Haveri District Court Recruitment 2024 : ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ SSLC ಪಾಸಾದವರಿಗೆ ಖಾಲಿ ಇರುವಂತಹ ಜವಾನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾವೇರಿ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಜವಾನ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅರ್ಹತೆಗಳು, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಬಿಡುಗಡೆಯಾದ ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
ಹಾವೇರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಸಂಕ್ಷಿಪ್ತ ವಿವರ
- ನೇಮಕಾತಿ ಇಲಾಖೆ : ಹಾವೇರಿ ಜಿಲ್ಲಾ ನ್ಯಾಯಾಲಯ ನೇಮಕಾತಿ
- ಖಾಲಿ ಹುದ್ದೆಗಳು : 26 ಹುದ್ದೆಗಳು
- ಹುದ್ದೆಗಳ ಹೆಸರು : ಜವಾನ್ (Peon)
- ಅರ್ಜಿ ಸಲ್ಲಿಕೆ : ಆನ್‌ಲೈನ್ ಮೂಲಕ
- ಉದ್ಯೋಗ ಸ್ಥಳ : ಹಾವೇರಿ ಜಿಲ್ಲೆ
ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನು?
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಹಾವೇರಿ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಡೇಟ್ ಫಿಕ್ಸ್ | ನೌಕರರ ನಿಯೋಗಕ್ಕೆ ಸಿಎಂ ಭರವಸೆ Karnataka 7th Pay Commission
ವಯೋಮಿತಿ ಅರ್ಹತೆಗಳೇನು?
Haveri District Court Recruitment 2024 ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಗುಣವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಮಾಸಿಕ ಸಂಬಳ ಹಾಗೂ ಆಯ್ಕೆ ವಿಧಾನ
ಹಾವೇರಿ ಜಿಲ್ಲಾ ನ್ಯಾಯಾಲಯ ಜವಾನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು 17,000 ರೂ. ಯಿಂದ 28,950 ರೂ. ವರೆಗೆ ಇರಲಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಂಡು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕವೆಷ್ಟು?
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200 ರೂ.
- ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ : 100 ರೂ.
- ಇನ್ನುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ವಿವರ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 03-07-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 01-08-2024