Karnataka SSLC Result 2025- ಮೇ 2ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಣೆ | ಕೆಎಸ್‌ಇಎಬಿ ಅಧಿಕೃತ ಮಾಹಿತಿ ಇಲ್ಲಿದೆ…

Spread the love

ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆ ಕುರಿತ ಅಧಿಕೃತ ಮಾಹಿತಿ ಹೊರ ಬಿದ್ದಿದ್ದು; ಈ ಕುರಿತ ವಿವರಣೆ ಇಲ್ಲಿದೆ…

WhatsApp Group Join Now
Telegram Group Join Now

2025ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (KSEAB) ಪ್ರಾರಂಭಿಕ ಮಾಹಿತಿ ಪ್ರಕಾರ, ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೇ 2ರಂದು ಪ್ರಕಟಿಸುವ ಸಾಧ್ಯತೆ ಇದೆ.

ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶವನ್ನು ಕೂಡ ಮೇ 3ನೇ ವಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ, ರಾಜ್ಯದ ವಿದ್ಯಾರ್ಥಿಗಳಲ್ಲಿ ಫಲಿತಾಂಶ ಪ್ರಕಟಣೆಯ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

Arivu Education Loan Scheme- ಸರ್ಕಾರದಿಂದ 5 ಲಕ್ಷ ರೂಪಾಯಿ ವರೆಗೆ ಶಿಕ್ಷಣ ಸಾಲ | ಅರ್ಜಿ ಆಹ್ವಾನ

ಪರೀಕ್ಷೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆ

2025ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು. ಪರೀಕ್ಷೆ ನಂತರ ಕೋಡಿಂಗ್ ಮತ್ತು ಡಿಕೋಡಿಂಗ್ ಪ್ರಕ್ರಿಯೆ ಏಪ್ರಿಲ್ 11ರಿಂದ ಪ್ರಾರಂಭವಾಯಿತು.

ಏಪ್ರಿಲ್ 15ರಿಂದ ಜಿಲ್ಲಾ ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭಗೊAಡಿತು. ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು; ಕಂಪ್ಯೂಟರ್ ದಾಖಲೀಕರಣ (Data Entry) ಪ್ರಗತಿಯಲ್ಲಿದೆ, ಇನ್ನೆರಡು-ಮೂರು ಅದು ದಿನಗಳಲ್ಲಿ ಮುಗಿಯಲಿದೆ. ಅದಾದ ತಕ್ಷಣವೇ ಅಧಿಕೃತ ಫಲಿತಾಂಶ ಪ್ರಕಟವಾಗಲಿದೆ.

ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆ ಕುರಿತ ಅಧಿಕೃತ ಮಾಹಿತಿ ಹೊರ ಬಿದ್ದಿದ್ದು; ಈ ಕುರಿತ ವಿವರಣೆ ಇಲ್ಲಿದೆ...
Karnataka SSLC Result 2025
ಫಲಿತಾಂಶ ಪ್ರಕಟಿಸಿದ ನಂತರ ಇರುವ ಅವಕಾಶಗಳು

ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಫಲಿತಾಂಶದ ಅಂಕಗಳನ್ನು ಆ ಕೂಡಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಫಲಿತಾಂಶ ತೃಪ್ತಿ ಕೊಡದಿದ್ದರೆ, ಉತ್ತರಪತ್ರಿಕೆ ಮರುಪರಿಶೀಲನೆಗೆ (Revaluation) ಆನ್‌ಲೈನ್ ಮೂಲಕ ಅರ್ಜಿ ಹಾಕಬಹುದು.

ವಿದ್ಯಾರ್ಥಿಗಳು ತಮ್ಮ ಉತ್ತರಪತ್ರಿಕೆಯ ಪ್ರತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪರೀಕ್ಷೆಯಲ್ಲಿ ಅಲ್ಪ ಅಂಕ ಪಡೆದ ವಿದ್ಯಾರ್ಥಿಗಳು ಮುಂದಿನ ಹೆಚ್ಚುವರಿ ಪರೀಕ್ಷೆ (Supplementary Exam) ಬರೆಯಲು ಅವಕಾಶ ಪಡೆಯುತ್ತಾರೆ. ಇದರ ವೇಳಾಪಟ್ಟಿ ಮತ್ತು ಅರ್ಜಿ ಪ್ರಕ್ರಿಯೆಯ ಬಗ್ಗೆ ಪ್ರಕಟಣೆ ಮಾಡಲಾಗುತ್ತದೆ.

Arivu Education Loan Scheme- ಸರ್ಕಾರದಿಂದ 5 ಲಕ್ಷ ರೂಪಾಯಿ ವರೆಗೆ ಶಿಕ್ಷಣ ಸಾಲ | ಅರ್ಜಿ ಆಹ್ವಾನ

ಮುಂದಿನ ವಿದ್ಯಾಭ್ಯಾಸಕ್ಕೆ ತಯಾರಿ

ಎಸ್ಸೆಸ್ಸೆಲ್ಸಿ ಫಲಿತಾಂಶವು ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದಲ್ಲಿ ಮಹತ್ವಪೂರ್ಣ ಹೆಜ್ಜೆಯಾಗಿದೆ. ಈ ಫಲಿತಾಂಶದ ಆಧಾರದ ಮೇಲೆ ದ್ವಿತೀಯ ಪಿಯುಸಿ (PUC) ಅಥವಾ ಐಟಿಐ (ITI), ಪೋಲಿಟೆಕ್ನಿಕ್, ವೃತ್ತಿಪರ ತರಬೇತಿ ಕೋರ್ಸ್ಗಳಿಗೆ ಸೇರ್ಪಡೆಗೊಳ್ಳಬಹುದು.

ಉತ್ತಮ ಅಂಕ ಗಳಿಸಿದವರು ಉತ್ತಮ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಹೆಚ್ಚು ಅವಕಾಶ ಹೊಂದಿರುತ್ತಾರೆ. ವಿದ್ಯಾರ್ಥಿಗಳ ಭವಿಷ್ಯದ ಗುರಿಗಳ ದಿಕ್ಕಿನಲ್ಲಿ ನಿರ್ಧಾರ ಮಾಡಲು ಈ ಫಲಿತಾಂಶ ದಾರಿದೀಪವಾಗಲಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಳಾದ sslc.karnataka.gov.in ಅಥವಾ karresults.nic.inಗೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಫಲಿತಾಂಶ ವೀಕ್ಷಿಸಬಹುದು.

‘SSLC Examination Result 2025’ ಲಿಂಕ್ ಕ್ಲಿಕ್ ಮಾಡಿ. ಅಲ್ಲಿ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕ (Date of Birth) ನಮೂದಿಸಬೇಕು.

ಬಳಿಕ Submit ಬಟನ್ ಕ್ಲಿಕ್ ಮಾಡಿದರೆ ಫಲಿತಾಂಶದ ವಿವರ (Subject-wise Marks, Grade, Overall Result) ಲಭ್ಯವಾಗುತ್ತದೆ. ಫಲಿತಾಂಶದ ಪ್ರತಿ ಡೌನ್‌ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.

SSLC Topper Laptop Scheme- ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ | ಈ ಯೋಜನೆಯ ಲಾಭ ಯಾರಿಗೆಲ್ಲ ಸಿಗಲಿದೆ?


Spread the love
WhatsApp Group Join Now
Telegram Group Join Now
error: Content is protected !!