Gruhalakshmi Payment Stopped- 2.13 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್ | ಮಹಿಳಾ ಸಚಿವರ ಮಹತ್ವದ ಮಾಹಿತಿ

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಾಗಿದ್ದ 2.13 ಲಕ್ಷ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ ಎಂದು ಮಹಿಳಾ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ…
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ನಿನ್ನೆ (ಆಗಸ್ಟ್ 22) ಸದನದಲ್ಲಿ ಮಹತ್ವದ ಚರ್ಚೆ ನಡೆದಿದ್ದು; ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಲಕ್ಷಾಂತರ ಮಹಿಳೆಯರಿಗೆ ಹಣ ಬಂದ್ ಮಡಲಾಗಿದೆ ಎಂದು ತಿಳಿಸಿದ್ದಾರೆ.
ಅನರ್ಹ ಫಲಾನುಭವಿಗಳ ಶೋಧ
ಈ ಹಿಂದೆ ಗೃಹಲಕ್ಷ್ಮಿ ಯೋಜನೆಯಡಿ ಅನರ್ಹರಿಗೂ ಹಣ ಪಾವತಿಯಾಗುತ್ತಿದೆ. ಇಂತಹ ಅನರ್ಹ ಫಲಾನುಭವಿಗಳನ್ನು ಶೋಧಿಸುವ ಮೂಲಕ ಇವರನ್ನೆಲ್ಲ ಯೋಜನೆಯಿಂದ ಹೊರಗಿಡಬೇಕು ಎಂಬ ಆಪಾದನೆ ಕೇಳಿ ಬಂದಿತ್ತು.
ಈ ಹಿನ್ನೆಯಲ್ಲಿ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಶೋಧ ಕಾರ್ಯ ಕೈಗೊಂಡಿತ್ತು. ಈ ಶೋಧದಲ್ಲಿ ಬರೋಬ್ಬರಿ 2,13,064 ಜನ ಪತ್ತೆಯಾಗಿದ್ದು; ಇವರೆಲ್ಲರಿಗೂ ಗೃಹಲಕ್ಷ್ಮಿ ಯೋಜನೆ ಹಣ ಬಂದ್ ಮಾಡಲಾಗಿದೆ ಎಂದು ಮಹಿಳಾ ಸಚಿವರು ಮಾಹಿತಿ ನೀಡಿದ್ದಾರೆ.

2,13,064 ಜನರಿಗೆ ಗೃಹಲಕ್ಷ್ಮಿ ಹಣ ಬಂದ್
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದವರ ಪೈಕಿ 1,08,417 ಆದಾಯ ತೆರಿಗೆ ಪಾವತಿದಾರರು ಹಾಗೂ 1,04,647 ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸಿರುವವರು ಇದ್ದಾರೆ. ಅವರಿಗೆ ಮಾರ್ಗಸೂಚಿ ಪ್ರಕಾರ ಧನಸಹಾಯ ಪಾವತಿಸಲು ಅವಕಾಶ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಸದಸ್ಯ ಪಿ.ಎಚ್ ಪೂಜಾರ್ ಪ್ರಶ್ನೆಗೆ ಉತ್ತರ ನೀಡಿ, ಆದಾಯ ತೆರಿಗೆ ಹಾಗೂ ಜಿಎಸ್‌ಟಿ ರಿಟರ್ನ್ಸ್ ಕಾರಣಕ್ಕೆ 2,13,064 ಮಂದಿ ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯಲು ಸಾಧ್ಯವಾಗಿಲ್ಲ ಎಂದು ವಿವರಿಸಿದ್ದಾರೆ.