Free Sewing Machine: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಕೊನೆಯ ದಿನಾಂಕ ಹಾಗೂ ಸೇವಾ ಸಿಂಧು ಲಿಂಕ್ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ…
ಮನೆಯಲ್ಲಿಯೇ ಕುಳಿತು ಹೊಲಿಗೆ ಕೆಲಸ ಮಾಡಿಕೊಂಡು ಆದಾಯ ಗಳಿಸಬೇಕು ಎನ್ನುವ ಮಹಿಳೆಯರಿಗೆ ಒಳ್ಳೆಯ ಅವಕಾಶವೊಂದು ಬಂದಿದೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿಗೆ ಉಚಿತ ಹೊಲಿಗೆ ಯಂತ್ರ (Free Sewing Machine) ನೀಡುವ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: Karnataka Rain Yellow Alert: ವಾಯುಭಾರ ಕುಸಿತ: 16 ಜಿಲ್ಲೆಗಳಲ್ಲಿ ಭರ್ಜರಿ ಮಳೆ | ಯೆಲ್ಲೊ ಅಲರ್ಟ್
ಟೈಲರಿಂಗ್ ಕೆಲಸ ಗೊತ್ತಿದ್ದು, ಸ್ವಂತವಾಗಿ ಹೊಲಿಗೆ ಯಂತ್ರ ಖರೀದಿಸಲು ಸಾಧ್ಯವಾಗದ ಮಹಿಳೆಯರಿಗೆ ಈ ಯೋಜನೆ ನೆರವಾಗಲಿದೆ. ಹೊಲಿಗೆ ಯಂತ್ರ ದೊರೆತರೆ ಮನೆಯಿಂದಲೇ ಕೆಲಸ ಆರಂಭಿಸಿ ಸ್ವಲ್ಪಸ್ವಲ್ಪವಾಗಿ ಆದಾಯ ಗಳಿಸಲು ಸಾಧ್ಯವಾಗುತ್ತದೆ. ಇದರಿಂದ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನವಾಗಿದೆ. ಹೀಗಾಗಿ ಅರ್ಹರು ಕೊನೆಯ ದಿನದವರೆಗೆ ಕಾಯದೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅರ್ಜಿ ಸಲ್ಲಿಸುವುದು ಉತ್ತಮ.
ಯಾರು ಅರ್ಜಿ ಸಲ್ಲಿಸಬಹುದು?
ಈ ಯೋಜನೆ ಎಲ್ಲರಿಗೂ ಅನ್ವಯಿಸುವುದಿಲ್ಲ. ಸರ್ಕಾರ ನಿಗದಿಪಡಿಸಿರುವ ಕೆಲವು ಅರ್ಹತಾ ನಿಯಮಗಳನ್ನು ಪೂರೈಸುವವರು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರ ವಯಸ್ಸು 18ರಿಂದ 50 ವರ್ಷದೊಳಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯಕ್ಕೂ ಮಿತಿ ನಿಗದಿಪಡಿಸಲಾಗಿದೆ. ಗ್ರಾಮೀಣ ಪ್ರದೇಶದ ಕುಟುಂಬಗಳ ವಾರ್ಷಿಕ ಆದಾಯ ರೂ.98,000ರೊಳಗಿರಬೇಕು. ಪಟ್ಟಣ ಪ್ರದೇಶದ ಕುಟುಂಬಗಳ ವಾರ್ಷಿಕ ಆದಾಯ ರೂ.1.20 ಲಕ್ಷದೊಳಗಿರಬೇಕು.

ಅರ್ಜಿದಾರರು ಟೈಲರಿಂಗ್ ಅಥವಾ ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ಅಂದರೆ ಕೇವಲ ಹೊಲಿಗೆ ಯಂತ್ರ ಬೇಕೆಂದು ಅರ್ಜಿ ಸಲ್ಲಿಸುವುದಕ್ಕಿಂತ, ಹೊಲಿಗೆ ವೃತ್ತಿಯನ್ನು ಮಾಡುತ್ತಿರುವ ಬಗ್ಗೆ ಅಗತ್ಯ ದೃಢೀಕರಣ ಹೊಂದಿರುವುದು ಮುಖ್ಯ.
ಸರ್ಕಾರಿ ನೌಕರರು ಅಥವಾ ಅವರ ಮೇಲೆ ಅವಲಂಬಿತರಾಗಿರುವ ಕುಟುಂಬದ ಸದಸ್ಯರಿಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಹಾಗೆಯೇ ನಿಗಮದ ಯಾವುದೇ ಯೋಜನೆಯಿಂದ ಈ ಹಿಂದೆ ಪ್ರಯೋಜನ ಪಡೆದಿದ್ದರೆ ಮತ್ತೆ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಇದನ್ನೂ ಓದಿ: Swavalambi Sarathi Yojana 2026: ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು?
ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಉತ್ತಮ. ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಜನ್ಮ ದಿನಾಂಕದ ದಾಖಲೆ, ಎಸ್ಎಸ್ಎಲ್ಸಿ ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣಪತ್ರ, ಶೈಕ್ಷಣಿಕ ಅರ್ಹತೆಯ ದಾಖಲೆ, ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿ ಬೇಕಾಗುತ್ತದೆ.
ಇದನ್ನೂ ಓದಿ: Mudra Loan: ಗ್ಯಾರಂಟಿ ಇಲ್ಲದೆ ₹20 ಲಕ್ಷ ಮುದ್ರಾ ಲೋನ್ | ಈ ಸಾಲ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ
ಜಾತಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೂಡ ಸಲ್ಲಿಸಬೇಕು. ಇದರ ಜೊತೆಗೆ ಅರ್ಜಿದಾರರು ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಸಂಬAಧಪಟ್ಟ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ (PDO) ಪಡೆದ ದೃಢೀಕರಣ ಪ್ರಮಾಣಪತ್ರವೂ ಅಗತ್ಯವಾಗಿರುತ್ತದೆ.
ದಾಖಲೆಗಳಲ್ಲಿ ಹೆಸರು, ಜನ್ಮ ದಿನಾಂಕ ಹಾಗೂ ಇತರ ಮಾಹಿತಿಗಳು ಒಂದಕ್ಕೊಂದು ಹೊಂದಿಕೆಯಾಗುತ್ತಿವೆಯೇ ಎನ್ನುವುದನ್ನು ಅರ್ಜಿ ಸಲ್ಲಿಸುವ ಮುನ್ನ ಪರಿಶೀಲಿಸಿಕೊಳ್ಳುವುದು ಒಳ್ಳೆಯದು.
ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹರು ಸೇವಾ ಸಿಂಧು (Seva Sindhu) ಪೋರ್ಟಲ್ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ತೊಂದರೆಯಾಗುವವರು ತಮ್ಮ ದಾಖಲೆಗಳೊಂದಿಗೆ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಬಳಿಕ ದೊರೆಯುವ ಅರ್ಜಿ ಸಂಖ್ಯೆ ಅಥವಾ ಸ್ವೀಕೃತಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಒಳ್ಳೆಯದು. ಮುಂದಿನ ದಿನಗಳಲ್ಲಿ ಅರ್ಜಿಯ ಸ್ಥಿತಿ ಪರಿಶೀಲಿಸಲು ಇದು ಸಹಾಯವಾಗಬಹುದು.
ಇದನ್ನೂ ಓದಿ: PhonePe Personal Loan- ₹5 ಲಕ್ಷದ ವರೆಗೆ ಫೋನ್ಪೇ ಪರ್ಸನಲ್ ಲೋನ್ | ಮೊಬೈಲ್ನಲ್ಲೇ ಅರ್ಜಿ ಹಾಕಿ…
ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಿ
ಹೊಲಿಗೆ ಕೆಲಸದಲ್ಲಿ ಆಸಕ್ತಿ ಹೊಂದಿರುವ ಹಾಗೂ ಈಗಾಗಲೇ ಟೈಲರಿಂಗ್ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಅರ್ಹ ಮಹಿಳೆಯರಿಗೆ ಈ ಯೋಜನೆ ಸ್ವಂತ ಉದ್ಯೋಗ ಆರಂಭಿಸಲು ನೆರವಾಗಬಹುದು. ಮನೆಯಲ್ಲಿಯೇ ಕುಳಿತು ಕೆಲಸ ಮಾಡುವ ಅವಕಾಶ ಸಿಗುವುದರಿಂದ ಕುಟುಂಬದ ಜವಾಬ್ದಾರಿಗಳೊಂದಿಗೆ ವೃತ್ತಿಯನ್ನೂ ಮುಂದುವರಿಸಲು ಅನುಕೂಲವಾಗುತ್ತದೆ.
ಇದನ್ನೂ ಓದಿ: Canara Bank Personal Loan- ಕೆನರಾ ಬ್ಯಾಂಕ್ ಪರ್ಸನಲ್ ಲೋನ್ | ಕಮ್ಮಿ ಬಡ್ಡಿದರದಲ್ಲಿ 10 ಲಕ್ಷ ರೂ. ವರೆಗೂ ಸಾಲ ಸೌಲಭ್ಯ
ಹೀಗಾಗಿ ಯೋಜನೆಯ ನಿಯಮಗಳಿಗೆ ಒಳಪಡುವವರು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಸೆಪ್ಟೆಂಬರ್ 30, 2026ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಸೇವಾ ಸಿಂಧು ಪೋರ್ಟಲ್ನಲ್ಲಿ ಯೋಜನೆಯ ಇತ್ತೀಚಿನ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳುವುದು ಸೂಕ್ತ.
- ಸಹಾಯವಾಣಿ ಸಂಖ್ಯೆಗಳು: 080-22374832, 8050770004, 8050770005
- ಅರ್ಜಿ ಲಿಂಕ್: Apply Now
- ಅಧಿಕೃತ ಜಾಲತಣ: dbcdc.karnataka.gov.in
Karnataka Rain Yellow Alert: ವಾಯುಭಾರ ಕುಸಿತ: 16 ಜಿಲ್ಲೆಗಳಲ್ಲಿ ಭರ್ಜರಿ ಮಳೆ | ಯೆಲ್ಲೊ ಅಲರ್ಟ್

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.