Karnataka Heavy Cold Wave – ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ಎಚ್ಚರಿಕೆ | ಹವಾಮಾನ ಇಲಾಖೆ ಮುನ್ಸೂಚನೆ

Spread the love

WhatsApp Group Join Now
Telegram Group Join Now

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ (Karnataka Heavy Cold Wave) ಆವರಿಸಿದೆ. ಮುಂದಿನ ಎರಡು ದಿನ ಹೆಚ್ಚಿನ ಥಂಡಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ…

ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತಗಾಳಿ (Cold Wave) ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿದಿದ್ದು, ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿ ಅನುಭವವಾಗುತ್ತಿದೆ.

ಇದನ್ನೂ ಓದಿ: Krushi Ilakhe Subsidy Yojanegalu- ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳು | ರಾಜ್ಯ ಮತ್ತು ಕೇಂದ್ರ ಸರ್ಕಾರ ಯೋಜನೆಗಳ ಪಟ್ಟಿ ಇಲ್ಲಿದೆ…

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಥಂಡಿ!

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಹೆಚ್ಚಾಗಿದೆ.

ಅದೇ ರೀತಿ ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಚಳಿ ಇನ್ನಷ್ಟು ತೀವ್ರಗೊಳ್ಳಲಿದೆ.

ಈ ಪ್ರದೇಶಗಳಲ್ಲಿ ಬೆಳಗಿನ ಜಾವ ಹಾಗೂ ತಡರಾತ್ರಿ ವೇಳೆಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ವೃದ್ಧರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಇರುವವರು ವಿಶೇಷ ಜಾಗರೂಕತೆ ವಹಿಸಬೇಕಾಗಿದೆ.

Karnataka Heavy Cold Wave
Karnataka Heavy Cold Wave

ಇದನ್ನೂ ಓದಿ: Karnataka PDO Recruitment 2026- 994 ಪಿಡಿಒ ಹುದ್ದೆಗಳ ನೇಮಕಾತಿ | ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಕನಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆ

ನಿನ್ನೆ ಡಿಸೆಂಬರ್ 14ರಂದು ದಾಖಲಾಗಿದ ತಾಪಮಾನ ಅಂಕಿಅಂಶಗಳು ಚಳಿಯ ತೀವ್ರತೆಯನ್ನು ಸ್ಪಷ್ಟವಾಗಿ ತೋರಿಸುತ್ತಿವೆ.

ಬೀದರ್ ಜಿಲ್ಲೆಯಲ್ಲಿ ಕನಿಷ್ಠ 7.4 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ 9.5 ಡಿಗ್ರಿ ಸೆಲ್ಸಿಯಸ್, ಹಾವೇರಿ ಮತ್ತು ವಿಜಯಪುರದಲ್ಲಿ ತಲಾ 10 ಡಿಗ್ರಿ ಸೆಲ್ಸಿಯಸ್ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಕಂಡು ಬಂದಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿಯೂ ಚಳಿ ಕಡಿಮೆಯಿಲ್ಲ. ಹಾಸನದಲ್ಲಿ 8.7 ಡಿಗ್ರಿ ಸೆಲ್ಸಿಯಸ್, ದಾವಣಗೆರೆ ಹಾಗೂ ಆಗುಂಬೆ (ಶಿವಮೊಗ್ಗ) ಪ್ರದೇಶಗಳಲ್ಲಿ ತಲಾ 9 ಡಿಗ್ರಿ ಸೆಲ್ಸಿಯಸ್ ಹಾಗೂ ಮಂಡ್ಯದಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ: Karnataka ZP-TP Election 2026- ಜಿ.ಪಂ, ತಾ. ಪಂ. ಚುನಾವಣೆ ಫಿಕ್ಸ್ | ಇನ್ನು ನಾಲ್ಕು ತಿಂಗಳೂಳಗೇ ಎಲೆಕ್ಷನ್ | ಸಚಿವ ಸಂಪುಟ ನಿರ್ಧಾರ

ವಾಹನ ಸವಾರರಿಗೆ ಹವಾಮಾನ ಇಲಾಖೆಯ ಎಚ್ಚರಿಕೆ

ಶೀತಗಾಳಿ ಮತ್ತು ಮಂಜಿನ ಪರಿಣಾಮದಿಂದ ರಸ್ತೆ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ವಿಮಾನ ನಿಲ್ದಾಣಗಳು, ಹೆದ್ದಾರಿಗಳು ಮತ್ತು ರೈಲ್ವೆ ಮಾರ್ಗಗಳ ಮೇಲೆ ಮಂಜು ಆವರಿಸುವುದರಿಂದ ಪ್ರಯಾಣ ನಿಧಾನವಾಗುವ ಸಾಧ್ಯತೆ ಇದೆ.

ವಿಶೇಷವಾಗಿ ಬೆಳಗಿನ ಜಾವ ವಾಹನ ಚಾಲನೆ ಮಾಡುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ದಟ್ಟ ಮಂಜಿನಿಂದ ರಸ್ತೆಗಳು ಅಸ್ಪಷ್ಟವಾಗಿ ಕಾಣಲಿದ್ದು; ಕೆಲ ಸಂದರ್ಭಗಳಲ್ಲಿ ಅಪಘಾತಗಳಿಗೂ ಕಾರಣವಾಗಬಹುದು. ಆದ್ದರಿಂದ ನಿಧಾನವಾಗಿ ವಾಹನ ಚಾಲನೆ ಮಾಡುವುದು, ಹೆಡ್‌ಲೈಟ್‌ಗಳನ್ನು ಸರಿಯಾಗಿ ಬಳಸುವುದು ಅತ್ಯಂತ ಅವಶ್ಯಕವಾಗಿದೆ.

WhatsApp Group Join Now
Telegram Group Join Now

ಇದನ್ನೂ ಓದಿ: Alvas Free Education Admission- ಉಚಿತ ಶಿಕ್ಷಣಕ್ಕಾಗಿ ಆಳ್ವಾಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ | ವಸತಿ, ಊಟೋಪಚಾರ ಸಂಪೂರ್ಣ ಉಚಿತ | ಅರ್ಜಿ ಲಿಂಕ್ ಇಲ್ಲಿದೆ

ಬೆಂಗಳೂರಿನಲ್ಲಿ ದಟ್ಟ ಮಂಜಿನ ಸಾಧ್ಯತೆ

ರಾಜಧಾನಿ ಬೆಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ.

ಒಟ್ಟಿನಲ್ಲಿ, ಮುಂದಿನ ಎರಡು ದಿನಗಳು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿ ಇನ್ನಷ್ಟು ಕಾಡುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಜಾಗರೂಕರಾಗಿ ನಡೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

Karnataka Bank Personal Loan- ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ | ಕಡಿಮೆ ಬಡ್ಡಿಯಲ್ಲಿ ₹25 ಲಕ್ಷವರೆಗೆ ಸುಲಭ ಸಾಲ


Spread the love
error: Content is protected !!