ಧಾರವಾಡ, ಬಳ್ಳಾರಿ ಗ್ರಾಮೀಣ ಬ್ಯಾಂಕ್ ನೇಮಕಾತಿ | 586 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ | IBPS RRB Recruitment 2024

Spread the love

IBPS RRB Recruitment 2024 : ಬಹು ನಿರೀಕ್ಷಿತ ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection – IBPS) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಳೆದ ಜೂನ್ 07ರಂದು ಪ್ರಕಟವಾಗಿರುವ ಅಧಿಸೂಚನೆಯ ಪ್ರಕಾರ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (Regional Rural Banks – RRB) ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಅಫೀಸರ್ ಹುದ್ದೆಗಳ ನೇಮಕಾತಿ ನಡೆಲಿದೆ.

WhatsApp Group Join Now
Telegram Group Join Now

ಬರಲಿರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ನವೆಂಬರ್‌ನಲ್ಲಿ ಸಂದರ್ಶನ ನಡೆಸಲು ಐಬಿಪಿಎಸ್ ನಿರ್ಧರಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 27, 2025 ಕೊನೆಯ ದಿನವಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ರಾಜ್ಯದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲೀಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ನೀಡಲಾಗಿದೆ.

ಸೂರ್ಯ ಘರ್ ಯೋಜನೆಗೆ ಅಧಿಕೃತ ಚಾಲನೆ | ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ… PM Surya Ghar Muft Bijli Yojana 2024

ಖಾಲಿ ಹುದ್ದೆಗಳ ವಿವರ

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕಾತಿ ನಡೆಸಿತ್ತು. ಈ ಬಾರಿ ಬರೋಬ್ಬರಿ 9.995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್’ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ.

ರಾಜ್ಯದ ಎರಡು ಬ್ಯಾಂಕುಗಳಲ್ಲಿ ಒಟ್ಟು 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್’ನಲ್ಲಿ 386 ಹುದ್ದೆಗಳು ಹಾಗೂ ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್’ನಲ್ಲಿ 200 ಹುದ್ದೆಗಳಿವೆ. ಈ ಪೈಕಿ ಒಟ್ಟು 200 ಕಚೇರಿ ಸಹಾಯಕರು (ಮಲ್ಟಿ ಪರ್ಪಸ್) ಹುದ್ದೆಗಳು ಹಾಗೂ 157 ಆಫೀಸರ್ ಸ್ಟೇಲ್ (1) ಹುದ್ದೆಗಳಿಗೆ ನೇಮಕ ನಡೆಯಲಿದೆ. ಕಳೆದ ಬಾರಿ ರಾಜ್ಯದ ಎರಡೂ ಬ್ಯಾಂಕ್’ಗಳಲ್ಲಿ 807 ಹುದ್ದೆಗಳಿಗೆ ನೇಮಕ ನಡೆದಿತ್ತು.

ಪಿಯುಸಿ ಪಾಸಾದವರಿಗೆ ಕೃಷಿ ಇಲಾಖೆಯ ಸರ್ಕಾರಿ ಹುದ್ದೆಗಳು | ಟೈಪಿಸ್ಟ್, ಎಸ್‌ಡಿಎ, ಎಫ್‌ಡಿಎ ಹುದ್ದೆಗಳ ಶೀಘ್ರ ನೇಮಕಾತಿ Karnataka Agriculture Dept Recruitment 2024

ವಿದ್ಯಾರ್ಹತೆ ವಿವರ

ಆಫೀಸ್ ಅಸಿಸ್ಟೆಂಟ್: ಕಚೇರಿ ಸಹಾಯಕರು ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, ಸ್ಥಳೀಯ ಭಾಷೆಯನ್ನು ತಿಳಿದಿರಬೇಕಾದುದು ಅವಶ್ಯಕ. ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕು.

ಆಫೀಸರ್ ಸ್ಟೇಲ್ -1: ಕೃಷಿ, ತೋಟಗಾರಿಕೆ, ಅರಣ್ಯ, ಪ್ರಾಣಿಶಾಸ್ತ್ರ, ಪಶು ವಿಜ್ಞಾನ, ಅಗ್ರಿಕಲ್ಬರಲ್ ಎಂಜಿನಿಯರಿAಗ್, ಪಿಸಿಕಲ್ಟರ್, ಅಗ್ರಿಕಲ್ಡರ್ ಮಾರ್ಕೆಟಿಂಗ್ ಆ್ಯಂಡ್ ಕೋ-ಆಪರೇಷನ್, ಇನ್‌ಫಾರ್ಮೆಷನ್ ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ ಲಾ, ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ- ಈ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಪಡೆದವರು ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

IBPS RRB Recruitment 2024
ವಯೋಮಿತಿ ಮಾಹಿತಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗಳಿಗೆ 1996ರ ಜೂನ್ 2 ಮತ್ತು 2006ರ ಜೂನ್ 1ರ ನಡುವೆ ಜನಿಸಿರುವ 18ರಿಂದ 28 ವರ್ಷದ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇನ್ನು ಆಫೀಸರ್ ಸ್ಟೇಲ್ -1 ಹುದ್ದೆಗಳಿಗೆ 1994ರ ಜೂನ್ 3 ಮತ್ತು 2006ರ ಮೇ 31ರ ನಡುವೆ ಜನಿಸಿರುವ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಮುಂಗಾರು ಬೆಳೆ ವಿಮೆ 2024-25 ನೋಂದಣಿ ಆರಂಭ: ಅಧಿಸೂಚಿತ ಬೆಳೆಗಳ ಪಟ್ಟಿ ಇಲ್ಲಿದೆ… Kharif Season Crop Insurance 2024

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?
  • ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮಂಗಳೂರು ಮತ್ತು ಉಡುಪಿ
  • ಮುಖ್ಯ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ
ಪರೀಕ್ಷಾಪೂರ್ವ ತರಬೇತಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಬಿಬಿಪಿಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲಿದ್ದು; ಧಾರವಾಡದಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ. ಎಸ್.ಸಿ, ಎಸ್.ಟಿ, ಅಲ್ಪಸಂಖ್ಯಾತ ಅಭ್ಯರ್ಥಿಗಳು, ಮಾಜಿ ಸೈನಿಕರು ಹಾಗೂ ವಿಶೇಷಚೇತನ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ಇದರ ಖರ್ಚು ಮೆಚ್ಚುಗಳನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ.

ಕುರಿ-ಮೇಕೆ ಸಾಕಾಣಿಕೆಗೆ ಕುರಿ ನಿಗಮದಿಂದ ಸಿಗುವ ಸಬ್ಸಿಡಿ ಸೌಲಭ್ಯಗಳು Karnataka Sheep and Goat Board facilities

ಅರ್ಜಿ ಶುಲ್ಕದ ಮಾಹಿತಿ

ಸಾಮಾನ್ಯ ಅಭ್ಯರ್ಥಿಗಳಿಗೆ 850 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಇನ್ನು ಎಸ್‌ಸಿ, ಎಸ್ಟಿ, ವಿಶೇಷಚೇತನರು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ಕೇವಲ 175 ರೂಪಾಯಿ ಶುಲ್ಕ ಪಾವತಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

IBPS RRB Recruitment 2024
ವಿಶೇಷ ಮಾಹಿತಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ರಾಜ್ಯದ ಅಭ್ಯರ್ಥಿಗಳು ಇಂಗ್ಲಿಷ್, ಹಿಂದಿ ಭಾಷೆಯ ಜತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಸ್ಥಳೀಯ ಭಾಷಾಜ್ಞಾನ ಹೊಂದಿರುವುದು ಕಡ್ಡಾಯ. 8ನೇ ತರಗತಿ ವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವವರನ್ನು ಸ್ಥಳೀಯ ಭಾಷಾಜ್ಞಾನ ಹೊಂದಿರುವ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಸರಿಯಾಗಿ ತಿಳಿದಿಲ್ಲ ಎಂಬುದು ಆಯ್ಕೆಯ ಸಂದರ್ಭದಲ್ಲಿ ಗೊತ್ತಾದರೆ, ಅಂತಹ ಅಭ್ಯರ್ಥಿಗಳಿಗೆ ಭಾಷೆಯನ್ನು ಕಲಿತುಕೊಳ್ಳಲು ಆರು ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವೈಯಕ್ತಿಕ ಇ-ಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ಹೊಂದಿರಬೇಕಾಗಿರುವುದು ಕಡ್ಡಾಯ. ಸದರಿ ಇ-ಮೇಲ್ ಐ.ಡಿಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವ ವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು.

ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಕೆ ಆರಂಭ ದಿನ : 07-06-2024
  • ಅರ್ಜಿ ಸಲ್ಲಿಕೆ ಕೊನೆಯ ದಿನ : 27-07-2024

ಅಧಿಸೂಚನೆ : Download

ರೈತರ ಜಮೀನು ಪಹಣಿಗೆ (RTC) ಆಧಾರ್ ಲಿಂಕ್ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಇಲ್ಲಿದೆ… RTC aadhar card link karnataka Land Records


Spread the love
WhatsApp Group Join Now
Telegram Group Join Now

1 thought on “ಧಾರವಾಡ, ಬಳ್ಳಾರಿ ಗ್ರಾಮೀಣ ಬ್ಯಾಂಕ್ ನೇಮಕಾತಿ | 586 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ | IBPS RRB Recruitment 2024”

Leave a Comment

error: Content is protected !!