ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಹೋಮ್ ಗಾರ್ಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ…
ಎಸ್ಸೆಸ್ಸೆಲ್ಸಿ ಪಾಸಾಗಿರುವ, ದೇಶಸೇವೆ ಮತ್ತು ಸಾರ್ವಜನಿಕ ರಕ್ಷಣೆಯಲ್ಲಿ ಆಸಕ್ತಿ ಇರುವ ಯುವಕರಿಗೆ ಇದು ಸುವರ್ಣಾವಕಾಶವಾಗಿದೆ. ಗೃಹ ರಕ್ಷಕರಾಗಿ ಸೇವೆ ಸಲ್ಲಿಸುವುದು ಗೌರವಾನ್ವಿತ ಕಾರ್ಯವಾಗಿದ್ದು, ಇದು ಯುವಕರಿಗೆ ದೇಶಭಕ್ತಿಯ ಜೊತೆಗೆ ಜನಸೇವೆಗೆ ನೆರವಾಗುವ ಅವಕಾಶವನ್ನು ನೀಡುತ್ತದೆ.
ನೇಮಕಾತಿ ಕುರಿತ ಸಂಕ್ಷಿಪ್ತ ವಿವರ
- ನೇಮಕಾತಿ ಸಂಸ್ಥೆ : ಗೃಹ ರಕ್ಷಕದಳ, ದಾವಣಗೆರೆ ಜಿಲ್ಲೆ
- ಹುದ್ದೆಗಳ ಹೆಸರು : ಸ್ವಯಂಸೇವಕ ಪುರುಷ ಗೃಹರಕ್ಷಕರು
- ಒಟ್ಟು ಖಾಲಿ ಹುದ್ದೆಗಳು : 110 ಹುದ್ದೆಗಳು
- ಅರ್ಜಿ ಸಲ್ಲಿಕೆ : ಆಫ್‌ಲೈನ್ ಮುಖಾಂತರ
- ಉದ್ಯೋಗ ಸ್ಥಳ : ದಾವಣಗೆರೆ ಜಿಲ್ಲೆ

ಎಲ್ಲೆಲ್ಲಿ ಖಾಲಿ ಹುದ್ದೆಗಳಿವೆ?
ದಾವಣಗೆರೆ ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಸ್ವಯಂಸೇವಕ ಪುರುಷ ಗೃಹರಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ತಾಲ್ಲೂಕುವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ:
- ಹರಿಹರ- 19
- ಮಲೆಬೆನ್ನೂರು- 01
- ಹೊನ್ನಾಳಿ- 07
- ನ್ಯಾಮತಿ- 14
- ಚನ್ನಗಿರಿ- 25
- ಸಂತೆಬೆನ್ನೂರು- 06
- ಜಗಳೂರು- 04
- ಬಿಳಿಚೋಡು- 22
- ಬಸವನಕೋಟೆ- 12
Auto Taxi Loan Subsidy- ಆಟೋ ಮತ್ತು ಟ್ಯಾಕ್ಸಿ ಖರೀದಿಗೆ ಸರ್ಕಾರದ ಸಬ್ಸಿಡಿ | ಈಗಲೇ ಅರ್ಜಿ ಹಾಕಿ
ವಯೋಮಿತಿ ಮತ್ತು ವಿದ್ಯಾರ್ಹತೆ
ಗೃಹರಕ್ಷಕ ಹುದ್ದೆಗಳಿಗೆ 18 ರಿಂದ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು; ಈ ವಯಸ್ಸಿನೊಳಗಿರುವ 10ನೇ ತರಗತಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಿರುದ್ಧ ಯಾವುದೇ ಪೊಲೀಸ್ ಪ್ರಕರಣ ಇರಬಾರದು ಮತ್ತು ಅಭ್ಯರ್ಥಿಗಳು ಯಾವುದೇ ರಾಜಕೀಯ ಪಕ್ಷ-ಸಂಘ ಸಂಸ್ಥೆಗಳ ಸದಸ್ಯರು, ಕಾರ್ಯಕರ್ತರು ಆಗಿರಬಾರದು.
ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕು. ವಿಶೇಷ ವೃತ್ತಿ ಕೌಶಲ್ಯ ಹೊಂದಿದವರಿಗೆ ಪ್ರಮುಖ ಆದ್ಯತೆ ನೀಡಲಾಗುವುದು. ನೆರೆ ರಕ್ಷಣೆ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ, ರೈಫಲ್ ಟ್ರೈನಿಂಗ್, ಸಂಚಾರ ನಿಯಂತ್ರಣ, ಶಸ್ತ್ರಾಸ್ತ್ರ ತರಬೇತಿ ಮೊದಲಾದ ತರಬೇತಿ ನೀಡಿ ತುರ್ತು ಸಂದರ್ಭಗಳಲ್ಲಿ ಅವರನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ.
Blue Aadhaar Card- ನೀಲಿ ಆಧಾರ್ ಕಾರ್ಡ್ ಮಾಡಿಸುವುದು ಹೇಗೆ? ಇದರಿಂದ ಪ್ರಯೋಜನವೇನು? ಮಹತ್ವದ ಮಾಹಿತಿ ಇಲ್ಲಿದೆ…
ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿಗಳನ್ನು ಏಪ್ರಿಲ್ 24ರಿಂದ ಜೂನ್ 14ರೊಳಗೆ ಪಡೆದು ಭರ್ತಿ ಮಾಡಬೇಕು. ಪೂರ್ಣವಾಗಿಸಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಜೂನ್ 16ರೊಳಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು:
ಜಿಲ್ಲಾ ಸಮಾದೇಷ್ಟರ ಕಚೇರಿ,
ದೇವರಾಜ ಅರಸ್ ಬಡಾವಣೆ ಬಿ ಬ್ಲಾಕ್,
ಶಿವಪಾರ್ವತಿ ಕಲ್ಯಾಣ ಮಂಟಪ ಪಕ್ಕ,
ಶಿವಾಲಯ ಹಿಂಭಾಗ, ದಾವಣಗೆರೆ
ತಾಲೂಕು ಅಥವಾ ಉಪ ಘಟಕಗಳ ಕಚೇರಿಗಳಲ್ಲಿಯೂ ಅರ್ಜಿ ಪಡೆಯಲು ಮತ್ತು ಸಲ್ಲಿಸಲು ಅವಕಾಶವಿದೆ.

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.