Mandya District Court Peon Jobs Recruitment 2024 : 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ಪಾಸಾದವರಿಂದ ನ್ಯಾಯಾಲಯಗಳ ಜವಾನ (Peon jobs) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 41 ಹುದ್ದೆಗಳು ಖಾಲಿ ಇದ್ದು; ಅರ್ಹ, ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.
ಮಂಡ್ಯ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಜವಾನ ಹುದ್ದೆಗಳ ನೇಮಕಾತಿಗಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳ ವಿವರ, ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ
ಮೊದಲೇ ಹೇಳಿದಂತೆ ನ್ಯಾಯಾಲಯಗಳ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿಯು ವರ್ಗಗಳಿಗೆ ಅನುಗುಣವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, 2ಎ, 2ಬಿ, 3ಎ, 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಟ ವಯೋಮಿತಿ ನಿಗದಿಪಡಿಸಲಾಗಿದೆ.

ಸಂಬಳ ಹಾಗೂ ನೇಮಕ ಪ್ರಕ್ರಿಯೆ ವಿವರ
ನ್ಯಾಯಾಲಯಗಳ ಜವಾನ್ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನವು 17,000 ರೂಪಾಯಿ ಯಿಂದ 28,950 ರೂಪಾಯಿ ವರೆಗೆ ಇರಲಿದ್ದು ಇದರ ಜೊತೆಗೆ ಇತರೆ ಭತ್ಯೆಗಳು ಕೂಡ ಸಿಗಲಿವೆ.
ನೇಮಕ ಪ್ರಕ್ರಿಯೆಯು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಶುಲ್ಕದ ವಿವರ
ನ್ಯಾಯಾಲಗಳ ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವರ್ಗಗಳಿಗೆ ಅನುಗುಣವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ, 2ಎ 2ಬಿ 3ಎ 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 150 ರೂಪಾಯಿ ನಿಗದಿಪಡಿಸಲಾಗಿದೆ. ಮೇಲ್ಕಾಣಿಸಿದ ಪ್ರವರ್ಗಗಳ ಹೊರತಾಗಿ ಇನ್ನುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು
ಕಳೆದ ಮೇ 03, 2024ರಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಇದೇ ಜೂನ್ 03, 2024 ಕೊನೆಯ ದಿನವಾಗಿದೆ. ಅಷ್ಟರೊಳಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಸೂಚನೆ ಮೂಲಕ ಕೋರಲಾಗಿದೆ.
ಅಧಿಸೂಚನೆ : Download
ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ : Apply Now