Karnataka Rain Alert- ರಾಜ್ಯದ 15 ಜಿಲ್ಲೆಗಳಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

Spread the love

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು (Karnataka Rain Alert) ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಬಿರುಸಾಗಿರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಮುನ್ಸೂಚನೆ ನೀಡಲಾಗಿದೆ.

ಮುಖ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ನಿರಂತರವಾಗಿ ಗಾಳಿಯ ಜತೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸೂಚನೆ ಇದೆ.

ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಹಾಗೂ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

KCET 2025 1st Round Seat Allotment- ಕೆಸಿಇಟಿ ಶೇ.80ರಷ್ಟು ಸೀಟು ಹಂಚಿಕೆ ಪೂರ್ಣ | 2ನೇ ಸುತ್ತಿನಲ್ಲಿ ಅವಕಾಶ ವಂಚಿತರಿಗೆ ಮತ್ತೊಂದು ಚಾನ್ಸ್

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ...
Karnataka Rain Alert 15 Districts Weather Warning
ಆರೆಂಜ್ ಅಲರ್ಟ್ ಇರುವ ಜಿಲ್ಲೆಗಳು

ಉತ್ತರ ಕರ್ನಾಟಕದ ಬಾಗಲಕೋಟೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಆಗಸ್ಟ್ 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ ತೀವ್ರ ಮಳೆಯ ಸಾಧ್ಯತೆ ಇದೆ. ಭಾರಿ ಮಳೆ ಬೀಳುವ ಹಿನ್ನೆಲೆ ನದಿಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶ

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 2 ದಿನಗಳ ವರೆಗೆ ಗುಡುಗು ಸಹಿತ ಸಾಧಾರಣ ಮಳೆಯ ಸಂಭವವಿದೆ. ಹವಾಮಾನ ಇಲಾಖೆ ತಿಳಿಸಿರುವಂತೆ ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ. ಸಾರ್ವಜನಿಕರು ಎಚ್ಚರದಿಂದ ಇರಬೇಕೆಂದು ಸೂಚಿಸಲಾಗಿದೆ.

IBPS Bank Jobs- ಕರ್ನಾಟಕದ 11 ಪ್ರಮುಖ ಬ್ಯಾಂಕ್‌ಗಳಲ್ಲಿ 1,170 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

ಚಂಡಮಾರುತ ಪರಿಸ್ಥಿತಿ ಸೃಷ್ಟಿ

ಕರ್ನಾಟಕದ ಪಕ್ಕದ ರಾಜ್ಯಗಳಲ್ಲಿ ಕೂಡ ಮುಂಗಾರು ತೀವ್ರವಾಗಿದ್ದು, ಕೇರಳ ಮತ್ತು ತಮಿಳುನಾಡುಗಳಲ್ಲಿ ಭಾರೀ ಮಳೆ ಕಾಣಿಸಿಕೊಂಡಿದೆ. ಹವಾಮಾನ ಇಲಾಖೆ (IMD) ನೀಡಿದ ಮಾಹಿತಿಯಂತೆ ಕೇರಳದ ನದಿಗಳು, ಅಣಿಕಟ್ಟುಗಳು ತುಂಬಿ ಹರಿಯುತ್ತಿರುವ ಹಿನ್ನೆಲೆ, ಅಲ್ಲಿನ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕೇರಳದ ದಕ್ಷಿಣ ಭಾಗದಿಂದ ಹಿಡಿದು ತಮಿಳುನಾಡು ಕರಾವಳಿ ವರೆಗೆ ಚಂಡಮಾರುತದ ಪರಿಸ್ಥಿತಿ ಕಂಡುಬಂದಿದೆ. ಇದರ ಪರಿಣಾಮವಾಗಿ, ದಕ್ಷಿಣ ಭಾರತದ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬಂದಿದ್ದು, ಮುಂಗಾರು ಮಳೆಯ ತೀವ್ರತೆಗೆ ಈ ಪರಿಸ್ಥಿತಿಯೇ ಕಾರಣವೆಂದು ಐಎಂಡಿ ಸ್ಪಷ್ಟಪಡಿಸಿದೆ.

New Ration Card Applications- ಹೊಸ ರೇಷನ್ ಕಾರ್ಡ್ ಅರ್ಜಿ | ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ…


Spread the love
WhatsApp Group Join Now
Telegram Group Join Now
error: Content is protected !!