ಕರ್ನಾಟಕದ ಹಲವು ಭಾಗಗಳಲ್ಲಿ ಈ ವಾರವಿಡೀ ಮಳೆಯ ಅಬ್ಬರ (Heavy rain) ಇರಲಿದ್ದು; ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದೆ. ಈ ಕುರಿತ ವಿವರ ಇಲ್ಲಿದೆ…
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದಲ್ಲಿ ಈ ವಾರವಿಡೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯ ಅಬ್ಬರ ಉಂಟಾಗಲಿದೆ. ಹವಾಮಾನ ಇಲಾಖೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಎಚ್ಚರಿಕೆ ಘೋಷಣೆ ಹೊರಡಿಸಿದೆ.
ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ?
ಇಂದು ಏಪ್ರಿಲ್ 29ರ ಸೋಮವಾರದಿಂದ ಮುಂದಿನ ಏಳು ದಿನಗಳ ವರೆಗೆ (ಮೇ 5ರ ವರೆಗೆ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ನಿರೀಕ್ಷೆ ಇದೆ:
ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳು: ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ
ಬೆಂಗಳೂರಿನ ಸುತ್ತಮುತ್ತ ಪ್ರದೇಶಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ
Bank Holidays Detail- ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ: ಸಂಪೂರ್ಣ ವಿವರ ಇಲ್ಲಿದೆ…

ಮಧ್ಯ ಕರ್ನಾಟಕ: ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಾಮರಾಜನಗರ,
ಉತ್ತರ ಕರ್ನಾಟಕ: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ವಿಜಯನಗರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ
ಹವಾಮಾನ ಇಲಾಖೆಯ ಎಚ್ಚರಿಕೆಯಂತೆ, ಕೆಲವೊಂದು ಭಾಗಗಳಲ್ಲಿ ಪ್ರತಿ ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಇದರಿಂದಾಗಿ ಹಲವು ಪರಿಣಾಮಗಳು ಸಂಭವಿಸಲಿವೆ.
ತಾಪಮಾನ ಪರಿಸ್ಥಿತಿ ವಿವರ
ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೀದರ್‌ನಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದುವರೆಗೆ ಬಿಸಿಲಿನ ತೀವ್ರತೆ ಹೆಚ್ಚು ಕಾಣಿಸಿದೆ. ಮುಂದಿನ 2 ದಿನಗಳ ವರೆಗೆ ತಾಪಮಾನ ಸ್ವಲ್ಪ ಇಳಿಕೆಯಾಗುವ ನಿರೀಕ್ಷೆ ಇದೆ. ಆದರೆ ನಂತರ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡವಿದ್ದು, ಗರಿಷ್ಠ 34 ಡಿ.ಸೆ. ಮತ್ತು ಕನಿಷ್ಠ 23 ಡಿ.ಸೆ. ಉಷ್ಣಾಂಶ ಇರಲಿದೆ. ಬಿರುಗಾಳಿ ಸಹಿತ ಜಿಟಿಜಿಟಿ ಮಳೆಯ ಸಂಭವವಿದೆ.
ಕರಾವಳಿ ಹಾಗೂ ಮಲೆನಾಡು ಪರಿಸ್ಥಿತಿ ಹೇಗೆ?
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನಗಳಲ್ಲಿ ಮುಂದಿನ ಐದು ದಿನಗಳ ಕಾಲ ವಾತಾವರಣದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಎಂದಿನAತೆ ಮಳೆ ಸುರಿಯುವ ನಿರೀಕ್ಷೆ ಇದ್ದರೂ ಬಿರುಗಾಳಿಯ ತೀವ್ರತೆ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.