Karnataka Anganwadi Vacancies : ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು (Anganawadi worker) ಹಾಗೂ ಅಂಗನವಾಡಿ ಸಹಾಯಕಿ (Anganwadi assistant) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 13,593 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು ಇವುಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲಾ ಪಂಚಾಯತಿ ಮೂಲಕ ಪ್ರಕಟಣೆ ಹೊರಡಿಸಿದೆ.
ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳೆಷ್ಟು?
- ಅಂಗನವಾಡಿ ಕಾರ್ಯಕರ್ತೆಯರು : 4,180
- ಅಂಗನವಾಡಿ ಸಹಾಯಕಿಯರು : 9,411
- ಒಟ್ಟು ಖಾಲಿ ಹುದ್ದೆಗಳು : 13,593
ಈಗಾಗಲೇ ಅರ್ಜಿ ಆಹ್ವಾನಿಸಿರುವ ಜಿಲ್ಲೆಗಳ ಪಟ್ಟಿ
ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ ಮತ್ತು ಖಾಲಿ ಹುದ್ದೆಗಳ ವಿವರ ಈ ಕೆಳಗಿನಂತಿದೆ:
- ಶಿವಮೊಗ್ಗ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 575 - ಚಿತ್ರದುರ್ಗ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 215 - ಬೆಳಗಾವಿ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 313 - ಉತ್ತರ ಕನ್ನಡ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 344 - ಕಲಬುರಗಿ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 299 - ಹಾವೇರಿ ಜಿಲ್ಲೆ
ಒಟ್ಟು ಖಾಲಿ ಹುದ್ದೆಗಳು : 152
ಮೇಲ್ಕಾಣಿಸಿದ ಜಿಲ್ಲೆಗಳ ಪೈಕಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ. ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳ ನೇಮಕಾತಿ ಈಗ ಆರಂಭವಾಗಿದೆ. ಅಷ್ಟೇ ಅಲ್ಲದೇ ಇನ್ನೂ ಹಲವು ಜಿಲ್ಲೆಗಳ ಖಾಲಿ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆಯಲಿದೆ.
ವಿದ್ಯಾರ್ಹತೆ ಏನಿರಬೇಕು?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಪಿಯುಸಿ ತೇರ್ಗಡೆ ಹೊಂದಿರುವ ಮಹಿಳೆಯರು ಹಾಗೂ ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಬಹುದು.
19 ರಿಂದ 35 ವರ್ಷದೊಳಗಿನ ಮಹಿಳೆಯರು, ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅಂಗನವಾಡಿ ಹುದ್ದೆಗಳಿಗೆ ಸಂಬಳವೆಷ್ಟು?
ಸದ್ಯಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 12,000 ರೂಪಾಯಿ ಹಾಗೂ ಂಗನವಾಡಿ ಸಹಾಯಕಿಯರಿಗೆ ಮಾಸಿಕ 8,000 ರೂಪಾಯಿ ಸಂಬಳ ನೀಡಲಾಗುತ್ತಿದೆ. ಸದ್ಯದಲ್ಲೇ ಸಂಬಳ ಹೆಚ್ಚಳವಾಗುವ ಸಾಧ್ಯತೆ ಇದ್ದು; ಇತರ ಸವಲತ್ತುಗಳೂ ಅನ್ವಯವಾಗಲಿವೆ.
ಅರ್ಜಿ ಸಲ್ಲಿಕೆ ಬೇಕಾಗುವ ದಾಖಲಾತಿಗಳು
- ವಿದ್ಯಾರ್ಹತೆ ಪ್ರಮಾಣ ಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ವಯಸ್ಸಿನ ದೃಢೀಕರಣಕ್ಕಾಗಿ ಜನನ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆತ್ಮಹತ್ಯೆಗೆ ಒಳಗಾದ ರೈತರ ಪತ್ನಿಯಾಗಿದ್ದಲ್ಲಿ ಸ್ಥಳೀಯ ಎಸಿ ಕಡೆಯಿಂದ ಪಡೆದ ಪ್ರಮಾಣ ಪತ್ರ
- ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ
- ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
ಅರ್ಜಿ ಸಲ್ಲಿಕೆ ಹೇಗೆ?
ಈಚೆಗೆ ಅಂಗನವಾಡಿ ಹುದ್ದೆಗಳ ನೇಮಕಾತಿಯನ್ನು ಆಪ್‌ಲೈನ್ ವ್ಯವಸ್ಥೆಯಿಂದ ಆನ್‌ಲೈನ್ ವ್ಯವಸ್ಥೆಗೆ ಬದಲಾಯಿಸಲಾಗಿದ್ದು; ಈ ವರ್ಷದಿಂದ ಅಂಗನವಾಡಿ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು https://karnemakaone.kar.nic.in/abcd/ ಭೇಟಿ ನೀಡಿ ಅಗತ್ಯ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
ಸ್ವತಃ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಗೊತ್ತಾಗದಿದ್ದರೆ, ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತವಾಗಿದ್ದು; ಕೇವಲ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳ ಸೇವಾ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : Apply Now
ರಾಜ್ಯದ ಇನ್ನುಳಿದ ಜಿಲ್ಲೆಗಳ ನೇಮಕಾತಿ ಕುರಿತ ನಿರಂತರ ಅಪ್ಡೇಟ್’ಗಾಗಿ ಮಾಹಿತಿಮನೆ ಡಾಟ್ ಕಾಂ ಫಾಲೋ ಮಾಡಿ…
B ed complete