ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ 4,115 ಕಾನ್’ಸ್ಟೇಬಲ್ ಹಾಗೂ ಪಿಎಸ್‌ಐ ಹುದ್ದೆಗಳು : ನೇಮಕಾತಿ ಯಾವಾಗ? ಅರ್ಹತೆಗಳೇನು? Karnataka Police Constable & PSI Recruitment 2024

Spread the love

Karnataka Police Constable & PSI Recruitment 2024 : ಕಳೆದ ಜುಲೈ 23 ಹಾಗೂ ಜುಲೈ 25, 2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ (Karnataka Police Department) ಖಾಲಿ ಇರುವ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ಚರ್ಚೆಗಳು ನಡೆದಿದ್ದು, ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ ಎಷ್ಟು? ನೇಮಕಾತಿ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್’ಸ್ಟೇಬಲ್, ಪಿಎಸ್‌ಐ ಸೇರಿದಂತೆ ವಿವಿಧ ವೃಂದಗಳಲ್ಲಿ ಹುದ್ದೆಗಳನ್ನು ನೇರ ನೇಮಕಾತಿ ಮತ್ತು ಮುಂಬಡ್ತಿ ನಿಯಮಗಳಡಿ ಮಂಜೂರಾದ ಹುದ್ದೆಗಳ ಸಂಖ್ಯೆಗಳ ಎಷ್ಟು ಎಂಬುದರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು ನೀಡಿದ ಅಧಿಕೃತ ಮಾಹಿತಿ ಈ ಲೇಖನದಲ್ಲಿದೆ.

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸದ್ಯಕ್ಕೆ 1,500 CAR/DAR ಹುದ್ದೆಗಳ ನೇಮಕಾತಿ ಹಾಗೂ 3,000 ಪೊಲೀಸ್ ಕಾನ್’ಸ್ಟೇಬಲ್ ಸಿವಿಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದ್ದು, ಇದರ ನಂತರ ಅಗತ್ಯವಿರುವ ಇನ್ನೂ 4,115 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಅನುಮೋದನೆ ನೀಡಿರುತ್ತದೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗುವ ಪರಿಷ್ಕೃತ ಪಿಂಚಣಿ ಹಣವೆಷ್ಟು? ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ…. 7th pay pension calculator

Karnataka Police Constable & PSI Recruitment 2024
ಯಾವ್ಯಾವ ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದೆ?

ಜುಲೈ 25, 2024ರಂದು ನಡೆದ ಸಚಿವ ಸಂಪುಟದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರ ಅಧಿಕೃತ ಮಾಹಿತಿಯ ಪ್ರಕಾರ ಈ ಕೆಳಕಂಡ 4,115 ಹುದ್ದೆಗಳಿಗೆ ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದೆ.

  • CAR/DAR : 2,000 ಹುದ್ದೆಗಳು
  • KSTP ಕಾನ್’ಸ್ಟೇಬಲ್ : 1,500 ಹುದ್ದೆಗಳು
  • PSI : 600 ಹುದ್ದೆಗಳು
  • DSI : 15 ಹುದ್ದೆಗಳು

ಇದನ್ನೂ ಓದಿ: ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಗಸ್ಟ್ 29ರೊಳಗೆ ಅರ್ಜಿ ಸಲ್ಲಿಸಿ… Anganwadi Nemakati Karnataka 2024

ಹುದ್ದೆಗಳ ನೇಮಕಾತಿ ಯಾವಾಗ ನಡೆಯಲಿದೆ?

ಗೃಹ ಸಚಿವರಾದ (Home Minister) ಡಾ. ಜಿ. ಪರಮೇಶ್ವರ್ ಅವರ ಅಧಿಕೃತ ಮಾಹಿತಿಯ ಪ್ರಕಾರ, ಮೇಲೆ ನೀಡಿರುವ ಹುದ್ದೆಗಳ ನೇಮಕಾತಿಗೆ ಈಗಾಗಲೇ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು ಮುಂದಿನ ಒಂದು ವರ್ಷದ ಅವಧಿಯಲ್ಲಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಅರ್ಹತೆಗಳು
  • ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ CAR / DAR 2,000 ಹುದ್ದೆಗಳಿಗೆ ಹಾಗೂ KSRP ಕಾನ್’ಸ್ಟೇಬಲ್ 1,500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು.
  • ಪಿಎಸ್‌ಐ 600 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು.

 

ಇದನ್ನೂ ಓದಿ: ಹೋಮ್‌ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ ತರಗತಿ ಪಾಸಾದ್ರೆ ಅರ್ಜಿ ಹಾಕಿ Home Guard Recruitment Shivamogga

Karnataka Police Constable & PSI Recruitment 2024
ಆಯ್ಕೆಯಾದವರಿಗೆ ಸಿಗುವ ವೇತನವೆಷ್ಟು?

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ವಿವರವೂ ಈ ಕೆಳಗಿನಂತಿದೆ:

  • CAR / DAR ಹುದ್ದೆಗಳಿಗೆ ಹಾಗೂ KSRP ಕಾನ್’ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23,500 ರೂ. ಯಿಂದ 47,650 ರೂ. ವರೆಗೆ ಮಾಸಿಕ ವೇತನ ಸಿಗುತ್ತದೆ.
  • ಪಿಎಸ್‌ಐ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 37,900 ರೂ. ಯಿಂದ 70,850 ರೂ. ವರೆಗೆ ಮಾಸಿಕ ವೇತನ ಇರುತ್ತದೆ.

ಇದನ್ನೂ ಓದಿ: ಕೃಷಿ ಇಲಾಖೆಯ 1,138 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ | ಪಿಯುಸಿ ಪಾಸಾದವರಿಗೂ ಅವಕಾಶ Karnataka Agri Officers Recruitment 2024

ವಯೋಮಿತಿ ವಿವರ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವವರಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಪೊಲೀಸ್ ಇಲಾಖೆಯಲ್ಲಿನ ಈ ಹಲವು ಹುದ್ದೆಗಳ ನೇಮಕಾತಿಗೆ ಈಗಾಗಲೇ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಕಾಲಕಾಲಕ್ಕೆ ರಿಕ್ತ ಸ್ಥಾನವನ್ನು ಆಧರಿಸಿ ಹಾಗೂ ಅನುದಾನದ ಲಭ್ಯತೆಗೆ ಅನುಗುಣವಾಗಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಪಿಯು ಕಾಲೇಜ್ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ | 814 ಹುದ್ದೆಗಳ ನೇಮಕ PU Lecturer Recruitment 2024

 


Spread the love
WhatsApp Group Join Now
Telegram Group Join Now

Leave a Comment

error: Content is protected !!