Ganga Kalyana Free Borewell Scheme : 2024-25ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ (Karnataka Ganga Kalyana Scheme) ಉಚಿತ ಬೋರ್‌ವೆಲ್’ಗಾಗಿ (Free Borewell) ರಾಜ್ಯ ಸರ್ಕಾರ ವಿವಿಧ ನಿಗಮಗಳ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಸಮಗ್ರ ಮಾಹಿತಿ ಇಲ್ಲಿದೆ…
ಸರಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಉಚಿತ ಬೋರ್‌ವೆಲ್ ಯೋಜನೆಗಳಿದ್ದು; ಈ ಪೈಕಿ ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು ನೀರಾವರಿ ಅನುಕೂಲ ಹೊಂದುವ ಮೂಲಕ ಸುಸ್ಥಿರ ಆದಾಯ ಗಳಿಸುತ್ತಿದ್ದಾರೆ.
ಎಷ್ಟು ಸಹಾಯಧನ ಸಿಗುತ್ತದೆ?
ಈ ಯೋಜನೆಯಡಿ ಅಂತರ್ಜಲ ಕಡಿಮೆಯಾಗಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಘಟಕದ ವೆಚ್ಚವನ್ನು 4.75 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಇದರಲ್ಲಿ ವಿದ್ಯುದೀಕರಣ ಸೇರಿ 4.25 ಲಕ್ಷ ಸಹಾಯಧನ. ಅವಶ್ಯವಿದ್ದರೆ ಶೇ.4ರ ಬಡ್ಡಿ ದರದಲ್ಲಿ 50,000 ರೂಪಾಯಿ ಸಾಲವನ್ನು ಮಂಜೂರು ಮಾಡಲಾಗುತ್ತದೆ.
ರಾಜ್ಯದ ಉಳಿದ ಜಿಲ್ಲೆಗಳ ಘಟಕ ವೆಚ್ಚವನ್ನು 3.75 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಇದರಲ್ಲಿ ವಿದ್ಯುದೀಕರಣ ಸೇರಿ 3.25 ಲಕ್ಷ ಸಹಾಯಧನ. ಅವಶ್ಯವಿದ್ದರೆ ಶೇ.4ರ ಬಡ್ಡಿ ದರದಲ್ಲಿ 50,000 ರೂಪಾಯಿ ಸಾಲವನ್ನು ಮಂಜೂರು ಮಾಡಲಾಗುತ್ತದೆ.
ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರಿ ಸೌಲಭ್ಯ ಒದಗಸಲು ಅವಕಶವಿರುತ್ತದೆ.
ಈ ಯೋಜನೆಯ ಮಾನದಂಡವೇನು?
ಗಂಗಾಕಲ್ಯಾಣ ನೀರಾವರಿ ಯೋಜನೆಯ ಪ್ರಯೋಜನ ಪಡೆಯಲು ಯಾವುದೇ ನೀರಾವರಿ ಸೌಲಭ್ಯ ಹೊಂದಿಲ್ಲದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಈ ಜಮೀನು ಒಂದೇ ಸ್ಥಳದಲ್ಲಿರಬೇಕು.
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಯ ರೈತರಿಗೆ ಕನಿಷ್ಠ 1 ಎಕರೆ ನಿಗದಿಪಡಿಸಲಾಗಿದೆ. ಅರ್ಜಿದಾರ ಯಾವುದೇ ಕೇಂದ್ರ-ರಾಜ್ಯ ಸರ್ಕಾರದ ಹುದ್ದೆಯಲ್ಲಿ ಇರಬಾರದು. ವಾರ್ಷಿಕ ವರಮಾನ ಗ್ರಾಮಾಂತರದವರಿಎ 98,000 ರೂಪಾಯಿ ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂಪಾಯಿಗಳ ಮಿತಿಯಲ್ಲಿರಬೇಕು.
ಆಧಾರ್ ನಂಬರ್ ಜೋಡಣೆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಈಗಾಗಲೇ ಆಯಾ ಜಾತಿ ಸಮುದಾಯದ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್
- ಸಣ್ಣ/ಅತಿ ಸಣ್ಣ ರೈತರ ದೃಢೀಕರಣ ಪತ್ರ
- ರೈತರ ಈIಆ ಸಂಖ್ಯೆ
- ಜಮೀನಿನ ಪಹಣಿ (RTC)
ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು?
ರಾಜ್ಯದ ವಿವಿಧ ಜಾತಿ ಸಮುದಾಯಗಳಿಗೆ ಮೀಸಲಾಗಿರುವ ಅಭಿವೃದ್ಧಿ ನಿಗಮ ನಿಯಮಿತಗಳಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು; ಈ ಕೆಳಕಂಡ ಜಾತಿ, ಸಮುದಾಯದ ರೈತರು ಈ ಯೋಜನೆಯಡಿ ಅರ್ಜಿ ಸಲ್ಲಿಬಹುದುದಾಗಿದೆ:
- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಹಿಂದುಳಿದ ವರ್ಗದ ರೈತರು
- ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ವೀರಶೈವ-ಲಿಂಗಾಯತ ರೈತರು
- ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಒಕ್ಕಲಿಗ ಸಮುದಾಯದ ರೈತರು
- ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ವಿಶ್ವಕರ್ಮ ಸಮುದಾಯದ ರೈತರು
- ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಉಪ್ಪಾರ ಸಮುದಾಯದ ರೈತರು
- ನಿಜಗುಣ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಅಂಬಿಗರ ಸಮುದಾಯದ ರೈತರು
- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಸವಿತಾ ಸಮುದಾಯದ ರೈತರು
- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಮಡಿವಾಳ ಸಮುದಾಯದ ರೈತರು
- ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಕಾಡುಗೊಲ್ಲ ಸಮುದಾಯದ ರೈತರು
- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೊಳಪಡುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ರೈತರು
ಎಲ್ಲಿ ಅರ್ಜಿ ಸಲ್ಲಿಸಬೇಕು?
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
- ಸೇವಾಸಿಂಧು ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 31-08-2024.
- ಅಂಬಿಗ ಹಾಗೂ ಒಕ್ಕಲಿಗ ಸಮುದಾಯದ ರೈತರು ಅರ್ಜಿ ಸಲ್ಲಿಸಲು 30-08-2024 ಕೊನೆಯ ದಿನವಾಗಿದೆ.
- ಈ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಲಿಂಕ್ : Apply Now
ಇದನ್ನೂ ಓದಿ: ದನದ ಕೊಟ್ಟಿಗೆ ನಿರ್ಮಾಣಕ್ಕೆ 57,000 ಸಹಾಯಧನ | ಹೀಗೆ ಅರ್ಜಿ ಸಲ್ಲಿಸಿ… Cattle Shed Mgnrega Subsidy
1 thought on “ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಪಡೆಯಲು ರೈತರಿಂದ ಅರ್ಜಿ ಆಹ್ವಾನ | ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ | ಅರ್ಹ ರೈತರ ಪಟ್ಟಿ ಇಲ್ಲಿದೆ… Ganga Kalyana Free Borewell Scheme”