ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ-1ರ (Second PU Exam-1) ಫಲಿತಾಂಶ ನಾಳೆ ಪ್ರಕಟವಾಗಲಿದೆ. ರಿಸೆಲ್ಟ್ ನೋಡುವ ಡೈರೆಲ್ಟ್ ಲಿಂಕ್ ಇಲ್ಲಿದೆ…
ಹೌದು, ಕಳೆದ ಮಾರ್ಚ್ 01, 2025 ರಿಂದ ಮಾರ್ಚ್ 20,2025ರ ವರೆಗೆ ನಡೆಸಲಾಗಿದ್ದ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ನಾಳೆ ಏಪ್ರಿಲ್ 8ರ ಮಧ್ಯಾಹ್ನ 1:30 ಗಂಟೆಗೆ ಪ್ರಕಟಿಸಲಾಗುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಅಧಿಕೃತ ಪ್ರಕಟಣೆ ಹೊರಡಿಸಿದೆ.
ಸದರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 6,61,474 ಮಂದಿ ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 18,317 ಮಂದಿ ಖಾಸಗಿ ವಿದ್ಯಾರ್ಥಿಗಳಾಗಿದ್ದರು. ರಾಜ್ಯದ 1,171 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಯನ್ನು ಆಯೋಜಿಸಲಾಗಿತ್ತು.

ನಾಳೆ ಮದ್ಯಾಹ್ನ ಫಲಿತಾಂಶ ಪ್ರಕಟ
ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು; ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬAಧ ನಾಳೆ ಏಪ್ರಿಲ್ 08, 2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಸುದ್ದಿಗೋಷ್ಠಿಯ ನಂತರ ದ್ವಿತೀಯ ಪಿಯುಸಿ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08-04-2025ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆಯಲ್ಲಿ ತಿಳಿಸಿದೆ.
ಫಲಿತಾಂಶ ವೀಕ್ಷಿಸುವ ವಿಧಾನ
ದ್ವಿತೀಯ ಪಿಯುಸಿ ಫಲಿತಾಂಶವು https://karresults.nic.in ಅಥವಾ https://kseab.karnataka.gov.in ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುತ್ತದೆ. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು:
ಮೊದಲಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಹೋಮ್ ಪೇಜ್‌ನಲ್ಲಿ ‘2nd PUC Results 2025’ ಲಿಂಕ್ ಅನ್ನು ಕ್ಲಿಕ್ ಮಾಡಿ. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ. ‘Submit’ ಬಟನ್ ಒತ್ತಿದರೆ ಸ್ಕ್ರೀನ್‌ನಲ್ಲಿ ಫಲಿತಾಂಶ ಕಾಣಿಸಿಕೊಳ್ಳುತ್ತದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶದ ಪ್ರಿಂಟ್‌ಔಟ್ ತೆಗೆದುಕೊಳ್ಳಬಹುದು.
ರಿಸೆಲ್ಟ್ ಲಿಂಕ್: Click Here

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.