ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ದಕ್ಷಿಣ ಭಾರತದ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದ್ದು, ತತ್ಪರಿಣಾಮವಾಗಿ ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಿದೆ. ಗುಡುಗು, ಮಿಂಚು, ಬಿರುಗಾಳಿ ಮತ್ತು ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಯಾವ ದಿನ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ?
ಏಪ್ರಿಲ್ 21: ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಕಲಬುರ್ಗಿ, ಬೀದರ್, ವಿಜಯಪುರ, ರಾಯಚೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು; ಬಿರುಗಾಳಿ ಸಹಿತ ಲಘುವಾದ ಮಳೆ ಸುರಿಯಲಿದೆ.
ಏಪ್ರಿಲ್ 22: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸಂಭವವಿದೆ. ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಬಿರುಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಏಪ್ರಿಲ್ 23: ಈ ದಿನ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಗದಗ, ಧಾರವಾಡ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.
ಏಪ್ರಿಲ್ 24: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಲಘುವಾದ ಮಳೆಯಾಗಲಿದೆ. ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಂಭವ ಹೆಚ್ಚಿದೆ.
ಏಪ್ರಿಲ್ 25: ಕರಾವಳಿ ಭಾಗದ ಅಲ್ಲಲ್ಲಿ ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಏಪ್ರಿಲ್ 26: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ರಾಯಚೂರು, ಯಾದಗಿರಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಾಗಲಕೋಟೆ, ಕಲಬುರ್ಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಬಳ್ಳಾರಿ, ಬೆಂಗಳೂರು ನಗರ/ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ.
Blue Aadhaar Card- ನೀಲಿ ಆಧಾರ್ ಕಾರ್ಡ್ ಮಾಡಿಸುವುದು ಹೇಗೆ? ಇದರಿಂದ ಪ್ರಯೋಜನವೇನು? ಮಹತ್ವದ ಮಾಹಿತಿ ಇಲ್ಲಿದೆ…
ಏಪ್ರಿಲ್ 27: ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ವಿಜಯನಗರ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸ್ವಲ್ಪ ಮಳೆಯಾಗಲಿದೆ.
ಈ ವಾರ ರಾಜ್ಯದಲ್ಲಿ ಮಳೆಯ ಛಾಯೆ ಆವರಿಸಿದ್ದು; ವಾತಾವರಣದಲ್ಲಿ ತಂಪು ತರಲಿದೆ. ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ಕಡಿತ, ರಸ್ತೆಗಳ ಜಾಮ್, ಬೆಳೆ ಹಾನಿ ಮುಂತಾದ ಸಮಸ್ಯೆಗಳು ಕಂಡುಬರುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ.
Monsoon Forecast 2025- ಈ ವರ್ಷದ ಮುಂಗಾರು ಮಳೆ ಸೂಪರ್: ಹವಾಮಾನ ಇಲಾಖೆಯ ಮಹತ್ವದ ಮುನ್ಸೂಚನೆ