ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Ganga Kalyana Uchita Borewell) ಸೌಲಭ್ಯ ಕಲ್ಪಿಸಲು ವಿವಿಧ ಜಾತಿ, ಸಮುದಾಯಗಳ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…
ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಯಡಿ ಉಚಿತ ಕೊಳವೆ ಬಾವಿ ಕೊರೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ನಿಗದಿತ ಅವಧಿಯೋಳಗೆ ಆನ್‌ಲೈನ್ ಅರ್ಜೀ ಸಲ್ಲಿಸುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಸಹಾಯಧನ (Subsidy) ಎಷ್ಟು ಸಿಗಲಿದೆ?
ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು.
ಬೆAಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಯೋಜನೆಗೆ ಘಟಕವೆಚ್ಚ 4.25 ಲಕ್ಷ ರೂಪಾಯಿ ಸಹಾಯಧನ (Subsidy) ಹಾಗೂ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂ. ಶೇ.ರರ ಬಡ್ಡಿದರದಲ್ಲಿ ಸಾಲ ಒದಗಿಸಲಾಗುವುದು.
ಉಳಿದ ಜಿಲ್ಲೆಗಳಿಗೆ ಘಟಕವೆಚ್ಚ 3.25 ಲಕ್ಷ ರೂಪಾಯಿ ಸಹಾಯಧನ (ಸಬ್ಸಿಡಿ) ಸಿಗುತ್ತದೆ. ಈ ಮೊತ್ತದಲ್ಲಿ ನೀರಾವರಿ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂಪಾಯಿ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
Record Rainfall May 2025-ಒಂದು ವಾರ ಮಳೆ ಬಿಡುವು | ಮೇ ತಿಂಗಳು ರಾಜ್ಯದಲ್ಲಿ 54 ವರ್ಷದಲ್ಲೇ ದಾಖಲೆಯ ಮಳೆ
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು
ಅರ್ಜಿದಾರರು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಈ ಕೆಳಕಂಡ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
- ಆಯಾ ಜಾತಿ ಮತ್ತು ಇದರ ಉಪಜಾತಿಗಳಿಗೆ ಸೇರಿರುವುದಕ್ಕೆ ಸಂಬಂಧಿಸಿದ ತಾಲ್ಲೂಕು ತಹಶಿಲ್ದಾರ್‌ರಿಂದ ನಿಗದಿತ ನಮೂನೆಯಲ್ಲಿ ಪಡೆದ ಜಾತಿ/ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ.
- ಅರ್ಜಿದಾರರ ವಾಸದ ಪುರಾವೆಗಾಗಿ ಸಕ್ಷಮ ಪ್ರಾಧಿಕಾರಿಗಳು ನೀಡಿದ ಪಡಿತರ ಚೀಟಿ / ಚುನಾವಣಾ ಗುರುತಿನ ಚೀಟಿ / ಆಧಾರ ಕಾರ್ಡ್ ದೃಢೀಕೃತ ಪ್ರತಿ ಒದಗಿಸಬೇಕು.
- ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 3 ಫೋಟೋಗಳು, ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರುವ ಬಗ್ಗೆ ಕಂದಾಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
- ಅರ್ಜಿದಾರರು ಹೊಂದಿರುವ ಜಮೀನಿನ ಕಂದಾಯ ದಾಖಲೆಗಳಾದ ಆರ್.ಟಿ.ಸಿ/ ಪಹಣಿ, ಖಾತಾ ಉದ್ದರಣೆ, ಪಟ್ಟಾ ಪುಸ್ತಕ, ಮುಟೇಶನ್, ಇ.ಸಿ. ವಂಶವೃಕ್ಷ, ಜಮೀನಿನ ಚೆಕ್ ಬಂದಿ.
- ಅರ್ಜಿದಾರರು ನೀರಾವರಿ ಸೌಲಭ್ಯ ಹೊಂದಿಲ್ಲದೇ ಇರುವುದಕ್ಕೆ ಸ್ವಯಂ ಘೋಷಣೆ ಪತ್ರ.
- ಘಟಕ ವೆಚ್ಚ 4.75 ಲಕ್ಷಕ್ಕಿಂತ ಹೆಚ್ಚಾದಲ್ಲಿ ಸಾಲ ಪಡೆಯುವ ಬಗ್ಗೆ ಫಲಾನುಭವಿಯಿಂದ ಒಪ್ಪಿಗೆ ಪತ್ರ.

ಯಾರಿಗೆ ಈ ಯೋಜನೆಯ ಲಾಭ ಸಿಗಲಿದೆ?
ಈ ಯೋಜನೆಯ ಪ್ರಯೋಜನವನ್ನು ರಾಜ್ಯದ ಹಿಂದುಳಿದ ವರ್ಗ, ವಿಶೇಷವಾಗಿ ವಿವಿಧ ಜಾತಿ ಸಮುದಾಯಗಳ ಸಣ್ಣ ಮತ್ತು ಅತಿ ಸಣ್ಣ ರೈತರು ಪಡೆದುಕೊಳ್ಳಬಹುದು. ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುವ ಪ್ರಮುಖ ಜಾತಿಗಳು ಮತ್ತು ನಿಗಮಗಳ ಪಟ್ಟಿ ಈ ಕೆಳಗಿನಂತಿದೆ:
- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
- ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ
- ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ
- ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ
Ration Card Raddu- ರೇಷನ್ ಕಾರ್ಡ್ ರದ್ದು | ಸಿಎಂ ಖಡಕ್ ಸೂಚನೆ | ನಿಮ್ಮ ಕಾರ್ಡ್ ರದ್ದಾಗಿದೆಯಾ? ಈಗಲೇ ಚೆಕ್ ಮಾಡಿ
ಅರ್ಹತಾ ಮಾನದಂಡಗಳು
- ಅರ್ಜಿದಾರರು ತಮ್ಮ ಜಾತಿಗೆ ಸಂಬಂಧಿಸಿದ ನಿಗಮ ವ್ಯಾಪ್ತಿಗೆ ಸೇರಿದವರಾಗಿರಬೇಕು.
- ಗ್ರಾಮಾಂತರ ಪ್ರದೇಶದವರಿಗೆ ವಾರ್ಷಿಕ ಆದಾಯ ₹98,000ಕ್ಕೆ ಮಿತವಾಗಿರಬೇಕು.
- ನಗರ ಪ್ರದೇಶದವರಿಗೆ ವಾರ್ಷಿಕ ಆದಾಯ ₹1,20,000ಕ್ಕಿಂತ ಕಡಿಮೆಯಿರಬೇಕು.
- ಅರ್ಜಿದಾರರು 1 ರಿಂದ 5 ಎಕರೆ ನಡುವಿನ ಭೂಮಿಯನ್ನು ಹೊಂದಿರಬೇಕು (ಜಿಲ್ಲೆಯ ಪ್ರಕಾರ).
- ಅರ್ಜಿದಾರರು ತಮ್ಮ ಭೂಮಿಯಲ್ಲಿ ಯಾವುದೇ ನೀರಾವರಿ ಮೂಲವಿಲ್ಲ ಎಂಬುದು ನಿರ್ಧಾರವಾಗಿರಬೇಕು.
- ನಿಗಮದ ಬೇರೆ ಯಾವುದೇ ಯೋಜನೆಯಿಂದ ಈ ಹಿಂದೆ ನೆರವು ಪಡೆದಿಲ್ಲವೆಂದು ದೃಢಪಡಿಸಬೇಕು.
- Farmer’s FRUIT ID ಮತ್ತು ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.
- ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಅಗತ್ಯವಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು?
ಗಂಗಾಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಹ ರೈತರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಜನ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ದಿನಾಂಕ
ಸಮಾಜ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ಸುಮಾರು 10 ನಿಗಮಗಳ ವ್ಯಾಪ್ತಿಗೆ ಒಳಪಡುವ ರೈತರು ಗಂಗಾಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ಪಡೆಯಲು ಜೂನ್ 30, 2025 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ: 080-22374832, 8050770004, 8050770005