Kotak Kanya Scholarship 2024 : ಕೋಟಕ್ ಕನ್ಯಾ ಸ್ಕಾಲರ್‌ಶಿಪ್ 2024-25ರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದ್ವೀತಿಯ ಪಿಯುಸಿ ಉತ್ತೀರ್ಣರಾಗಿರುವ (Second PUC passed) ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಮುಂದಿನ ಶಿಕ್ಷಣದ ವೆಚ್ಚವಾಗಿ ದೊಡ್ಡ ಮೊತ್ತದ ಆರ್ಥಿಕ ನೆರವು ಒದಗಿಸಲಾಗುತ್ತದೆ. ಅರ್ಹ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಬಹುದಾಗಿದೆ.
ಏನಿದು ಕೊಟಕ್ ಕನ್ಯಾ ಸ್ಕಾಲರ್‌ಶಿಪ್?
ಇದು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು ಹಾಗೂ ಕೋಟಕ್ ಎಜುಕೇಶನ್ ಫೌಂಡೇಶನ್‌ನ (Kotak Education Foundation) ಸಹಯೋಗದ ಮಹತ್ವದ ಯೋಜನೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಜೀವನೋಪಾಯವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಈ ಸ್ಕಾಲರ್‌ಶಿಪ್ ಅರ್ಹ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ 12ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ನೆರವನ್ನು ಒದಗಿಸುತ್ತದೆ. ಭಾರತದ ಯಾವುದೇ ರಾಜ್ಯದ ವಿದ್ಯಾರ್ಥಿನಿಯರು ಈ ಆರ್ಥಿಕ ನೆರವು ಪಡೆಯಬಹುದಾಗಿದೆ.
ಯಾವೆಲ್ಲ ವೃತ್ತಿಪರ ಶಿಕ್ಷಣಕ್ಕೆ ನೆರವು ಸಿಗಲಿದೆ?
ದ್ವೀತಿಯ ಪಿಯುಸಿ ವಿಶೇಷ ಶ್ರೇಣಿಯಲ್ಲಿ ಉತ್ತಿರ್ಣರಾಗಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದೇ ಇರುವ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಈ ಸ್ಕಾಲರ್‌ಶಿಪ್ ವರದಾನವಾಗಿದೆ. ಪಿಯುಸಿ ನಂತರ ಎಂಜಿನಿಯರಿ೦ಗ್, ಎಂಬಿಬಿಎಸ್, ಬಿಡಿಎಸ್, ಇಂಟಿಗ್ರೇಟೆಡ್ ಎಲ್‌ಎಲ್‌ಬಿ (5 ವರ್ಷಗಳು), ಬಿ.ಫಾರ್ಮಸಿ, ಬಿಎಸ್‌ಸಿ ಮುಂತಾದ ವೃತ್ತಿಪರ ಪದವಿ ಕೋರ್ಸ್’ನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿವೇತನ ಸಿಗಲಿದೆ.
ಇವುಗಳ ಜೊತೆಗೆ ನರ್ಸಿಂಗ್, ಇಂಟಿಗ್ರೇಟೆಡ್ BS-MS/BS-ರಿಸರ್ಚ್, ISER, IISC (ಬೆಂಗಳೂರು) ಅಥವಾ NAAC/NIRF ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ವಿನ್ಯಾಸ, ಆರ್ಕಿಟೆಕ್ಚರ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್’ನ್ನು ಮುಂದುವರೆಸಲು ಈ ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ.
ಯಾರೆಲ್ಲ ಅರ್ಜಿ ಹಾಕಬಹುದು?
ಇದು ಬಡ, ಪ್ರತಿಭಾವಂತವ೦ತ ವಿದ್ಯಾರ್ಥಿನಿಯರಿಗೆ ಮಾತ್ರ ಮೀಸಲಾದ ವಿದ್ಯಾರ್ಥಿವೇತನ ಯೋಜನೆಯಾಗಿದೆ. ದ್ವೀತಿಯ ಪಿಯುಸಿ ಬೋರ್ಡ್ ಪರೀಕ್ಷೆಗಳಲ್ಲಿ ಶೇ.75ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಭಾರತದ ಯಾವುದೇ ರಾಜ್ಯದ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದೆ.
6,00,000 ರೂಪಾಯಿಗಿಂತ ಕಡಿಮೆ ಕುಟುಂಬದ ವಾರ್ಷಿಕ ಆದಾಯವನ್ನು ಹೊಂದಿರುವ ವಿದ್ಯಾರ್ಥಿನಿಯರಿಗೆ ಅರ್ಜಿ ಸಲ್ಲಿಸಲು ಮುಕ್ತ ಅವಕಾಶವಿದೆ. ಏಕ ಪೋಷಕ/ ಅನಾಥ ಹಾಗೂ ಅಂಗವಿಕಲ ವಿದ್ಯಾರ್ಥಿನಿಯರಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
ವಿದ್ಯಾರ್ಥಿವೇತನದ ಮೊತ್ತವೆಷ್ಟು?
ಮೊದಲೇ ಹೇಳಿದಂತೆ ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಯೋಜನೆಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ 12ನೇ ತರಗತಿ ನಂತರದ ವೃತ್ತಿಪರ ಪದವಿ ಕೋರ್ಸ್/ ಪದವಿಯನ್ನು ಪೂರ್ಣಗೊಳಿಸುವ ವರೆಗೂ ಪ್ರತೀ ವರ್ಷಕ್ಕೆ 1.5 ಲಕ್ಷ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಈ ವಿದ್ಯಾರ್ಥಿವೇತನದ ಮೊತ್ತವನ್ನು ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ, ಇಂಟರ್ನೆಟ್, ಸಾರಿಗೆ, ಲ್ಯಾಪ್‌ಟಾಪ್, ಪುಸ್ತಕ ಮತ್ತು ಇತರೆ ಲೇಖನ ಸಾಮಗ್ರಿಗಳು ಸೇರಿದಂತೆ ಒಟ್ಟಾರೆ ಶೈಕ್ಷಣಿಕ ವೆಚ್ಚಕ್ಕೆ ಬಳಸಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳೇನು?
- ದ್ವೀತಿಯ ಪಿಯುಸಿ ಅಂಕಪಟ್ಟಿ ಪ್ರತಿ
- ಆದಾಯ ಪ್ರಮಾಣ ಪತ್ರದ ಪ್ರತಿ
- 2024-25 ಶೈಕ್ಷಣಿಕ ವರ್ಷದ ಶುಲ್ಕದ ಮಾಹಿತಿ
- ವಿದ್ಯಾರ್ಥಿನಿ ನಡತೆ ಪ್ರಮಾಣಪತ್ರ
- ವಿದ್ಯಾರ್ಥಿನಿಯ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಪಾಸ್ಪೋರ್ಟ್ ಗಾತ್ರದ ಫೋಟೋ
- ಅಂಗವೈಕಲ್ಯ ಪ್ರಮಾಣಪತ್ರ (ಅನ್ವಯಿಸಿದರೆ)
- ಪೋಷಕರ ಮರಣ ಪ್ರಮಾಣಪತ್ರ (ಏಕ ಪೋಷಕ/ಅನಾಥರಾಗಿದ್ದರೆ)
- ವಿದ್ಯಾರ್ಥಿನಿ ವಾಸದ ಮನೆಯ ಫೋಟೋಗಳು
ಅರ್ಜಿ ಸಲ್ಲಿಕೆ ಹೇಗೆ?
ಈ ಲೇಖನದ ಕೊನೆಯಲ್ಲಿ ನಾವು ನೀಡಿರುವ ಅಧಿಕೃತ ವಿದ್ಯಾರ್ಥಿವೇತನ ಪುಟಕ್ಕೆ ಭೇಟಿ ನೀಡಿ. ಪುಟದ ಬಲ ತುದಿಯಲ್ಲಿ ಕಾಣುವ Apply Now ಬಟನ್ ಅನ್ನು ಕ್ಲಿಕ್ ಮಾಡಿ, ನೇರವಾಗಿ ಅಲ್ಲಿ ಕೇಳಲಾದ ವಿವರ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.
ಒಂದು ವೇಳೆ ನೀವು ಈ ವಿದ್ಯಾರ್ಥಿವೇತನ ಪುಟಕ್ಕೆ ಹೊಸದಾಗಿ ನೋಂದಣಿ ಮಾಡಿಕೊಳ್ಳುವವರು ಆಗಿದ್ದರೆ ನಿಮ್ಮ ಇಮೇಲ್ ಖಾತೆ ಅಥವಾ ಮೊಬೈಲ್ ಸಂಖ್ಯೆಯೊ೦ದಿಗೆ ನೋಂದಾಯಿಸಿಕೊಳ್ಳಬಹುದು. ಅದರ ಲಿಂಕ್ ಕೂಡ ಲೇಖನದ ಕೊನೆಯಲ್ಲಿದೆ ಗಮನಿಸಿ.
ಆನಂತರ ‘Kotak Kanya Scholarship 2024-25’ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ, ಸಂಬ೦ಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿದ ಬಳಿಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit/ಸಲ್ಲಿಸು’ ಬಟನ್ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 30-09-2024
ಅರ್ಜಿ ಸಲ್ಲಿಕೆ ಲಿಂಕ್ : Apply Now
ಹೊಸ ನೋಂದಣಿ ಲಿಂಕ್ : Apply Now