ಕರ್ನಾಟಕದಲ್ಲಿ ಅಕಾಲಿಕ ಮಳೆ ಅಬ್ಬರ (Karnataka Akalika Male Abbara) ಶುರುವಾಗಿದೆ. ಮಲೆನಾಡು, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಬಿರುಸು ಮಳೆಯಾಗಿದ್ದು; ರೈತರು ಕಂಗಾಲಾಗಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…
ಜನವರಿ ತಿಂಗಳ ಮಧ್ಯಭಾಗದಲ್ಲೇ ರಾಜ್ಯದಲ್ಲಿ ಕಂಡುಬರುತ್ತಿರುವ ಹವಾಮಾನ ವೈಪರೀತ್ಯ (Weather anomaly) ಜನರಲ್ಲಿ ಆತಂಕ ಮೂಡಿಸಿದೆ. ವಾಯುಭಾರ ಕುಸಿತದ ಪರಿಣಾಮವಾಗಿ ನಿನ್ನೆ (ಜನವರಿ 13) ಮಂಗಳವಾರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕಾಲಿಕವಾಗಿ ಭಾರೀ ಮಳೆ ಸುರಿದಿದೆ.
ಸಾಮಾನ್ಯವಾಗಿ ಬಿಸಿಲು ಮತ್ತು ಒಣ ವಾತಾವರಣ (Sunny and dry weather) ಇರಬೇಕಾದ ಈ ಅವಧಿಯಲ್ಲಿ ಗುಡುಗು-ಮಿಂಚು ಸಹಿತ ಗಂಟೆಗಟ್ಟಲೇ ಮಳೆ ಸುರಿದಿರುವುದು ರೈತರು ಸೇರಿದಂತೆ ಸಾರ್ವಜನಿಕರಲ್ಲಿ ಚಿಂತೆ ಮೂಡಿಸಿದೆ.
ಇದನ್ನೂ ಓದಿ: KSCCF Recruitment 2026- ಪಿಯುಸಿ, ಪದವಿಧರರಿಗೆ ಸಹಕಾರ ಮಹಾ ಮಂಡಳಿಯಲ್ಲಿ ಉದ್ಯೋಗಾವಕಾಶ | ಅರ್ಜಿ ಆಹ್ವಾನ
Rains Batter Malenadu – ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ
ಬೆಳಗಾವಿ, ಧಾರವಾಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಸಂಜೆ ಹೊತ್ತಿಗೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದೆ.
ವಿಶೇಷವಾಗಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗಗಳಾದ ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಮೂಡಿಗೆರೆ, ಬಾಳೆಹೊನ್ನೂರು ಸುತ್ತಮುತ್ತ ಗುಡುಗು ಮತ್ತು ಮಿಂಚಿನೊಂದಿಗೆ ಮಳೆ ಸುರಿದು ವಾತಾವರಣ ಏಕಾಏಕಿ ತಂಪಾಗಿದೆ.
Untimely Rains Worry Farmers – ಬೆಳೆಗಾರರಲ್ಲಿ ಆತಂಕ ಹೆಚ್ಚಿಸಿದ ಅಕಾಲಿಕ ಮಳೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಅಕಾಲಿಕ ಮಳೆ ಬೆಳೆಗಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಾಫಿ, ಅಡಕೆ ಹಾಗೂ ಕಾಳುಮೆಣಸು ಬೆಳೆಗಾರರು ಈಗಾಗಲೇ ಕೊಯ್ಲು ಪ್ರಕ್ರಿಯೆ ಆರಂಭಿಸಿದ್ದು, ಮಳೆ ಕಾರಣದಿಂದ ಬೆಳೆ ಒಣಗಿಸುವುದು ತುಂಬಾ ಕಷ್ಟಕರವಾಗಿದೆ.
ಮೋಡ ಕವಿದ ವಾತಾವರಣದಲ್ಲಿ ಅಡಕೆ ಹಾಗೂ ಕಾಫಿಕಾಳು ಸರಿಯಾಗಿ ಒಣಗದಿದ್ದರೆ ಗುಣಮಟ್ಟ ಕುಸಿಯುವ ಭೀತಿ ಎದುರಾಗಿದೆ. ಅನಿರೀಕ್ಷಿತ ಮಳೆ ಮುಂದುವರಿದರೆ ಬೆಳೆ ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ, ರೈತರು ಹವಾಮಾನ ಮುನ್ಸೂಚನೆಗಳತ್ತ ನಿಗಾ ಇಡುತ್ತಿದ್ದಾರೆ.
ಇದನ್ನೂ ಓದಿ: February New Ration Card Application- ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ | ಆಹಾರ ಸಚಿವರ ಮಹತ್ವದ ಮಾಹಿತಿ
Sankranti Festivities Hit by Rain – ಸಂಕ್ರಾಂತಿ ಸಂಭ್ರಮಕ್ಕೆ ಮಳೆ ಅಡ್ಡಿ
ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ಹೊಸ ವರ್ಷದ ಮೊದಲ ಅಕಾಲಿಕ ಮಳೆ ಸಾಕಷ್ಟು ತೊಂದರೆ ತಂದಿದೆ.
ಹಬ್ಬದ ಖರೀದಿಗಾಗಿ ಮಾರುಕಟ್ಟೆಗೆ ಬಂದಿದ್ದ ಜನರು ಮಳೆಯಿಂದ ತತ್ತರಿಸಿದರು. ರಸ್ತೆಬದಿಯ ವ್ಯಾಪಾರಿಗಳು, ಪುಟ್ಟ ಅಂಗಡಿಕಾರರು ಹಾಗೂ ಹಳ್ಳಿಗಳಿಂದ ಬಂದಿದ್ದ ರೈತರು ಮಳೆಯಿಂದ ತಮ್ಮ ವಸ್ತುಗಳನ್ನು ರಕ್ಷಿಸಲು ಹರಸಾಹಸ ಪಡಬೇಕಾಯಿತು.

Light to Moderate Rain Along Coast – ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಂಗಳವಾರ ಸಂಜೆ ವೇಳೆ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಸಂಜೆ ಹೊತ್ತಿಗೆ ಕೆಲವೆಡೆ ತುಂತುರು ಮಳೆಯಾದರೆ, ಇನ್ನೂ ಕೆಲ ಭಾಗಗಳಲ್ಲಿ ಉತ್ತಮ ಪ್ರಮಾಣದ ಮಳೆ ಸುರಿದಿದೆ.
ಇದೇ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ, ಕಿಲ್ಲೂರು, ಕೊಲ್ಲಿ, ಧರ್ಮಸ್ಥಳ, ಕಡಿರುದ್ಯಾವರ, ಕಕ್ಕಿಂಜೆ, ಮಲವಂತಿಗೆ, ಮಿತ್ತಬಾಗಿಲು, ನಡ, ಚಾರ್ಮಾಡಿ, ಮುಂಡಾಜೆ, ನೆರಿಯ ಮೊದಲಾದ ಪ್ರದೇಶಗಳಲ್ಲಿ ಉತ್ತಮ ಮಳೆ ದಾಖಲಾಗಿದೆ. ಮಳೆಯಿಂದಾಗಿ ವಾತಾವರಣ ತಂಪಾಗಿದ್ದು, ಜನರಿಗೆ ಸ್ವಲ್ಪ ನಿರಾಳತೆ ದೊರಕಿದೆ.
Weather Outlook for Coming Days – ಮುಂದಿನ ದಿನಗಳ ಹವಾಮಾನ ಮುನ್ಸೂಚನೆ
ಹವಾಮಾನ ತಜ್ಞರ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ಮಿಶ್ರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಅಲ್ಲಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ನಿರೀಕ್ಷೆ ಇದ್ದು, ಮಧ್ಯಾಹ್ನದ ನಂತರ ಸುಳ್ಯ ಮತ್ತು ಕಡಬ ತಾಲೂಕುಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಪ್ರಸ್ತುತ ಸ್ಥಿತಿಗತಿಗಳನ್ನು ಗಮನಿಸಿದರೆ, ಜನವರಿ 15ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದ್ದು, ಬಿಸಿಲು ಹಾಗೂ ಹಗುರ ಮೋಡದ ವಾತಾವರಣ ಕಾಣಿಸಿಕೊಳ್ಳಲಿದೆ.
Malenadu & Interior Regions Update – ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳ ಸ್ಥಿತಿ
ಮಲೆನಾಡು ಪ್ರದೇಶದ ಕೊಡಗು ಜಿಲ್ಲೆಯಲ್ಲಿ ಮಧ್ಯಾಹ್ನದ ನಂತರ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ನಿರೀಕ್ಷೆ ಇದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನದ ನಂತರ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಉಳಿದ ಭಾಗಗಳಲ್ಲಿ ಭಾಗಶಃ ಮೋಡದ ವಾತಾವರಣ ಮುಂದುವರಿಯಬಹುದು.
ಜನವರಿ 15ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಬಿಸಿಲಿನ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ.
North-South Interior Weather Report – ಉತ್ತರ ಮತ್ತು ದಕ್ಷಿಣ ಒಳನಾಡಿನ ಹವಾಮಾನ
ರಾಜ್ಯದ ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಭಾಗಶಃ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಈ ವಾತಾವರಣ ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದೆ.
ಜನವರಿ 15ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಬಿಸಿಲು ಹಾಗೂ ಹಗುರ ಮೋಡದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.