2025ನೇ ಸಾಲಿನ ‘ಜೀವಜಲ’ ಯೋಜನೆಯಡಿ (Jeevajala Free Borewell Subsidy) ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಉಚಿತ ಬೋರ್‌ವೆಲ್ ಯೋಜನೆಗೆ ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…
ಸಣ್ಣ ಮತ್ತು ಅತಿ ಸಣ್ಣ ರೈತರ ನೀರಾವರಿ ವ್ಯವಸ್ಥೆಗಾಗಿ ಕರ್ನಾಟಕ ಸರ್ಕಾರವು ‘ಜೀವಜಲ’ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು; ಈ ಯೋಜನೆಯಡಿ ಕೊಳವೆಬಾವಿ ಮತ್ತು ತೆರದ ಬಾವಿಗೆ ಸಹಾಯಧನ ಹಾಗೂ ಸಾಲಸೌಲಭ್ಯ ಲಭ್ಯವಿದೆ. ಅಷ್ಟೇ ಅಲ್ಲ ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆಗೂ ಇಲ್ಲಿ ಸಂಪೂರ್ಣ ಅನುದಾನ ಸಿಗಲಿದೆ.
2025ನೇ ಸಾಲಿನ ‘ಜೀವಜಲ’ ನೀರಾವರಿ ಯೋಜನೆಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಸಣ್ಣ ಮತ್ತು ಅತೀ ಸಣ್ಣ ರೈತರು ಜೂನ್ 30ರೊಳಗೆ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
Old Pension Scheme Karnataka- ರಾಜ್ಯ ಸರಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ | ಸರ್ಕಾರದ ಮಹತ್ವದ ಸೂಚನೆ
ಏನಿದು ಜೀವಜನ ಯೋಜನೆ?
‘ಗಂಗಾಕಲ್ಯಾಣ ಯೋಜನೆ’ಯಂತೆ ರಾಜ್ಯ ಸರಕಾರ ಇತರ ಜಾತಿ, ಸಮುದಾಯದ ರೈತರ ಹಿತಕ್ಕೆ ಪೂರವಾಗಿ ಆಯಾಯ ಜಾತಿ ಸಮುದಾಯದ ನಿಗಮಗಳ ಮೂಲಕ ವಿವಿಧ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇವುಗಳಲ್ಲಿ ‘ಜೀವಜಲ’ ನೀರಾವರಿ ಯೋಜನೆಯೂ ಒಂದು.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ ಈ ಯೋಜನೆ ಅನುಷ್ಠಾನಗೊಳ್ಳಲಿದ್ದು; ಪ್ರವರ್ಗ 3ಬಿ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರ ಇದರ ಪ್ರಯೋಜನ ಪಡೆಯಬಹುದು.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?
ಈ ಯೋಜನೆಯ ಫಲಾನುಭವಿಗಳು ವೀರಶೈವ-ಲಿಂಗಾಯತ (ಪ್ರವರ್ಗ-3ಬಿ) ಸೇರಿದವರಾಗಿರಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಜತೆಗೆ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಈ ಯೋಜನೆಯ ಪ್ರಯೋಜನ ಪಡೆಯಲು ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳ ಮಿತಿಯೊಳಗಿರಬೇಕು.
ಸಹಾಯಧನ ಎಷ್ಟು ಸಿಗುತ್ತದೆ?
ಜೀವಜಲ ಯೋಜನೆಯಡಿ ಕೊಳವೆಬಾವಿ ಸೌಲಭ್ಯ ಪಡೆಯಲು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ರಾಜ್ಯದ ಇನ್ನುಳಿದ ಜಿಲ್ಲೆಯ ರೈತರಿಗೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಯೋಜನೆಗೆ ಘಟಕವೆಚ್ಚ 4.75 ಲಕ್ಷ ರೂಪಾಯಿಗಳಲ್ಲಿ 4.25 ಲಕ್ಷ ರೂಪಾಯಿ ಸಹಾಯಧನ (ಸಬ್ಸಿಡಿ) ಸಿಗುತ್ತದೆ.
ಉಳಿದ ಜಿಲ್ಲೆಗಳಿಗೆ ಘಟಕವೆಚ್ಚ 3.75 ಲಕ್ಷ ರೂಪಾಯಿಗಳಲ್ಲಿ 3.25 ಲಕ್ಷ ರೂಪಾಯಿ ಸಹಾಯಧನ (ಸಬ್ಸಿಡಿ) ಸಿಗುತ್ತದೆ. ಈ ಮೊತ್ತದಲ್ಲಿ ಬೋರ್‌ವೆಲ್ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂಪಾಯಿ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಮತ್ತು ಸಂಪರ್ಕ ವಿವರ
ಅರ್ಹ ಫಲಾನುಭವಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಇದೇ ಜೂನ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ದೂರವಾಣಿಗೆ 8022865522, 9900012351 ಸಂಪರ್ಕಿಸಬಹುದು.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ಕಚೇರಿಗಳ ವಿಳಾಸ ಹಾಗೂ ಸಂಪರ್ಕ ಸಂಖ್ಯೆಗೆ ಇಲ್ಲಿ ಒತ್ತಿ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.