Gowri Ganesha Festival Rain Alert- ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಳ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಗೌರಿ-ಗಣೇಶ ಹಬ್ಬದ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ ಇದೆ (Gowri Ganesha Festival Rain Alert) ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ…
ಕಳೆದ ಒಂದೆರಡು ದಿನಗಳಿಂದ ರಾಜ್ಯದಲ್ಲಿ ಕೊಂಚ ಕಡಿಮೆಯಾದ್ದ ಮಳೆ ಅಬ್ಬರ ಗೌರಿ-ಗಣೇಶ ಹಬ್ಬದ ನಂತರ ತೀವ್ರಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಾಳೆ ಆಗಸ್ಟ್ 27ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರ್ನಾಟಕದ ಕರಾವಳಿ ಹಾಗೂ ಉತ್ತರ-ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Indian Meteorological Department) ನೀಡಿದೆ. 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
PhonePe New Features- ಫೋನ್‌ಪೇನಲ್ಲಿ ಪೇಮೆಂಟ್ ಮಾಡೋದು ಇನ್ನೂ ಸುಲಭ | ಹೊಸ ಫೀಚರ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ…
ಆಗಸ್ಟ್ 30 ರಿಂದ ಹುಬ್ಬ ಮಳೆ ಅಬ್ಬರ
ಕಳೆದ ಆಗಸ್ಟ್ 17 ರಿಂದ ಆರಂಭವಾಗಿರುವ ಮಘೆ ಮಳೆ ಇದೇ 29ಕ್ಕೆ ಮುಕ್ತಾಯವಾಗಲಿದೆ. ಆಗಸ್ಟ್ 30 ರಿಂದ ಹುಬ್ಬ ಮಳೆ ನಕ್ಷತ್ರ (Hubba Male Forecast) ಆರಂಭವಾಗಲಿದ್ದು; ಸೆಪ್ಟೆಂಬರ್ 12ರ ವರೆಗೂ ಮುಂದುವರೆಯಲಿದೆ. ಇದು ಕೂಡ ಉತ್ತಮ ಮಳೆಯಾಗಲಿದ್ದು; ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರತೆ ಪಡೆದುಕೊಳ್ಳುವ ಸಂಭವವಿದೆ.
ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ತೀವ್ರ ಮಳೆ ಸಾಧ್ಯತೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ವಿಜಯಪುರ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಆಗುಂಬೆ, ಸಿದ್ದಾಪುರ, ಲೋಂಡಾ, ಕದ್ರಾ, ಗೇರುಸೊಪ್ಪ, ಕ್ಯಾಸಲ್‌ರಾಕ್, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಶೃಂಗೇರಿ, ಹೊನ್ನಾವರ, ಕೋಲಾರ, ಸಿಂಧನೂರು ಹಾಗೂ ದಾವಣಗೆರೆಯಲ್ಲಿ ಭಾನುವಾರ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.