
ಕೇಂದ್ರ ಗುಪ್ತಚರ ಇಲಾಖೆಯ 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ (IB Junior Intelligence Officer Recruitment) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ…
ಈಚೆಗೆಷ್ಟೇ 4,987 ಸೆಕ್ಯೂರಿಟಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಗುಪ್ತಚರ ಇಲಾಖೆಯು ಇದೀಗ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ II (ಟೆಕ್) ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ.
ದೇಶದಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿ ಇರುವ ಒಟ್ಟು 394 ಹುದ್ದೆಗಳಿಗೆ ನೇಮಕ ನಡೆಸಲಿದೆ. ಒಟ್ಟು ಹುದ್ದೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 157, ಆರ್ಥಿಕ ದುರ್ಬಲ ವರ್ಗದವರಿಗೆ 32, ಒಬಿಸಿ ಅಭ್ಯರ್ಥಿಗಳಿಗೆ 117, ಎಸ್‌ಸಿ ಅಭ್ಯರ್ಥಿಗಳಿಗೆ 60 ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ 28 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
PhonePe New Features- ಫೋನ್‌ಪೇನಲ್ಲಿ ಪೇಮೆಂಟ್ ಮಾಡೋದು ಇನ್ನೂ ಸುಲಭ | ಹೊಸ ಫೀಚರ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ…
ಅರ್ಹತೆ ಮತ್ತು ವಯೋಮಿತಿ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿAದ ಎಲೆಕ್ಟ್ರಾನಿಕ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಶನ್ ಅಥವಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ನಲ್ಲಿ ಡಿಪ್ಲೊಮಾ, ಪದವಿ, ಬಿಎಸ್‌ಸಿ, ಬಿಸಿಎ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಪ್ರಯತ್ನಿಸಬಹುದು.
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿಗೆ ಬಳಪಡುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಮಾಸಿಕ ವೇತನವೆಷ್ಟು?
ಕೇಂದ್ರ ಗುಪ್ತಚರ ಇಲಾಖೆಯ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ II (ಟೆಕ್) ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ 25,500 ರಿಂದ 81,100 ರೂ. ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ. ಜೊತೆಗೆ ಕೇಂದ್ರ ಸರ್ಕಾರದ ಎಲ್ಲಾ ಸೌಲಭ್ಯಗಳು ಅನ್ವಯವಾಗಲಿವೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ಸಂದರ್ಶನ ಅಥವಾ ಪರ್ಸನಾಲಿಟಿ ಟೆಸ್ಟ್, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್ ಮೂಲಕ 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, 25 ಅಂಕಗಳಿಗೆ ಜನರಲ್ ಮೆಂಟಲ್ ಎಬಿಲಿಟಿ ಮತ್ತು 75 ಅಂಕಗಳಿಗೆ ಅರ್ಹತೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಪರೀಕ್ಷೆ ಬರೆಯಲು ಎರಡು ಗಂಟೆಗಳ ಕಾಲಾವಕಾಶ ಇರಲಿದೆ. ಪ್ರತಿ ತಪ್ಪಾದ ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುತ್ತದೆ. 30 ಅಂಕಗಳಿಗೆ ಕೌಶಲ ಪರೀಕ್ಷೆ ಮತ್ತು 20 ಅಂಕಗಳಿಗೆ ಸಂದರ್ಶನ ಇರಲಿದೆ.
ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?
ರಾಜ್ಯದಲ್ಲಿ ರಾಜಧಾನಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಪರೀಕ್ಷಾ ಕೇಂದ್ರಗಳು ಇರಲಿವೆ.
ಅರ್ಜಿ ಶುಲ್ಕವೆಷ್ಟು?
ಎಲ್ಲ ವರ್ಗದ ಅಭ್ಯರ್ಥಿಗಳು 550 ರೂ. ಪ್ರೊಸೆಸಿಂಗ್ ಫೀ ಅನ್ನು ಪಾವತಿಸಬೇಕು. ಉಳಿದಂತೆ ಎಸ್‌ಸಿ, ಎಸ್‌ಟಿ, ಮಹಿಳೆಯರು, ಮಾಜಿ ಸೈನಿಕ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವರ್ಗದ ಅಭ್ಯರ್ಥಿಗಳು 550 ಪ್ರೊಸೆಸಿಂಗ್ ಫೀ ಜತೆಗೆ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಅವಕಾಶವಿದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
23-08-2025 - ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
14-09-2025
ಅಧಿಸೂಚನೆ: Download
ಹೆಚ್ಚಿನ ವಿವರಗಳಿಗೆ: mha.gov.in