ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ 50,000 ರೂ. ವರೆಗೆ ಪ್ರೋತ್ಸಾಹ ಧನ (Karnataka Prize Money Scholarship) ನೀಡಲಾಗುತ್ತಿದ್ದು; ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ…
ಓದಿನಲ್ಲಿ ಅಪಾರ ಪ್ರತಿಭೆ ಇದ್ದರೂ, ಆರ್ಥಿಕ ಅಡಚಣೆಗಳಿಂದಾಗಿ ತಮ್ಮ ಕನಸುಗಳನ್ನು ಅರ್ಧದಲ್ಲೇ ನಿಲ್ಲಿಸಬೇಕಾದ ಅನೇಕ ವಿದ್ಯಾರ್ಥಿಗಳು ನಮ್ಮ ಸಮಾಜದಲ್ಲಿದ್ದಾರೆ. ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದ ದಾರಿಯಲ್ಲಿ ಬೆಂಬಲ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸಿದೆ.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ (Prize Money) ನೀಡುವ ರಾಜ್ಯ ಸರ್ಕಾರದ ಈ ಯೋಜನೆಯಡಿ 7,500 ರೂ. ದಿಂದ 50,000 ರೂ. ವರೆಗೆ ಆರ್ಥಿಕ ನೆರವು ದೊರೆಯಲಿದೆ. ಈ ಯೋಜನೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸುವ ಜೊತೆಗೆ, ಮುಂದಿನ ಹಂತದ ಶಿಕ್ಷಣಕ್ಕೆ ಧೈರ್ಯ ತುಂಬುವ ಕಾರ್ಯ ಮಾಡುತ್ತಿದೆ.
ಇದನ್ನೂ ಓದಿ: KCET 2026 Exam Timetable- 2026ನೇ ಸಾಲಿನ ಸಿಇಟಿ ಪರೀಕ್ಷೆ ದಿನಾಂಕ ನಿಗದಿ | ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…
Prize Money Scheme- ಏನಿದು ಪ್ರೈಜ್ ಮನಿ ಯೋಜನೆ?
ರಾಜ್ಯ ಸಕರ್ಶರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಈ ಪ್ರೋತ್ಸಾಹಧನ (Prize Money) ಯೋಜನೆಯನ್ನು ಜಾರಿಗೊಳಿಸಿದೆ. ಪ್ರತಿಭೆಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಹಣಕಾಸಿನ ನೆರವನ್ನು ನೇರವಾಗಿ ವಿದ್ಯಾರ್ಥಿಗಳಿಗೆ ನೀಡುತ್ತಿದೆ.
ಎಸ್‌ಎಸ್‌ಎಲ್‌ಸಿಯಿಂದ ಹಿಡಿದು ಸ್ನಾತಕೋತ್ತರ ಹಾಗೂ ವೃತ್ತಿಪರ ಪದವಿಗಳವರೆಗೆ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅಡಿಯಲ್ಲಿ ಪ್ರೋತ್ಸಾಹಧನ ನೀಡಲಾಗುತ್ತದೆ.
Eligibility- ಯಾರು ಅರ್ಜಿ ಸಲ್ಲಿಸಬಹುದು?
ಪ್ರೋತ್ಸಾಹಧನ ಯೋಜನೆಯ ಅಡಿಯಲ್ಲಿ ಆರ್ಥಿಕ ನೆರವು ಪಡೆಯಲು ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
ಎಸ್‌ಎಸ್‌ಎಲ್‌ಸಿ, ಪಿಯುಸಿ/ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಅಥವಾ ವೃತ್ತಿಪರ ಪದವಿಯನ್ನು ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

Stage-wise Incentives- ಯಾವ ಹಂತಕ್ಕೆ ಎಷ್ಟು ಪ್ರೋತ್ಸಾಹ ಧನ?
ವಿದ್ಯಾರ್ಥಿಗಳ ಶೈಕ್ಷಣಿಕ ಹಂತಕ್ಕೆ ಅನುಗುಣವಾಗಿ ಪ್ರೋತ್ಸಾಹ ಧನವನ್ನು ನಿಗದಿಪಡಿಸಲಾಗಿದೆ, ಪ್ರೀತ್ಸಾಹಧನದ ವಿವರ ಹೀಗಿದೆ:
- ಎಸ್‌ಎಸ್‌ಎಲ್‌ಸಿ ಶೇ. 60 ರಿಂದ 75ರಷ್ಟು ಅಂಕ ಪಡೆದರೆ 7,500 ರೂ. ಹಾಗೂ ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದರೆ 15,000 ರೂ.
- ಪಿಯುಸಿ ಅಥವಾ ಡಿಪ್ಲೊಮಾ ಪಾಸಾದವರಿಗೆ 20,00 ರೂ.
- ಪದವಿ (ಡಿಗ್ರಿ) ಪಾಸಾದವರಿಗೆ 25,000 ರೂ.
- ಸ್ನಾತಕೋತ್ತರ ಪದವಿ (PG) ಪಾಸಾದವರಿಗೆ 30,000 ರೂ.
- ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ ಮುಂತಾದ ವೃತ್ತಿಪರ ಕೋರ್ಸ್ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ 35,000 ರೂ.
Special Achievement Bonus- ವಿಶೇಷ ಸಾಧನೆಗೆ ಬಂಪರ್ ಬಹುಮಾನ
ವಿಶ್ವವಿದ್ಯಾಲಯ ಮಟ್ಟದಲ್ಲಿ ಪಿಜಿ ಕೋರ್ಸ್’ಗಳಲ್ಲಿ ವಿವಿಧ ವಿಷಯಗಳಲ್ಲಿ 1 ರಿಂದ 5ನೇ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ 50,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಇದು ಈ ಯೋಜನೆಯಲ್ಲಿನ ಅತ್ಯಂತ ಆಕರ್ಷಕ ಅಂಶವಾಗಿದೆ.
Prize Money Objective- ಈ ಯೋಜನೆಯ ಉದ್ದೇಶವೇನು?
ಈ ಯೋಜನೆಯ ಮುಖ್ಯ ಗುರಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಬೆಂಬಲ ನೀಡುವುದಾಗಿದೆ.
ಇದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ, ಶಿಕ್ಷಣ ಮುಂದುವರಿಸಲು ಪ್ರೇರಣೆ ಸಿಗುತ್ತದೆ ಮತ್ತು ಸಮಾಜದಲ್ಲಿ ಸಮಾನ ಅವಕಾಶಗಳತ್ತ ಒಂದು ಹೆಜ್ಜೆ ಇಡಲು ಸಹಕಾರಿಯಾಗುತ್ತದೆ.
Application Process- ಅರ್ಜಿ ಸಲ್ಲಿಸುವ ವಿಧಾನ
ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮತ್ತು ಆಪ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವೇಳೆ ಶೈಕ್ಷಣಿಕ ಪ್ರಮಾಣಪತ್ರಗಳು, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ಬ್ಯಾಂಕ್ ವಿವರಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಅಗತ್ಯ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಅಥವಾ ತಮ್ಮ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು.
ಆರ್ಥಿಕ ಕೊರತೆಯಿಂದ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕೈಗೊಂಡಿರುವ ಈ ಕ್ರಮ ನಿಜಕ್ಕೂ ಶ್ಲಾಘನೀಯ. ಅರ್ಹರಾಗಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ತಪ್ಪದೇ ಬಳಸಿಕೊಂಡು ತಮ್ಮ ಭವಿಷ್ಯವನ್ನು ಮತ್ತಷ್ಟು ಬೆಳಗಿಸಿಕೊಳ್ಳಬಹುದು.
Apply Links – ಅರ್ಜಿ ಲಿಂಕುಗಳು
- Post Matric Prize Money Link 2025-26: Apply Online
- SSLC Prize Money Application Link 2025-26: Apply Online