Karnataka Heavy Rain Alert- ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲಾವಾರಿ ಮಳೆ ಮಾಹಿತಿ ಇಲ್ಲಿದೆ…
ರಾಜ್ಯಾದ್ಯಾಂತ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದೆ. ಆಗಸ್ಟ್ 5ರಿಂದ 8ರ ವರೆಗೆ ಅಂದರೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. ಕೆಲ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಮಳೆ ಮುನ್ಸೂಚನೆ ಇರುವ ಜಿಲ್ಲೆಗಳ ವಿವರ
ರಾಜ್ಯದ ಹಲವೆಡೆ ಮುಂಗಾರು ಮಳೆ ಚುರುಕಾಗಿದ್ದು, ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತಾಪಮಾನದಲ್ಲಿ ತುಸು ಇಳಿಕೆಯು ಕಂಡುಬಂದಿದೆ ಮತ್ತು ಬಿಸಿಲಿನ ತೀವ್ರತೆ ಕಡಿಮೆಯಾಗಿದೆ. ಆಗಸ್ಟ್ 5ರಿಂದ 8ರ ವರೆಗೆ ಮಳೆ ಮುನ್ಸೂಚನೆ ಇರುವ ಜಿಲ್ಲೆಗಳ ವಿವರ ಈ ಕೆಳಗಿನಂತಿದೆ:
ಕರಾವಳಿ ಜಿಲ್ಲೆಗಳು
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6ರ ವರೆಗೆ ಯೆಲ್ಲೋ ಅಲರ್ಟ್ ಹಾಗೂ ಆಗಸ್ಟ್ 7 ಮತ್ತು 8ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 5 ರಿಂದ 8ರ ವರೆಗೆ ನಿರಂತರವಾಗಿ ಮಳೆಯಾಗುವ ನಿರೀಕ್ಷೆ ಇದ್ದು; ಇಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕಡಲ ತೀರದ ತೀವ್ರ ಗಾಳಿ, ಪ್ರವಾಹ ಸಂಭವನೆ ಇರುವ ಹಿನ್ನೆಲೆಯಲ್ಲಿ ಮೀನುಗಾರರು ಸಾಗರಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳು
ಆಗಸ್ಟ್ 5ರಂದು ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅದೇ ರೀತಿ ರಾಮನಗರ, ಮಂಡ್ಯ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಆಗಸ್ಟ್ 6ರಂದು ಹಾಸನ, ಮಂಡ್ಯ, ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ತುಮಕೂರು, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಜಿಲ್ಲೆಗಳಲ್ಲಿ ಹೆಚ್ಚು ಹೊತ್ತು ಸುರಿಯುವ ಧಾರಾಕಾರ ಮಳೆಯ ಕಾರಣವಾಗಿ ರೈತರ ಬೆಳೆಗೆ ಹಾನಿ ಸಂಭವಿಸಬಹುದೆಂದು ಕೃಷಿ ಇಲಾಖೆ ರೈತರಿಗೆ ಸೂಚನೆ ನೀಡಿದೆ. ಮುಂಗಾರು ಮಳೆ ಮತ್ತೆ ಧಾರಾಕಾರವಾಗಿ ಕಾಣಿಸಿಕೊಳ್ಳುವ ಸೂಚನೆಗಳಿವೆ.