EducationNews

Karnataka SSLC Half Yearly Exam- ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 12ರಿಂದ ಆರಂಭ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

Spread the love

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಪ್ರಕಟವಾಗಿದ್ದು; ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (Karnataka SSLC Half Yearly Exam) ಬಿಡುಗಡೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಹತ್ತನೇ ತರಗತಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಈ ತಿಂಗಳ ಸೆಪ್ಟೆಂಬರ್ 12 ರಿಂದ ಆರಂಭವಾಗಿ ಸೆಪ್ಟೆಂಬರ್ 19ರ ವರೆಗೆ ಅರ್ಧವಾರ್ಷಿಕ ಪರೀಕ್ಷೆಗಳು ನಡೆಯಲಿವೆ.

ಇದನ್ನೂ ಓದಿ: Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು

ವಿಷಯವಾರು ದಿನಾಂಕಗಳ ವೇಳಾಪಟ್ಟಿ

ರಾಜ್ಯಾದ್ಯಂತ ನಡೆಯಲಿರುವ ಈ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು KSEAB ತಯಾರಿಸಿದ್ದು, ಶಾಲೆಗಳ ಮಟ್ಟದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಮೌಲ್ಯಮಾಪನ ಮಾಡಲು ಈ ಪರೀಕ್ಷೆ ಬಹಳ ಪ್ರಮುಖವಾಗಿದೆ. ಪರೀಕ್ಷೆ ನಡೆಯಲಿರುವ ವಿಷಯವಾರು ದಿನಾಂಕಗಳ ವೇಳಾಪಟ್ಟಿ ಈ ಕೆಳಗಿನಂತಿದೆ:

  • ಸೆಪ್ಟೆಂಬರ್ 12: ಪ್ರಥಮ ಭಾಷೆ
  • ಸೆಪ್ಟೆಂಬರ್ 13: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
  • ಸೆಪ್ಟೆಂಬರ್ 15: ದ್ವಿತೀಯ ಭಾಷೆ
  • ಸೆಪ್ಟೆಂಬರ್ 16: ಗಣಿತ, ಸಮಾಜಶಾಸ್ತ್ರ
  • ಸೆಪ್ಟೆಂಬರ್ 17: ತೃತೀಯ ಭಾಷೆ, ಎನ್‌ಎಸ್‌ಕ್ಯೂಎಫ್ ವಿಷಯಗಳು
  • ಸೆಪ್ಟೆಂಬರ್ 18: ಸಮಾಜ ವಿಜ್ಞಾನ
  • ಸೆಪ್ಟೆಂಬರ್ 19: ಜೆಟಿಎಸ್ ಪರೀಕ್ಷೆ
ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಪ್ರಕಟವಾಗಿದ್ದು; ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ...
Karnataka SSLC Half Yearly Exam 2025
ಪರೀಕ್ಷೆಯ ಸಮಯ

ಸಂಗೀತ ಪರೀಕ್ಷೆ ಹೊರತುಪಡಿಸಿ ಉಳಿದ ಎಲ್ಲಾ ವಿಷಯಗಳ ಪರೀಕ್ಷೆಗಳು ನಿಗದಿಪಡಿಸಿದ ದಿನಾಂಕದಂದು ಬೆಳಿಗ್ಗೆ 10:30ಕ್ಕೆ ಪ್ರಾರಂಭವಾಗುತ್ತವೆ. ಹಿಂದೂಸ್ಥಾನಿ ಮತ್ತು ಕರ್ನಾಟಕ ಸಂಗೀತ ಪರೀಕ್ಷೆಗಳು ಮಾತ್ರ ಮಧ್ಯಾಹ್ನ 2:00ಕ್ಕೆ ನಡೆಯಲಿವೆ.

ಇದನ್ನೂ ಓದಿ: Khagras Chandragrahana 2025-  ಖಗ್ರಾಸ ಚಂದ್ರಗ್ರಹಣ | ಯಾರಿಗೆ ಶುಭ? ಯಾರಿಗೆ ಅಶುಭ? ಸಂಪೂರ್ಣ ಮಾಹಿತಿ ಇಲ್ಲಿದೆ…

ಮೌಲ್ಯಮಾಪನ ಮತ್ತು ಫಲಿತಾಂಶ

ಅರ್ಧ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಆಯಾ ಶಾಲೆಯೇ ಮೌಲ್ಯಮಾಪನ ನಡೆಸಲಿದ್ದು, ಅದರ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲಾಗುತ್ತದೆ. ಈ ಅಂಕಪಟ್ಟಿ ಆಧರಿಸಿ ಶಾಲೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ವಿಶ್ಲೇಷಿಸಿ, ಮುಂದಿನ ವಾರ್ಷಿಕ ಪರೀಕ್ಷೆಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಿವೆ.

ಸೆಪ್ಟೆಂಬರ್ 12ರಿಂದ ಪ್ರಾರಂಭವಾಗುವ ಈ ಅರ್ಧ ವಾರ್ಷಿಕ ಪರೀಕ್ಷೆಗಳು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಅತ್ಯಂತ ಮಹತ್ವದ ಹಂತವಾಗಿದೆ. ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳು ಈಗಾಗಲೇ ತಯಾರಿ ಪ್ರಾರಂಭಿಸಿರುವುದು ಉತ್ತಮ. ಪಠ್ಯಕ್ರಮದ ಪ್ರತಿಯೊಂದು ಭಾಗವನ್ನು ಸಂಪೂರ್ಣವಾಗಿ ಅಭ್ಯಾಸ ಮಾಡಿ, ಸಮಯವನ್ನು ಸರಿಯಾಗಿ ಬಳಸಿಕೊಂಡರೆ ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯ.

LIC Golden Jubilee Scholarship Scheme 2025- ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 40,000 ರೂ. ಆರ್ಥಿಕ ನೆರವು


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!