Free Nati Kolimari – ಗ್ರಾಮೀಣ ಮಹಿಳೆಯರಿಗೆ ಉಚಿತ ನಾಟಿ ಕೋಳಿಮರಿ ವಿತರಣೆಗೆ ಅರ್ಜಿ ಆಹ್ವಾನ
Free Nati Kolimari distribution scheme

ಗ್ರಾಮೀಣ ಮಹಿಳೆಯರಿಗೆ ನಾಟಿಕೋಳಿ ಮರಿಗಳನ್ನು (Free Nati Kolimari) ಸರಕಾರ ಸಂಪೂರ್ಣ ಉಚಿತವಾಗಿ ವಿತರಿಸುತ್ತಿದೆ. ಈ ಸೌಲಭ್ಯಕ್ಕೆ ಯಾರೆಲ್ಲ ಅರ್ಹರು? ಉಚಿತ ಕೋಳಿ ಮರಿ ಪಡೆಯುವುದು ಹೇಗೆ? ಪಶುಪಾಲನಾ ಇಲಾಖೆ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಹಿತ ಇತ್ಯಾದಿ ಮಾಹಿತಿ ಇಲ್ಲಿದೆ…
ಮುಖ್ಯಮಂತ್ರಿ ಅಮೃತ ಜೀವನ ಯೋಜನೆ, ಪಶುಭಾಗ್ಯ ಯೋಜನೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗಳಡಿ ಸಬ್ಸಿಡಿಯಲ್ಲಿ ಹಸು, ಕುರಿ-ಮೇಕೆಗಳನ್ನು ವಿತರಿಸುವ ಮಾದರಿಯಲ್ಲಿಯೇ ಸಂಪೂರ್ಣ ಉಚಿತ ಕೋಳಿ ಮರಿ ವಿತರಣೆ ಯೋಜನೆಯನ್ನು (Free Nati Koli distribution scheme) ರಾಜ್ಯ ಸರಕಾರ ಅನುಷ್ಠಾನಗೊಳಿಸಿದೆ. ರಾಜ್ಯದ ಅನೇಕ ಗ್ರಾಮದ ಸಾವಿರಾರು ಬಡ ಮಹಿಳೆಯರು ಈ ಯೋಜನೆಯ ಲಾಭ ಪಡೆದಿದ್ದಾರೆ.
ಕುಕ್ಕುಟೋದ್ಯಮವನ್ನು ಪ್ರೋತ್ಸಾಹಿಸಲು ಹಾಗೂ ಮಾರುಕಟ್ಟೆಯನ್ನು ವಿಸ್ತರಿಸಲು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ (Animal Husbandry & Veterinary Services) ಈ ಯೋಜನೆಯನ್ನು ಕೈಗೊಳ್ಳಲಾಗಿದೆ. ಇದೀಗ ಪಶು ಸಂಗೋಪನಾ ಇಲಾಖೆಯಿಂದ ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿ ಮಹಿಳೆಯರಿಗೆ ಕೋಳಿ ಮರಿಗಳ ವಿತರಣೆ ಮಾಡಲಾಗುತ್ತಿದೆ.
ಇದನ್ನೂ ಓದಿ: E-Swathu- ಇನ್ಮುಂದೆ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಕೇವಲ 15 ದಿನಗಳಲ್ಲಿ ಇ-ಸ್ವತ್ತು ವಿತರಣೆ | ಹೊಸ ಅಧಿಸೂಚನೆ ಬಿಡುಗಡೆ

ತಲಾ 20 ನಾಟಿಕೋಳಿ ಮರಿ ವಿತರಣೆ
ರಾಜ್ಯದ ಪ್ರತಿ ತಾಲೂಕುಗಳಿಗೆ ಗುರಿ ನಿಗದಿಪಡಿಸಲಾಗಿದ್ದು, ತಲಾ ಒಬ್ಬೊಬ್ಬ ಫಲಾನುಭವಿಗಳಿಗೆ ತಲಾ 20 ಕೋಳಿಮರಿಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ. ಪ್ರತಿ ಫಲಾನುಭವಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ.
ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ಭಾಗದ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘಗಳಲ್ಲಿರುವ ಮಹಿಳಾ ಸದಸ್ಯರು ಹಾಗೂ ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯೆಯರಿಗೆ ಆದ್ಯತೆ ನೀಡಲಾಗುತ್ತದೆ.
ಈ ಕೋಳಿ ಮರಿಗಳನ್ನು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಕುಕ್ಕುಟ ಕ್ಷೇತ್ರಗಳಲ್ಲಿ, ಬೆಂಗಳೂರಿನ ಹೆಸರಘಟ್ಟದ ಕೇಂದ್ರೀಯ ಕುಕ್ಕಟ ಅಭಿವೃದ್ಧಿ ಸಂಸ್ಥೆ, ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನಲ್ಲಿ ಕೋಳಿಮರಿಗಳನ್ನು ಉತ್ಪಾದಿಸಲಾಗುತ್ತದೆ.
ಇದನ್ನೂ ಓದಿ: Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | ಯಾವ ಬೆಳೆಗೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ಮಾಹಿತಿ
ಈ ಜಿಲ್ಲೆಯಲ್ಲಿ ಅರ್ಜಿ ಆಹ್ವಾನ
ಇದೀಗ ಹಾವೇರಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ದೇಶಿ ದೇಶಿ (ನಾಟಿ) ಕೋಳಿ ಮರಿಗಳನ್ನು ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಾವೇರಿ ತಾಲೂಕಿನಲ್ಲಿ ಒಟ್ಟು 99 ಫಲಾನುಭವಿಗಳ ಗುರಿ ಹೊಂದಿದ್ದು; ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವೆಂಬರ್ 10, ಸಂಜೆ 5 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಇದೇ ರೀತಿ ರಾಜ್ಯದ ವಿವಿದ ಜಿಲ್ಲೆ, ತಾಲ್ಲೂಕುಗಳಲ್ಲೂ ಉಚಿತ ನಾಟಿಕೋಳಿ ಮರಿ ವಿತರಣೆ ಕಾರ್ಯ ಆರಂಭವಾಗಿದ್ದು; ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಪಶು ಸಂಗೋಪನಾ ಇಲಾಖೆಯ ಜಿಲ್ಲಾವಾರು ಉಪ ನಿರ್ದೇಶಕರ ಸಂಪರ್ಕ ಸಂಖ್ಯೆ ಹಾಗೂ ವಿಳಾಸಕ್ಕಾಗಿ ಇಲ್ಲಿ ಒತ್ತಿ…



