Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ

Spread the love

WhatsApp Group Join Now
Telegram Group Join Now

Karnataka Old Pension Scheme: ಕರ್ನಾಟಕ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯದ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಕಾಯುತ್ತಿರುವ ಹಳೇ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸಂಬAಧಿಸಿದAತೆ ಮತ್ತೆ ಚರ್ಚೆ ಶುರುವಾಗಿದೆ.

ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಒಪಿಎಸ್ (OPS) ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿರುವುದು ನೌಕರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: Government Employees DA Hike: ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ | ಜುಲೈನಿಂದ 3% ಡಿಎ ಹೆಚ್ಚಳ? ಸಂಬಳ ಎಷ್ಟು ಏರಿಕೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಮುಖ್ಯಮಂತ್ರಿ ಸೂಚನೆಯಿಂದ ಮತ್ತೆ ಚರ್ಚೆಗೆ ವೇಗ

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನ ಸೆಳೆದಿತ್ತು.

ಈ ವೇಳೆ ಸಂಘ ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿ ಅವರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಒಪಿಎಸ್ (OPS) ಜಾರಿಗೆ ಸಂಬಂಧಿಸಿದ ಚರ್ಚೆಗಳು ಸರ್ಕಾರದ ಮಟ್ಟದಲ್ಲಿ ಮತ್ತೆ ವೇಗ ಪಡೆದಿವೆ.

ಇದನ್ನೂ ಓದಿ: 18 Lakh Pension Stopped: ರಾಜ್ಯದಲ್ಲಿ 18 ಲಕ್ಷಕ್ಕೂ ಹೆಚ್ಚು ಜನರ ಪಿಂಚಣಿ ಬಂದ್ | ಫಲಾನುಭವಿಗಳಿಗೆ ಮಹತ್ವದ ಮಾಹಿತಿ

ರಾಜ್ಯದಲ್ಲಿ ಎಷ್ಟು ನೌಕರರಿಗೆ ಇದರ ಲಾಭ?

ಪ್ರಸ್ತುತ ಕರ್ನಾಟಕದಲ್ಲಿ ಸುಮಾರು 5.7 ಲಕ್ಷ ಸರ್ಕಾರಿ ನೌಕರರು ಸೇವೆಯಲ್ಲಿದ್ದಾರೆ. ಇವರಲ್ಲಿ 2.8 ಲಕ್ಷಕ್ಕೂ ಹೆಚ್ಚು ನೌಕರರು ಹೊಸ ಪಿಂಚಣಿ ಯೋಜನೆ (National Pension System – NPS) ವ್ಯಾಪ್ತಿಯಲ್ಲಿದ್ದಾರೆ.

2006ರ ನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲ ನೌಕರರು ಎನ್‌ಪಿಎಸ್ (NPS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಪಿಎಸ್ (OPS) ಮರು ಜಾರಿಯಾದರೆ ಈ ನೌಕರರಿಗೆ ಹೆಚ್ಚಿನ ಭದ್ರತೆ ದೊರೆಯುವ ಸಾಧ್ಯತೆ ಇದೆ ಎಂದು ನೌಕರರ ಸಂಘಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿವೆ.

ಇದನ್ನೂ ಓದಿ: Intense Pushya rain: ಕರ್ನಾಟಕದಲ್ಲಿ ಪುಷ್ಯ ಮಳೆ ಅಬ್ಬರ: ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Karnataka Old Pension Scheme
Karnataka Old Pension Scheme

ಸರ್ಕಾರದ ಮೇಲೆ ಎಷ್ಟು ಆರ್ಥಿಕ ಹೊರೆ?

ಪ್ರಸ್ತುತ ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಗಾಗಿ ವರ್ಷಕ್ಕೆ ಸುಮಾರು 1.2 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.

ಒಪಿಎಸ್ (OPS) ಜಾರಿಯಾದರೆ ಆರಂಭದಲ್ಲಿ ಹೆಚ್ಚಿನ ಪರಿಣಾಮ ಕಾಣಿಸದಿದ್ದರೂ, ಮುಂದಿನ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯ ನೌಕರರು ನಿವೃತ್ತಿಯಾಗುತ್ತಿದ್ದಂತೆ ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ ಎಂದು ಹಣಕಾಸು ತಜ್ಞರು ಅಂದಾಜಿಸಿದ್ದಾರೆ. ಇದೇ ಕಾರಣಕ್ಕೆ ಸರ್ಕಾರ ಈ ವಿಷಯವನ್ನು ಎಚ್ಚರಿಕೆಯಿಂದ ಪರಿಶೀಲಿಸುತ್ತಿದೆ.

ಇದನ್ನೂ ಓದಿ: e-Swathu New Committee: ಇ-ಸ್ವತ್ತು ಪಡೆಯುವುದು ಇನ್ನು ಸುಲಭ! ಸರ್ಕಾರದಿಂದ ಮಹತ್ವದ ನಿರ್ಧಾರ

ನಾಲ್ಕು ರಾಜ್ಯಗಳ ಮಾದರಿ ಅಧ್ಯಯನ

ಹಳೆಯ ಪಿಂಚಣಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿರುವ ರಾಜಸ್ಥಾನ, ಹಿಮಾಚಲ ಪ್ರದೇಶ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಅನುಭವವನ್ನು ಅಧ್ಯಯನ ಮಾಡಲು ಕರ್ನಾಟಕ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಗಳ ಸಮಿತಿಯನ್ನು ರಚಿಸಿದೆ.

WhatsApp Group Join Now
Telegram Group Join Now

ಈ ಸಮಿತಿ ಸಂಬಂಧಿತ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದು, ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಇನ್ನೂ ಸಲ್ಲಿಸಿಲ್ಲ. ವರದಿ ಬಂದ ನಂತರ ಸರ್ಕಾರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Drought Declaration: ರಾಜ್ಯದಲ್ಲಿ ಬರ ಘೋಷಣೆ ಫಿಕ್ಸ್! ಯಾವ ರೈತರಿಗೆ ಎಷ್ಟು ಪರಿಹಾರ ಸಿಗಲಿದೆ? ಸರ್ಕಾರದ ಕ್ರಮಗಳ ಸಂಪೂರ್ಣ ಮಾಹಿತಿ

ಇದುವರೆಗೆ ಏನೇನಾಗಿದೆ?

ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿತ್ತು. ಸರ್ಕಾರಿ ನೌಕರರ ಸಂಘವು ಮತ್ತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನವಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: HRA Hike: ಸರ್ಕಾರಿ ನೌಕರರಿಗೆ ಶುಭಸುದ್ದಿ: ಸಂಬಳದ ಜೊತೆಗೆ ಮನೆ ಬಾಡಿಗೆ ಭತ್ಯೆ ಭಾರೀ ಏರಿಕೆ | ಇಲ್ಲಿದೆ ಸಂಪೂರ್ಣ ಮಾಹಿತಿ…

ನೌಕರರ ಸಂಘದ ವಿಶ್ವಾಸ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಪ್ರಕಾರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಳೆಯ ಪಿಂಚಣಿ ಯೋಜನೆ ಕುರಿತು ಸಕಾರಾತ್ಮಕ ಭರವಸೆ ನೀಡಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅನುಕೂಲಕರ ತೀರ್ಮಾನ ಹೊರಬರಬಹುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Govt Employee Transfer New Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ರೂಲ್ಸ್ ಜಾರಿ | ಇನ್ನು ಮುಂದೆ ಈ ನಿಯಮ ಕಡ್ಡಾಯ | ರಾಜ್ಯ ಸರ್ಕಾರದ ಮಹತ್ವದ ಆದೇಶ

ಮನವಿ ಪರಿಶೀಲನೆಗೆ ಸೂಚನೆ

ಹಳೇ ಪಿಂಚಣಿ ಯೋಜನೆ (OPS) ಕುರಿತು ಸರ್ಕಾರ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಸದ್ಯಕ್ಕೆ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಮನವಿಯನ್ನು ಪರಿಶೀಲಿಸುವಂತೆ ಸೂಚನೆ ನೀಡಿರುವುದು ಮತ್ತು ಅಧ್ಯಯನ ಸಮಿತಿಯ ವರದಿ ನಿರೀಕ್ಷೆಯಲ್ಲಿರುವುದು ಪ್ರಮುಖ ಬೆಳವಣಿಗೆಯಾಗಿದೆ.

ಹೀಗಾಗಿ, ಒಪಿಎಸ್ (OPS) ಜಾರಿಯ ಬಗ್ಗೆ ಅಂತಿಮ ಘೋಷಣೆ ಹೊರಬರುವವರೆಗೆ ಸರ್ಕಾರಿ ನೌಕರರು ಸರ್ಕಾರದ ಅಧಿಕೃತ ಪ್ರಕಟಣೆಯನ್ನು ಗಮನಿಸುವುದು ಸೂಕ್ತ. ಈ ಬೆಳವಣಿಗೆ ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಮಹತ್ವದ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

SIR Status Check By SMS: ಎಸ್‌ಐಆರ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಜಸ್ಟ್ ಒಂದು ಎಸ್‌ಎಂಎಸ್ ಮೂಲಕ ಚೆಕ್ ಮಾಡಿ!


Spread the love
error: Content is protected !!