Loan and subsidy schemes for womens : ಮಹಿಳೆಯರನ್ನು ಔದ್ಯೋಗಿಕವಾಗಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (Karnataka State Womens Development Corporation) ವಿವಿಧ ಸಾಲ (Loan), ಸಹಾಯಧನ (Subsidy) ಯೋಜನೆಗಳನ್ನು ಜಾರಿಗೊಳಿಸಿದೆ. ಅರ್ಹ ಮಹಿಳೆಯರು ಈ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಬಹುದಾಗಿದೆ.
ಈ ಯೋಜನೆಗಳ ಅಡಿಯಲ್ಲಿ ಮಹಿಳೆಯರ ಸ್ವಯಂ ಉದ್ಯೋಗಕ್ಕೆ ಲಕ್ಷಾಂತರ ರೂಪಾಯಿ ಸಾಲ ಮತ್ತು ಸಹಾಯಧನ ಸಿಗಲಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ…
ಮಹಿಳೆಯರಿಗಾಗಿಯೇ ಇರುವ ಯೋಜನೆಗಳು
- ಉದ್ಯೋಗಿನಿ ಯೋಜನೆ
- ಚೇತನ ಯೋಜನೆ
- ಧನಶ್ರೀ ಯೋಜನೆ
- ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
- ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
ಉದ್ಯೋಗಿನಿ ಯೋಜನೆ
ಉದ್ಯೋಗಿನಿ ಯೋಜನೆಯಡಿ ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಹಾಗೂ ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.
ಸಾಮಾನ್ಯ ವರ್ಗದ ಮಹಿಳೆಯರಿಗೆ ಘಟಕ ವೆಚ್ಚ ಗರಿಷ್ಟ 3 ಲಕ್ಷ ರೂಪಾಯಿಗಳಾಗಿದ್ದು; ಶೇ.30ರಷ್ಟು ಸಹಾಯಧನ ಸಿಗಲಿದೆ. ಅರ್ಜಿ ಸಲ್ಲಿಸುವ ಮಹಿಳೆಯರ ವಾರ್ಷಿಕ ಆದಾಯ 1.5 ಲಕ್ಷ ರೂಪಾಯಿ ಮಿತಿಯಲ್ಲಿರಬೇಕು. 18 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು.
ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ಕನಿಷ್ಟ 1 ಲಕ್ಷದಿಂದ ಗರಿಷ್ಟ 3 ಲಕ್ಷ ರೂಪಾಯಿಗಳಾಗಿದ್ದು ಶೇ.50ರಷ್ಟು ಸಹಾಯಧನ ಸಿಗಲಿದೆ. ವಾರ್ಷಿಕ 2 ಲಕ್ಷ ರೂಪಾಯಿ ಆದಾಯ ಮಿತಿ ಹೊಂದಿರುವ, 18 ವರ್ಷ ಮೇಲ್ಪಟ್ಟ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ಚೇತನ ಯೋಜನೆ
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 30,000 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟ ಮಹಿಳೆಯರು ಈ ಯೋಜನೆಯಡಿ ಆರ್ಥಿಕ ಸಹಾಯ ಪಡೆಯಬಹುದಾಗಿದೆ.
ಧನಶ್ರೀ ಯೋಜನೆ
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 30,000 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಯೋಜನೆಯಡಿ ವಯೋಮಿತಿ 18 ರಿಂದ 60 ವರ್ಷ ವಯೋಮಿತಿಯ ಮಹಿಳೆಯರು ಪ್ರೋತ್ಸಾಹಧನ ಪಡೆಯಬಹುದಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
ಲಿಂಗತ್ವ ಅಲ್ಪಸಂಖ್ಯಾತರು ಅಂದರೆ ಮಂಗಳಮುಖಿಯರ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 30,000 ರೂಪಾಯಿ ಉಚಿತ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
1993-94 ಮತ್ತು 2007-08ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಕೂಡ ಉಚಿತ 30,000 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
‘ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ’ವು ಪ್ರತೀ ವರ್ಷ ನವೆಂಬರ್-ಡಿಸೆ೦ಬರ್ ತಿಂಗಳಲ್ಲಿ ಈ ಎಲ್ಲ ಯೋಜನೆಗಳಿಗೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸುತ್ತದೆ. ಆಗ ಆನ್‌ಲೈನ್’ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಗಳ ಪ್ರಯೋಜನ ಪಡೆಯಬಹುದಾಗಿದೆ.
ರಾಜ್ಯ ಸರಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ https://sevasindhu.karnataka,gov.in ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್ ಲಿಂಕ್