ ವಿಶ್ವವಿದ್ಯಾನಿಲಯ ಶುಲ್ಕಗಳ ಪಾವತಿ
- ಪಠ್ಯಪುಸ್ತಕಗಳು, ನೋಟ್ಸ್, ಲ್ಯಾಪ್‌ಟಾಪ್, ಇಂಟರ್ನೆಟ್ ವೆಚ್ಚಗಳು
- ಪ್ರವಾಸ ಹಾಗೂ ವಸತಿ ಖರ್ಚುಗಳು
- ಶೈಕ್ಷಣಿಕ ಕಾರ್ಯಾಗಾರಗಳು, ಇಂಟರ್ನ್ಶಿಪ್ ಪ್ರಯಾಣ ವೆಚ್ಚಗಳು
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಈ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೆಳಗಿನ ಅರ್ಹತೆಗಳನ್ನು ಪೂರೈಸಿರಬೇಕು:
- ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕು.
- ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕಿರಾಣಿ ಅಂಗಡಿ ಮಾಲೀಕರಾಗಿರಬೇಕು.
- ವಿದ್ಯಾರ್ಥಿಯು ಪ್ರಥಮ ವರ್ಷದ ಪದವಿ ಅಥವಾ ಇಂಜಿನಿಯರಿAಗ್ ಅಥವಾ ಸಮಾನ ಹಂತದ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರಬೇಕು.
- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳು ಅಥವಾ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
- ಕುಟುಂಬದ ವಾರ್ಷಿಕ ಆದಾಯ ₹5 ಲಕ್ಷದೊಳಗಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ ಹೇಗೆ?
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿಕೊಂಡು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು.
ಹಂತ 1: ಫ್ಲಿಪ್‌ಕಾರ್ಟ್ ಫೌಂಡೇಶನ್ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವನ್ನು ತೆರೆಯಿರಿ. (ಅದರ ಲಿಂಕ್ ಲೇಖನದ ಕೊನೆಯಲ್ಲಿದೆ ಗಮನಿಸಿ)
ಹಂತ 2: ಮೊದಲ ಬಾರಿಗೆ ಉಪಯೋಗಿಸುತ್ತಿದ್ದರೆ ‘Register’ ಕ್ಲಿಕ್ ಮಾಡಿ ಖಾತೆ ರಚಿಸಿಕೊಳ್ಳಬೇಕು. ಈಗಾಗಲೇ ಖಾತೆ ಹೊಂದಿದ್ದರೆ ‘Login’ ಬಟನ್ ಕ್ಲಿಕ್ ಮಾಡಿ ಲಾಗಿನ್ ಆಗಿ.
ಹಂತ 3: ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆಯುತ್ತದೆ. ಅಲ್ಲಿರುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಅಪ್‌ಲೋಡ್ ಮಾಡಿ. ಕೊನೆಯಲ್ಲಿ ‘Submit’ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
Cyclone Alert- ಸೈಕ್ಲೋನ್ ಎಫೆಕ್ಟ್ | ಕರ್ನಾಟಕದಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ
ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ
- ದ್ವಿತೀಯ ಪಿಯುಸಿ ಅಂಕಪಟ್ಟಿ
- ಪ್ರವೇಶ ಪತ್ರ ಅಥವಾ ಕಾಲೇಜು ದಾಖಲಾತಿ ಪತ್ರ
- ಪೋಷಕರ ಕಿರಾಣಿ ಅಂಗಡಿ ಮಾಲೀಕತ್ವದ ದಾಖಲೆ (ಉದಾ: ಜಿಎಸ್‌ಟಿ ಪ್ರಮಾಣಪತ್ರ)
- ಬ್ಯಾಂಕ್ ಪಾಸ್‌ಬುಕ್ ಪ್ರತಿಲಿಪಿ (IFSC ಕೋಡ್ ಸಮೇತ)
- ಪಾಸ್‌ಪೋರ್ಟ್ ಗಾತ್ರದ ನವೀಕರಿಸಿದ ಫೋಟೋ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ
ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್‌ಗಾಗಿ ಅರ್ಜಿ ಸಲ್ಲಿಸಲು 20-05-2025 ಕೊನೆಯ ದಿನವಾಗಿದೆ. ಇನ್ನು ಕೆಲವು ದಿನಗಳು ಮಾತ್ರ ಬಾಕಿಯಿದ್ದು, ಆಸಕ್ತ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅಂತಿಮ ದಿನಾಂಕದಂದು ತಾಂತ್ರಿಕ ತೊಂದರೆಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಉತ್ತಮ.
ವಿದ್ಯಾರ್ಥಿಯು ಫ್ಲಿಪ್‌ಕಾರ್ಟ್ ಯಾವುದೇ ಉದ್ಯೋಗಿ ಅಥವಾ ಸಂಬಂಧಿತ ಸಿಬ್ಬಂದಿಯ ಕುಟುಂಬ ಸದಸ್ಯನಾಗಿದ್ದರೆ ಈ ಯೋಜನೆಗೆ ಅರ್ಹರಾಗುವುದಿಲ್ಲ.ಆಯ್ಕೆ ಪ್ರಕ್ರಿಯೆ ಸಂಪೂರ್ಣವಾಗಿ ಅರ್ಜಿಯ ಪ್ರಮಾಣಿಕತೆ, ಅಂಕಗಳ ಶ್ರೇಣಿ ಮತ್ತು ಅರ್ಹತೆಗಳ ಆಧಾರದ ಮೇಲೆ ನಡೆಯುತ್ತದೆ.
ಅರ್ಜಿ ಸಲ್ಲಿಕೆ ಲಿಂಕ್- Apply Now
ಇಂತಹ ಹಲವಾರು ವಿದ್ಯಾರ್ಥಿವೇತನ ಯೋಜನೆಗಳು, ಉದ್ಯೋಗ ಅವಕಾಶಗಳು ಹಾಗೂ ಶೈಕ್ಷಣಿಕ ಸಹಾಯಧನಗಳ ಮಾಹಿತಿಗಾಗಿ ನಮ್ಮ ಲೇಖನಗಳನ್ನು ನಿರಂತರವಾಗಿ ಓದಿ, ಶೇರ್ ಮಾಡಿ.