ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ | ಯಾರಿಗೆಲ್ಲ ಲ್ಯಾಪ್‌ಟಾಪ್ ಸಿಗಲಿದೆ? Free Laptop of SSLC toppers

Spread the love

Free Laptop of SSLC toppers : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು (karnataka school examination and assessment board) 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ (Free Laptop) ನೀಡಲು ತಯಾರಿ ನಡಸಿದೆ. ಈ ಸಂಬ೦ಧ ಲ್ಯಾಪ್‌ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಿದ್ದು; ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು ಖರೀದಿಗಾಗಿ ನಿಗದಿಪಡಿಸಲಾಗಿದೆ. ಈಗಾಗಲೇ ಅಧಿಸೂಚನೆ ಹೊರಡಿಸಿದ್ದು; ಟೆಂಡರ್ ಸಲ್ಲಿಕೆಗೆ ಆಗಸ್ಟ್ 21, 2024 ಕೊನೆಯ ದಿನವಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಎಷ್ಟೆಷ್ಟು ಸಂಬಳ ಏರಿಕೆ ಆಗಲಿದೆ? ನಿಮ್ಮ ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ… 7th Pay Commission Calculation

ಏನಿದು ಉಚಿತ ಲ್ಯಾಪ್‌ಟಾಪ್ ಯೋಜನೆ?

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮೂಲಕ ರಾಜ್ಯ ಸರ್ಕಾರವು ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2010ರಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಮೊದಲು ಈ ಯೋಜನೆಯಡಿ ಡೆಸ್ಕ್’ಟಾಪ್‌ಗಳನ್ನು ನೀಡಲಾಗುತ್ತಿತ್ತು. ಇದೀಗ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ.

ಆರಂಭದಲ್ಲಿ ಜಿಲ್ಲಾ ಹಂತದಲ್ಲಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿತ್ತು. ಬಳಿಕ ವಿದ್ಯಾರ್ಥಿಗಳ ಒತ್ತಾಯದಿಂದ 2012ರಿಂದ ಇದನ್ನು ತಾಲ್ಲೂಕು ಮಟ್ಟಕ್ಕೂ ವಿಸ್ತರಿಸಲಾಗಿದೆ. ಕೋವಿಡ್ ಅವಧಿಯಲ್ಲಿ ಯೋಜನೆಗೆ ಸ್ವಲ್ಪ ಹಿನ್ನಡೆಯಾಗಿತ್ತು. ಇದೀಗ 2024ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ತಯಾರಿ ನಡೆದಿದೆ.

Free Laptop of SSLC toppers

ಇದನ್ನೂ ಓದಿ: PUC ಪಾಸಾದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ₹52,000 ಆರ್ಥಿಕ ನೆರವು | ಪಿಎಂ ಉಷಾ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಹಾಕಿ… PM Usha Scholarship 2024 Govt of india

ಯಾರಿಗೆಲ್ಲ ಉಚಿತ ಲ್ಯಾಪ್‌ಟಾಪ್ ಸಿಗಲಿದೆ?

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ 1, 2 ಹಾಗೂ 3ನೇ ಸ್ಥಾನ ಪಡೆದವರಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತದೆ. ಇವರನ್ನು ಹೊರತುಪಡಿಸಿ ಬ್ಲಾಕ್‌ಮಟ್ಟದಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೂ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.

ಪ್ರತೀ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿ ಎರಡ್ಮೂರು ತಿಂಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ ವಿತರಿಸಲಾಗುತ್ತದೆ. ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಟಾಪರ್’ಗಳು ಹಾಗೂ ಬ್ಲಾಕ್ ಮಟ್ಟದ ಟಾಪರ್’ಗಳು ಸೇರಿ ಸಾವಿರಾರು ವಿದ್ಯಾರ್ಥಿಗಳು ಲ್ಯಾಪ್’ಟಾಪ್ ಪಡೆಯಲಿದ್ದಾರೆ.

ಸದ್ಯಕ್ಕೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಸಂಬ೦ಧಿಸಿದ೦ತೆ 3.96 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಟರ್’ಗೆ ಅರ್ಜಿ ಆಹ್ವಾನಿಸಿದೆ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ ಸಿಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಶೀಘ್ರದಲ್ಲಿಯೇ ಲ್ಯಾಪ್‌ಟಾಪ್ ವಿತರಣೆ ಕುರಿತ ಅಧಿಕೃತ ಮಾಹಿತಿ ನೀಡಲಿದೆ.

ಉಚಿತ ಲ್ಯಾಪ್‌ಟಾಪ್ ವಿತರಣೆ ಕುರಿತ ನಿರಂತರ ಅಪ್ಡೇಟ್’ಗಾಗಿ ಮಾಹಿತಿಮನೆ ಫಾಲೋ ಮಾಡಿ…

ಇದನ್ನೂ ಓದಿ: SSLC ಪಾಸಾದವರಿಗೆ ಕರ್ನಾಟಕದಲ್ಲಿ 1,940 ಪೋಸ್ಟ್ ಮ್ಯಾನ್ ಹುದ್ದೆಗಳು | ಯಾವ ಜಿಲ್ಲೆಗೆ ಎಷ್ಟು ಹುದ್ದೆ? ಇಲ್ಲಿದೆ ಮಾಹಿತಿ… Karnataka Post Master Recruitment 2024


Spread the love
WhatsApp Group Join Now
Telegram Group Join Now

1 thought on “ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ | ಯಾರಿಗೆಲ್ಲ ಲ್ಯಾಪ್‌ಟಾಪ್ ಸಿಗಲಿದೆ? Free Laptop of SSLC toppers”

Leave a Comment

error: Content is protected !!