Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಯುಗಾದಿಯ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯಾಗಲಿದ್ದು; ಕಾದ ಕಾವಲಿಯಂತಾಗಿರುವ ಭೂಮಿಗೆ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ…
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿಯಲ್ಲಿ ಏಪ್ರಿಲ್ 1ರಿಂದ 4ರ ವರೆಗೆ ಗುಡುಗು- ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ.
ಏಪ್ರಿಲ್ 2ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೀ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.

ಏಪ್ರಿಲ್ 3ರಂದು ಕರಾವಳಿ ಹಾಗೂ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಕೊಪ್ಪಳ, ವಿಜಯನಗರದಲ್ಲಿ ಏ. 3ರಿಂದ ಮುಂದಿನ ಎರಡು ದಿನ ಸಾಧಾರಣ ಮಳೆ ಬೀಳಲಿದೆ.
ಇನ್ನು ಏಪ್ರಿಲ್ 4 ಮತ್ತು 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ 40ರ ಗಡಿ ಮುಟ್ಟಿತ್ತು. ಉಳಿದೆಡೆ 35-36 ಅಸುಪಾಸಿನಲ್ಲಿ ದಾಖಲಾಗಿತ್ತು. ಏಪ್ರಿಲ್‌ನಲ್ಲಿ ಉಷ್ಣಾಂಶ ತುಸು ಹೆಚ್ಚಳದಿಂದಾಗಿ ರಾಜ್ಯದ ಶೇ.90 ಪ್ರದೇಶಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ