Karnataka Postal Circle Recruitment 2026: 10ನೇ ತರಗತಿ ಪಾಸಾಗಿದ್ದೀರಾ? ಕರ್ನಾಟಕ ಅಂಚೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದೆ. ಈಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ…
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ರಾಜ್ಯದ ಯುವಜನತೆಗೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ! ನೀವು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಅಂಚೆ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬಹುದು.
ಹೌದು, ಆಗಸ್ಟ್ 2026ರ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಗ್ರಾಮೀಣ ಡಾಕ್ ಸೇವಕ್ (Gramin Dak Sevak – GDS) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ಕೇವಲ ಎಸ್ಎಸ್ಎಲ್ಸಿ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ನಡೆಯಲಿದೆ.
ಇದನ್ನೂ ಓದಿ: Swavalambi Sarathi Yojana 2026: ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ
ಆಕರ್ಷಕ ವೇತನ ಶ್ರೇಣಿ (Salary Details)
ಬ್ರಾಂಚ್ ಪೋಸ್ಟ್ ಮಾಸ್ಟರ್ (BPM), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPM) ಹಾಗೂ ಡಾಕ್ ಸೇವಕ್ ಹುದ್ದೆಗಳನ್ನು ಈ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ಉತ್ತಮ ವೇತನ ಸಿಗಲಿದೆ:
- ಶಾಖಾ ಪೋಸ್ಟ್ ಮಾಸ್ಟರ್ (BPM): ಮಾಸಿಕ ರೂ. 12,000 ದಿಂದ ರೂ. 29,380/-
- ABPM ಮತ್ತು ಡಾಕ್ ಸೇವಕ್: ಮಾಸಿಕ ರೂ. 10,000 ದಿಂದ ರೂ. 24,470/-
ಇದನ್ನೂ ಓದಿ: Ration Card e-KYC: ರೇಷನ್ ಕಾರ್ಡುದಾರರಿಗೆ ಸರ್ಕಾರದ ಮಹತ್ವದ ಎಚ್ಚರಿಕೆ
ಅರ್ಜಿ ಸಲ್ಲಿಸಲು ಯಾರು ಅರ್ಹರು? (Eligibility Criteria)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್’ನಿಂದ 10ನೇ ತರಗತಿ (10th Pass Govt Jobs) ಪಾಸಾಗಿರಬೇಕು. ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷದೊಳಗಿನ ಯಾರು ಬೇಕಾದರೂ ಅರ್ಜಿ ಹಾಕಬಹುದು.
ಜೊತೆಗೆ, ಸರ್ಕಾರಿ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ (Age Relaxation) ನೀಡಲಾಗಿದೆ. ಓಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ (SC/ST) ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ (PWD) ಅಭ್ಯರ್ಥಿಗಳಿಗೆ 10 ರಿಂದ 15 ವರ್ಷಗಳವರೆಗೆ ವಯೋಮಿತಿಯಲ್ಲಿ ವಿನಾಯಿತಿ ಇರಲಿದೆ.
ಇದನ್ನೂ ಓದಿ: Crop Insurance: ರೈತರ ಖಾತೆಗೆ ಬಂತು 13.39 ಕೋಟಿ ರೂ. ಬೆಳೆ ವಿಮೆ ಪರಿಹಾರ

ಪರೀಕ್ಷೆ ಇರುವುದಿಲ್ಲ, ಆಯ್ಕೆ ಹೇಗೆ? (Selection Process)
ವಿಶೇಷವೆಂದರೆ, ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಕಂಪ್ಯೂಟರ್ ವ್ಯವಸ್ಥೆಯಿಂದಲೇ ನೇರವಾಗಿ ಮೆರಿಟ್ ಪಟ್ಟಿ (Merit List) ಸಿದ್ಧಪಡಿಸಲಾಗುತ್ತದೆ (4-ದಶಮಾಂಶ ಶೇಕಡಾವಾರು ನಿಖರತೆಯ ಆಧಾರದ ಮೇಲೆ).
ತದನಂತರ ಶಾರ್ಟ್ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಭೌತಿಕವಾಗಿ ದಾಖಲಾತಿಗಳ ಪರಿಶೀಲನೆ (Document Verification) ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: Gruhalakshmi Beneficiaries Reverification: ಗೃಹಲಕ್ಷ್ಮಿ ಹಣ ಪಡೆಯುವವರಿಗೆ ಮಹತ್ವದ ಸೂಚನೆ | ಸಿಎಂ ಸ್ಪಷ್ಟನೆ
ಶುಲ್ಕ ಮತ್ತು ಅರ್ಜಿ ಸಲ್ಲಿಕೆ ವಿಧಾನ (How to Apply Online)
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ, ಇಮೇಲ್ ಐಡಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಅಧಿಕೃತ ವೆಬ್ಸೈಟ್ (indiapost.gov.in) ಮೂಲಕ ಆನ್ಲೈನ್ನಲ್ಲಿ ಅರ್ಜಿ (Apply Online) ಸಲ್ಲಿಸಬೇಕು.
ಸಾಮಾನ್ಯ ಮತ್ತು ಓಬಿಸಿ ವರ್ಗದ ಪುರುಷ ಅಭ್ಯರ್ಥಿಗಳು ಕೇವಲ ರೂ. 100 ಅರ್ಜಿ ಶುಲ್ಕವನ್ನು (Application Fee) ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
ಮಹಿಳೆಯರು, ಎಸ್ಸಿ/ಎಸ್ಟಿ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ (ಉಚಿತ).
ಪ್ರಮುಖ ದಿನಾಂಕಗಳು (Important Dates)
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-ಸೆಪ್ಟೆಂಬರ್-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಸೆಪ್ಟೆಂಬರ್-2026
- ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ (Edit Window): 23-ಸೆಪ್ಟೆಂಬರ್-2026 ರಿಂದ 24-ಸೆಪ್ಟೆಂಬರ್-2026
ಕೊನೆಯ ಕ್ಷಣದ ಸರ್ವರ್ ಸಮಸ್ಯೆಗಳನ್ನು ತಪ್ಪಿಸಲು, ಆಸಕ್ತರು ಕಡೆಯ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸುವುದು ಉತ್ತಮ.
ಪ್ರಮುಖ ಲಿಂಕುಗಳು

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.