ಗೃಹಲಕ್ಷ್ಮಿ ಜೂನ್-ಜುಲೈ ಎರಡು ಕಂತಿನ ಹಣ ಒಟ್ಟಿಗೆ ಜಮಾ | ಈ ದಿನ ಸಿಗುತ್ತೆ ₹4000 Gruha Lakshmi Scheme Money Deposit

Spread the love

Gruha Lakshmi Scheme Money Deposit : ಗೃಹಲಕ್ಷ್ಮಿ ಯೋಜನೆ (Gruha Lakshmi Scheme Karnataka) ಕುರಿತು ರಾಜ್ಯದಲ್ಲಿ ಹಲವು ವದಂತಿಗಳು ಹರಡುತ್ತಿದ್ದು; ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ತಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Group Join Now
Telegram Group Join Now

ಹಾಗಿದ್ದರೆ ಈಗಾಗಲೇ ಬಾಕಿ ಉಳಿದಿರುವ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ? ಎರಡೂ ತಿಂಗಳ ಹಣ ಒಟ್ಟಿಗೇ ಜಮಾ ಆಗುತ್ತದಾ? ಎಂಬ ಗೊಂದಲ ದಿನೇ ದಿನೆ ಮಹಿಳೆಯರಲ್ಲಿ ಹೆಚ್ಚಾಗುತ್ತಿದ್ದು; ಈ ಬಗ್ಗೆಯೂ ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ 50 ಲಕ್ಷ ರೇಷನ್ ಕಾರ್ಡ್ ರದ್ದು | ನಿಮ್ಮ ಕಾರ್ಡ್ ಈ ಪಟ್ಟಿಯಲ್ಲಿದೆಯಾ? 50 lakh ration card cancellation

ಹಣ ಬಿಡುಗಡೆ ವಿಳಂಬಕ್ಕೆ ಕಾರಣ…

2023ರ ಆಗಸ್ಟ್ ತಿಂಗಳಿನಿ೦ದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿದೆ. ಈ ಯೋಜನೆಯಡಿ ಸುಮಾರು 1.18 ಕೋಟಿ ಮಹಿಳೆಯರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ 10 ತಿಂಗಳಿನಿ೦ದ ಈ ಯೋಜನೆಯ ಹಣ ಬಹುತೇಕ ಮಹಿಳೆಯರನ್ನು ತಲುಪಿದೆ.

ಕಳೆದ ಜೂನ್ ತಿಂಗಳಲ್ಲಿ ಬರಬೇಕಿದ್ದ 11ನೇ ಕಂತು ಹಾಗೂ ಜುಲೈ ತಿಂಗಳ 12ನೇ ಕಂತಿನ ಹಣ ಜಮೆಯಲ್ಲಿ ಅಡಚಣೆ ಉಂಟಾಗಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣದಿಂದ 11 ಮತ್ತು 12ನೇ ಕಂತಿನ ಹಣ ಬಿಡುಗಡೆ ಆಗುವುದರಲ್ಲಿ ತಡವಾಗಿದೆ ಎನ್ನಲಾಗುತ್ತಿದೆ.

Gruha Lakshmi Scheme Money Deposit

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಎಷ್ಟೆಷ್ಟು ಸಂಬಳ ಏರಿಕೆ ಆಗಲಿದೆ? ನಿಮ್ಮ ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ… 7th Pay Commission Calculation

ಒಟ್ಟಿಗೇ 4000 ರೂಪಾಯಿ ಜಮಾ

ಇದೀಗ ಹಣಕ್ಕಾಗಿ ಎದುರು ನೋಡುತ್ತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು; ಆಗಸ್ಟ್ ಮೊದಲ ವಾರವೇ ಜೂನ್, ಜುಲೈ ತಿಂಗಳ ಎರಡು ಕಂತಿನ 4,000 ರೂಪಾಯಿ ಒಟ್ಟಿಗೇ ಜಮಾ ಮಾಡಲಿದೆ ಎಂಬ ಮಾಹಿತಿ ನೀಡಿದೆ.

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿ೦ದ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ಮೊದಲ ವಾರವೇ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 1,29,465 ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ | 10 ದಿನಗಳಲ್ಲಿ ಜೂನ್-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ Gruha Lakshmi Scheme Karnataka

ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವುದಿಲ್ಲ

ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಹಣ ಮೂರ್ನಾಲ್ಕು ತಿಂಗಳಿನಿAದ ಬರುತ್ತಿಲ್ಲ ಎನ್ನುವುದು ಕೇವಲ ವದಂತಿಯಷ್ಟೇ. ಕಳೆದ ಮೇ ತಿಂಗಳಲ್ಲಿ ಗೃಹಲಕ್ಷ್ಮಿ ಹಣವನ್ನು ಹಾಕಿದ್ದೇವೆ. 11, 12 ಕಂತಿನ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷ ಎದುರಾಗಿದ್ದು, ಈಗಾಗಲೇ ಡಿಬಿಟಿ ಪುಶ್ ಮಾಡಲಾಗುತ್ತಿದೆ.

ಮುಂದಿನ 8-10 ದಿನದೊಳಗೆ ಗೃಹಲಕ್ಷ್ಮಿ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು. ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿ LKG-UKG ಟೀಚರ್ ನೇಮಕಾತಿ: ಹೇಗೆ ನಡೆಯಲಿದೆ ನೇಮಕ ಪ್ರಕ್ರಿಯೆ? ಸಚಿವರ ಮಹತ್ವದ ಮಾಹಿತಿ… Anganwadi LKG UKG Teacher Recruitment 2024


Spread the love
WhatsApp Group Join Now
Telegram Group Join Now

1 thought on “ಗೃಹಲಕ್ಷ್ಮಿ ಜೂನ್-ಜುಲೈ ಎರಡು ಕಂತಿನ ಹಣ ಒಟ್ಟಿಗೆ ಜಮಾ | ಈ ದಿನ ಸಿಗುತ್ತೆ ₹4000 Gruha Lakshmi Scheme Money Deposit”

Leave a Comment

error: Content is protected !!