Free Sheep Goat Farming Training – ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ | ಊಟ, ವಸತಿಯೊಂದಿಗೆ 13 ದಿನಗಳ ಶಿಬಿರ
Free Sheep Goat Farming Training

ಉಚಿತ ಊಟ, ವಸತಿ ಸೌಕರ್ಯದೊಂದಿಗೆ 13 ದಿನಗಳ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ (Free Sheep Goat Farming Training) ಏರ್ಪಡಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ…
ಊಟ, ವಸತಿಯೊಂದಿಗೆ ಉಚಿತವಾಗಿ ಕುರಿ-ಮೇಕೆ ಸಾಕಾಣಿಕೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು; ಆಸಕ್ತ ಪುರುಷ ಹಾಗೂ ಮಹಿಳೆಯರು ಈ ಅವಕಾಶ ಬಳಿಕೊಳ್ಳಬಹುದಾಗಿದೆ.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 27-10-2025 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

18ರಿಂದ 45 ವಯಸ್ಸಿನ, ಕನ್ನಡ ಓದಲು, ಬರೆಯಲು ಬಲ್ಲ ಕರ್ನಾಟಕದ ಯಾವುದೇ ಜಿಲ್ಲೆಯ ಮಹಿಳೆಯರು ಮತ್ತು ಪುರುಷರು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಶಿಬಿರಾರ್ಥಿಗಳಿಗೆ ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ತರಬೇತಿಯ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 27-10-2025 ಸೋಮವಾರ ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 9686248369 ಗಳಿಗೆ ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
New BPL Ration Card- ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ರಾಜ್ಯ ಸರ್ಕಾರ ಹೇಳೊದೇನು?



