ಜಿ.ಪಂ ಹಾಗೂ ತಾ.ಪಂ ಚುನಾವಣೆ (Karnataka ZP TP Election) ಘೋಷಣೆ ಕುರಿತು ರಾಜ್ಯ ಸರ್ಕಾರದ ಪರವಾಗಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ನಿಖರ ಮಾಹಿತಿ ಇಲ್ಲಿದೆ…
ಕಳೆದ ಮೂರೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್ (ಜಿ.ಪಂ) ಮತ್ತು ತಾಲ್ಲೂಕು ಪಂಚಾಯತ್ (ತಾ.ಪಂ) ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ ಹೊರಬಿದ್ದಿದ್ದು, ಮುಂದಿನ ಮೂರು ತಿಂಗಳೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಏಪ್ರಿಲ್ 23ರಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಬಿಜೆಪಿ ಸರ್ಕಾರ ಕಾಲದಲ್ಲಿ ಕ್ಷೇತ್ರ ಪುನರ್ ವಿಂಗಡನೆ ಮತ್ತು ಮೀಸಲಾತಿ ಗೊಂದಲಗಳಿಂದ ಈ ಚುನಾವಣೆಗಳು ವಿಳಂಬವಾಗಿದ್ದವು. ಆದರೆ ಈಗ ಸರ್ಕಾರ ಸ್ಪಷ್ಟ ಯೋಜನೆಯೊಂದಿಗೆ ಮುಂದಾಗಿದೆ. ಮುಂದಿನ ಮೂರು ತಿಂಗಳೊಳಗೆ ಚುನಾವಣೆ ನಡೆಸುವ ಉದ್ದೇಶ ಹೊಂದಿದೆ’ ಎಂದು ಹೇಳಿದ್ದಾರೆ.
SSLC Result 2025- ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊಸ ಅಪ್ಡೇಟ್ | 10th ಪಾಸಾಗಲು ಶೇ.35ರಷ್ಟು ಅಂಕ ಕಡ್ಡಾಯ
ಪಂಚಾಯತಿ ಚುನಾವಣೆ ವಿಳಂಬಕ್ಕೆ ಕಾರಣವೇನು?
ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಕ್ಷೇತ್ರ ಪುನರ್ ವಿಂಗಡನೆ ಹಾಗೂ ಮೀಸಲಾತಿ ನಿಯಮಾವಳಿ ಸಂಬಂಧಿ ಗೊಂದಲಗಳು ಜಿ.ಪಂ ಹಾಗೂ ತಾ.ಪಂ ಚುನಾವಣೆ ವಿಳಂಬಕ್ಕೆ ಮುಖ್ಯ ಕಾರಣವಾಗಿದೆ. ಈ ವಿಚಾರಗಳು ಹೈಕೋರ್ಟ್’ಗೆ ಹೋಗಿ, ತೀರ್ಮಾನಕ್ಕಾಗಿ ಕಾಯಲಾಗುತ್ತಿತ್ತು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಕಾರದ ಕೇಂದ್ರಿಕರಣದ ನಿಲುವಿನಿಂದ ಗ್ರಾಮೀಣ ಆಡಳಿತದಲ್ಲಿ ಸ್ಪಷ್ಟತೆ ಇಲ್ಲದಂತಾಯಿತು. ಇದರ ಪರಿಣಾಮವಾಗಿ, ಗ್ರಾಮ ಪಂಚಾಯತಿಗಿಂತ ಮೇಲ್ಮಟ್ಟದ ಸ್ಥಳೀಯ ಸಂಸ್ಥೆಗಳಾದ ಜಿ.ಪಂ ಮತ್ತು ತಾ.ಪಂ ಚುನಾವಣೆಗಳು ಮುಂದೂಡಲ್ಪಟ್ಟವು.

ಹೈಕೋರ್ಟ್ ಮಧ್ಯಸ್ಥಿಕೆ, ಸರ್ಕಾರದ ಭರವಸೆ
ಈಚೆಗೆ ಹೈಕೋರ್ಟ್’ನಲ್ಲಿ ನಡೆದ ವಿಚಾರಣೆ ವೇಳೆ, ರಾಜ್ಯ ಸರ್ಕಾರ ಮೇ 30ರೊಳಗೆ ಜಿ.ಪಂ ಮತ್ತು ತಾ.ಪಂ ಮೀಸಲಾತಿ ಪಟ್ಟಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ಭರವಸೆ ನೀಡಿತ್ತು.
ಇದನ್ನು ಆಧಾರವಾಗಿ ಇಟ್ಟುಕೊಂಡು ಆಯೋಗವು ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬಹುದು ಎಂದು ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹೈಕೋರ್ಟ್ಗೆ ತಿಳಿಸಿದ್ದರು.
ರಾಜ್ಯ ಚುನಾವಣಾ ಆಯೋಗದ ಪರವಾಗಿ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು, ‘ಸರ್ಕಾರ ಮೀಸಲಾತಿ ಪಟ್ಟಿ ನೀಡಿದ ತಕ್ಷಣವೇ ಆಯೋಗ ಚುನಾವಣಾ ದಿನಾಂಕ ನಿಗದಿಪಡಿಸಲು ಸಿದ್ಧವಾಗಿದೆ’ ಎಂದು ಹೇಳಿದ್ದರು.
Free Electric Scooter- ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ | ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…
ರಾಜ್ಯ ಚುನಾವಣಾ ಆಯೋಗದ ಸಿದ್ಧತೆ
ಇದಕ್ಕೂ ಮೊದಲು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಅವರು ಈಗಾಗಲೇ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣಾ ದಿನಾಂಕ ಘೋಷಿಸಲು ಆಯೋಗ ಸಿದ್ಧವಾಗಿದೆ. ಚುನಾವಣಾ ಆಯೋಗಕ್ಕೆ ಮೀಸಲಾತಿ ಪಟ್ಟಿ ಕೈ ಸೇರಿದ ಕೂಡಲೇ, ಚುನಾವಣಾ ದಿನಾಂಕ ನಿಗದಿಯಾಗಲಿದೆ ಎಂದು ಹೇಳಿದ್ದರು.
ಆದರೆ, ಸರ್ಕಾರ ಇನ್ನೂ ಮೀಸಲಾತಿ ಪಟ್ಟಿಯನ್ನು ಚುನಾವಣೆ ಆಯೋಗಕ್ಕೆ ಸಲ್ಲಿಸಿಲ್ಲ. ಇದೀಗ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರು ಮುಂದಿನ ಮೂರು ತಿಂಗಳೊಳಗೇ ಜಿ.ಪಂ, ತಾ.ಪಂ, ಚುನಾವಣೆ ನಡೆಸಲು ಸರ್ಕಾರ ಉತ್ಸುಕವಾಗಿದೆ ಎಂದಿದ್ದಾರೆ. ಹೀಗಾಗಿ ಶೀಘ್ರದಲ್ಲಿಯೇ ಆಯೋಗಕ್ಕೆ ಮೀಸಲಾತಿ ಪಟ್ಟಿ ಸಲ್ಲಿಕೆಯಾಗಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.
ಗ್ರಾಮ ಪಂಚಾಯತಿ ಅಧಿಕಾರಾವಧಿ ಮುಕ್ತಾಯ
ರಾಜ್ಯದ ಗ್ರಾಮ ಪಂಚಾಯತಿಗಳ ಅಧಿಕಾರ ಅವಧಿ ಮುಂದಿನ 7-8 ತಿಂಗಳಲ್ಲಿ ಮುಕ್ತಾಯವಾಗಲಿದ್ದು, ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಮಹತ್ವದ ಮಾಹಿತಿ ನೀಡಿದ್ದಾರೆ. ಗ್ರಾಮ ಪಂಚಾಯತಿಗಳ ಚುನಾವಣೆಗಳನ್ನು ಸಕಾಲದಲ್ಲಿ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.