ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Tailoring Machine Scheme) ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ…
2025-26ನೇ ಸಾಲಿನಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಂತವಾಗಿ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಲು ನೆರವಾಗುವುದು ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನೂ ಉತ್ತಮಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಉಚಿತ ಉಪಕರಣ ವಿತರಣಾ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಈ ಪೈಕಿ ಇದೀಗ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನಿಸಿದ್ದು; ಅರ್ಜಿ ಸಲ್ಲಿಕೆಯ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಈ ಯೋಜನೆಗೆ ಯಾರು ಅರ್ಹರು?
ಈ ಯೋಜನೆಯ ಸೌಲಭ್ಯ ಪಡೆಯಲು ಮುಂದಾಗುವ ಮಹಿಳೆಯರು ಕೆಳಗಿನ ಅರ್ಹತಾ ಮಿತಿಗಳನ್ನು ಪೂರೈಸಿರಬೇಕು:
- ಜಾತಿ/ಪ್ರವರ್ಗ: ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿಗೆ ಸೇರಿದ ಮಹಿಳೆಯರು ಅರ್ಹ
- ಅರ್ಹವಲ್ಲದ ಸಮುದಾಯಗಳು: ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ, ಅರೆ ಅಲೆಮಾರಿ, ಲಿಂಗಾಯತ, ಒಕ್ಕಲಿಗ, ಮರಾಠ, ಹಟ್ಟಿಗೊಲ್ಲ, ಕಾಡುಗೊಲ್ಲ ಮತ್ತು ಅವರ ಉಪಸಮುದಾಯಗಳು
- ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 55 ವರ್ಷ ವಯೋಮಿತಿ ಹೊಂದಿರಬೇಕು
- ಆದಾಯ ಮಿತಿ: ಗ್ರಾಮಾಂತರ ಪ್ರದೇಶದವರಿಗೆ ವಾರ್ಷಿಕ ರೂ.98,000 ಒಳಗಿನ ಆದಾಯ ಇರಬೇಕು ಹಾಗೂ ನಗರ ಪ್ರದೇಶದವರಿಗೆ ವಾರ್ಷಿಕ ರೂ.1,20,000 ಮಿತಿಯ ಒಳಗಿನ ಆದಾಯ ಇರಬೇಕು
- ಇತರೆ ಶರತ್ತುಗಳು: ಈಗಾಗಲೇ ನಿಗಮದ ಯಾವುದೇ ಯೋಜನೆಯ ಸೌಲಭ್ಯ ಪಡೆದಿರಬಾರದು. ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗುರುತಿನ ಚೀಟಿ ಇತ್ಯಾದಿ ದಾಖಲೆಗಳನ್ನು ಹೊಂದಿರಬೇಕು
Ration Card Raddu- ರೇಷನ್ ಕಾರ್ಡ್ ರದ್ದು | ಸಿಎಂ ಖಡಕ್ ಸೂಚನೆ | ನಿಮ್ಮ ಕಾರ್ಡ್ ರದ್ದಾಗಿದೆಯಾ? ಈಗಲೇ ಚೆಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ
ಈ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಆಗಿದೆ. ಅರ್ಜಿದಾರರು ಕೆಳಗಿನ ಮಾರ್ಗಗಳಲ್ಲಿ ಅರ್ಜಿ ಸಲ್ಲಿಸಬಹುದು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಗ್ರಾಮಒನ್, ಕರ್ನಾಟಕಒನ್ ಅಥವಾ ಬೆಂಗಳೂರುಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಫೋಟೋ, ಬ್ಯಾಂಕ್ ಪಾಸ್‌ಬುಕ್ ನಕಲು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ
30-06-2024 – ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ಬಳಿಕ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಈ ಯೋಜನೆ, ಮಹಿಳೆಯರನ್ನು ಆತ್ಮನಿರ್ಭರವಾಗಿಸುವತ್ತ ದಿಟ್ಟ ಹೆಜ್ಜೆ ಆಗಿದ್ದು, ಕೇವಲ ಒಂದು ಯಂತ್ರವಲ್ಲ; ಅದು ಬದುಕನ್ನು ಬದಲಾಯಿಸುವ ಸಾಧನವಾಗಿದೆ. ಹಿಂದುಳಿದ ವರ್ಗದ ಅರ್ಹ ಮಹಿಳೆಯರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳಿಗೆ ಇಲ್ಲಿ ಒತ್ತಿ…