JNV Entrance Exam Application 2024 : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (Jawahar Navodaya Vidyalaya) ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ ದ್ವಿತೀಯ ಪಿಯುಸಿ (PUC) ವರೆಗೆ ಉಚಿತ ಶಿಕ್ಷಣ ನೀಡಲು ನವೋದಯ ವಿದ್ಯಾಲಯ ಸಮಿತಿಯು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ…
ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಾತಿ ಪಡೆಯಲು ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಯ್ಕೆಯಾದವರಿಗೆ 7 ವರ್ಷಗಳ ಕಾಲ ಉಚಿತ ವಸತಿ ಸಹಿತ ಶಿಕ್ಷಣ ಸಿಗಲಿದೆ. ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ನೀಡಲಾಗಿದೆ.
ಜವಾಹರ್ ನವೋದಯ ವಿದ್ಯಾಲಯದ ಮಾಹಿತಿ About Jawahar Navoday Vidyalay
ಗ್ರಾಮೀಣ ಪ್ರದೇಶದ ಪ್ರತಿಭಾವಂತ ಮಕ್ಕಳಿಗೆ ಉತ್ತಮ ಗುಣಮಟ್ಟದ ಹಾಗೂ ಸಂಸ್ಕೃತಿ, ಮೌಲ್ಯಾಧಾರಿತ ಉಚಿತ ಊಟ ವಸತಿಯೊಂದಿಗೆ ಶಿಕ್ಷಣವನ್ನು ನೀಡುವ ಉದ್ದೇಶದಿಂದ 1986ರಲ್ಲಿ ಕೇಂದ್ರ ಸರ್ಕಾರದ ಈ ವಸತಿ ಶಾಲೆಗಳನ್ನು ಆರಂಭಿಸಲಾಗಿದೆ. ಆಯ್ಕೆಯಾದವರು ಈ ಶಾಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿಯ ವರೆಗೂ ಉಚಿತ ಊಟ ವಸತಿಯುತ ಸೌಲಭ್ಯಗಳೊಂದಿಗೆ ವ್ಯಾಸಂಗವನ್ನು ಮುಂದುವರಿಸಬಹುದು.
ಭಾರತದ ಒಟ್ಟು 27 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಅಥವಾ ಒಂದಕ್ಕಿ೦ತ ಹೆಚ್ಚು ಈ ನವೋದಯ ಶಾಲೆಗಳಿವೆ. ಅಂದರೆ ದೇಶಾದ್ಯಂತ ಒಟ್ಟು 653 ನವೋದಯ ವಿದ್ಯಾಲಯಗಳಿವೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೇ.75 ಸೀಟುಗಳು ಮೀಸಲು
75% Reservation For Rural Background Students ಪ್ರತಿ ಜಿಲ್ಲೆಯ ಆಯಾ ನವೋದಯ ವಿದ್ಯಾಲಯಗಳಲ್ಲಿ ಶೇಕಡಾ 75ರಷ್ಟು ಸೀಟುಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗಾಗಿಯೇ ಮೀಸಲಿಡಲಾಗಿದೆ. ಇನ್ನುಳಿದ ಸೀಟುಗಳನ್ನು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ. ಈ ಮೀಸಲಾತಿಯನ್ನು ಪಡೆಯಲು ವಿದ್ಯಾರ್ಥಿಗಳು 3-4 ಹಾಗೂ 5ನೇ ತರಗತಿಯನ್ನು ಗ್ರಾಮೀಣ ಪ್ರದೇಶದಲ್ಲಿಯೇ ವ್ಯಾಸಂಗ ಮಾಡಿರಬೇಕು.
ಅರ್ಜಿ ಸಲ್ಲಿಸಲು ಅರ್ಹತೆಗಳು Eligibility
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಯು 01-05-2013ರಿಂದ 01-07-2015ರ ಅವಧಿಯಲ್ಲಿ ಜನಿಸಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಜಿಲ್ಲೆಯಲ್ಲಿಯೇ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 2024-25ರ ಶೈಕ್ಷಣಿಕ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರಬೇಕು.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ದಿನಾಂಕದ೦ದು ಲಿಖಿತ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಕನ್ನಡ ಭಾಷೆ ಹಾಗೂ ಇಂಗ್ಲಿಷ್ ಭಾಷೆ ಸೇರಿದಂತೆ ಆಯಾ ರಾಜ್ಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಈ ಲಿಖಿತ ಪರೀಕ್ಷೆಯು ಒಟ್ಟು 80 ಪ್ರಶ್ನೆಗಳನ್ನು ಒಳಗೊಂಡಿದ್ದು 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಪರೀಕ್ಷೆಗೆ ಒಟ್ಟು 2 ಗಂಟೆಯ ಒಳಗೆ ಉತ್ತರಿಸಬೇಕಾಗಿರುತ್ತದೆ.
ಎಷ್ಟು ಜನರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಪ್ರತಿ ಜಿಲ್ಲೆಯ ನವೋದಯ ವಿದ್ಯಾಲಯ ಶಾಲೆಗಳಿಗೆ 80 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಯು ಪರೀಕ್ಷೆಗಾಗಿ ಯಾವ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿರುತ್ತಾನೋ, ಆ ಜಿಲ್ಲೆಯ ವಿದ್ಯಾಲಯಕ್ಕೆ ಮಾತ್ರ ಪ್ರವೇಶಾತಿಗೆ ಪರಿಗಣಿಸಲಾಗುವುದು.
ಪ್ರವೇಶಾತಿಯ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
16-09-2024 - ಲಿಖಿತ ಪರೀಕ್ಷೆ ದಿನಾಂಕ :
12-01-2024, ಬೆಳಗ್ಗೆ 11:30
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಒತ್ತಿ…
ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ : Apply Now
2 thoughts on “ನವೋದಯ ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6-12ನೇ ತರಗತಿ ವರೆಗೂ ವಸತಿ, ಊಟೋಪಚಾರ ಸಹಿತ ಸಂಪೂರ್ಣ ಉಚಿತ ಶಿಕ್ಷಣ JNV Entrance Exam Application 2024”