Maulana Azad Model School- ಮಾಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ನೇ ತರಗತಿ ಮಕ್ಕಳಿಗೆ ಹಾಸ್ಟೆಲ್ ಸಹಿತ ಉಚಿತ ಶಿಕ್ಷಣ

Spread the love

ಕರ್ನಾಟಕ ಸರ್ಕಾರದ ಮಾಲಾನಾ ಆಜಾದ್ ಮಾದರಿ ಶಾಲೆಗಳ (Maulana Azad Model School-MAMS) ನೇರ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

2025-26ನೇ ಶೈಕ್ಷಣಿಕ ಸಾಲಿಗೆ ಮೌಲಾನಾ ಆಜಾದ್ ಮಾದರಿ ಶಾಲೆಗಳ (MAMS) 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳು ಆಧುನಿಕ ಸೌಲಭ್ಯಗಳೊಂದಿಗೆ ಉಚಿತ ವಸತಿ, ಆಹಾರ, ವಿದ್ಯಾಭ್ಯಾಸ, ಡಿಜಿಟಲ್ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಾಸವನ್ನು ಒದಗಿಸುತ್ತವೆ. ಪ್ರವೇಶಾತಿ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಏಪ್ರಿಲ್ 15, 2025ರಂದು ಪ್ರಕಟಣೆ ಹೊರಡಿಸಿದ್ದಾರೆ.

15,000 ಸೀಟುಗಳು ಲಭ್ಯ

ಕರ್ನಾಟಕದಾದ್ಯಂತ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿ (MAMS) 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್’ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯಾದ್ಯಂತ ಒಟ್ಟು 250 ಮೌಲಾನಾ ಆಜಾದ್ ಮಾದರಿ ಶಾಲೆಗಳು (Karnataka State Syllabus) ಇದ್ದು; ಈ ಎಲ್ಲಾ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಒಟ್ಟು 15,000 ಸೀಟುಗಳು ಲಭ್ಯ ಇವೆ. ಅಲ್ಪಸಂಖ್ಯಾತ, ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು.

SSLC Result 2025- ಎಸ್ಸೆಸ್ಸೆಲ್ಸಿ ಫಲಿತಾಂಶ | ಶಿಕ್ಷಣ ಸಚಿವರ ಮಹತ್ವದ ಮಾಹಿತಿ ಇಲ್ಲಿದೆ…

ಮೌಲಾನಾ ಆಜಾದ್ ಶಾಲೆ ವೈಶಿಷ್ಟ್ಯಗಳು
  • ಉಚಿತ ಶಿಕ್ಷಣ: ಸಂಪೂರ್ಣ ಉಚಿತ ವಿದ್ಯಾಭ್ಯಾಸ. ಶಾಲಾ ಫೀಸ್, ಪುಸ್ತಕ, ಯುನಿಫಾರ್ಮ್ ಮುಂತಾದ ವೆಚ್ಚವಿಲ್ಲ.
  • ವಸತಿ ಸೌಲಭ್ಯ: ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್, ಊಟ, ಆರೋಗ್ಯ ಸೇವೆ ಉಚಿತವಾಗಿ ಸಿಗಲಿದೆ.
  • ಆಧುನಿಕ ಪಾಠ್ಯಕ್ರಮ: ಡಿಜಿಟಲ್ ಕ್ಲಾಸ್‌ರೂಮ್, ಲ್ಯಾಬ್ ಸೌಲಭ್ಯವಿದೆ.
  • ಸಾಂಸ್ಕೃತಿಕ-ಕ್ರೀಡಾ ಬೆಳೆವಣಿಗೆ: ಶೈಕ್ಷಣಿಕ ಪ್ರಗತಿಯ ಜೊತೆಗೆ ಆಟ-ಓಟದಂತಹ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ಸಿಗಲಿದೆ.
  • ವ್ಯಕ್ತಿತ್ವ ವಿಕಾಸ ತರಬೇತಿ: ಭಾಷಾ ಪ್ರೌಢಿಮೆ, ನಾಯಕರ ಶೈಲಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಗೂ ತರಬೇತಿ ನೀಡಲಾಗುತ್ತದೆ.
ಸೀಟುಗಳ ಮೀಸಲಾತಿ ವಿವರ

ಈ ಶಾಲೆಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಒಳಪಡುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ.

ಇನ್ನುಳಿದ ಶೇ.25ರಷ್ಟು ಸೀಟುಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ 2ಎ, 3ಎ, 3ಬಿ ಹಾಗೂ ಪ್ರವರ್ಗ-1ಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದ್ದು; ಈ ವರ್ಗಗಳ ವಿದ್ಯಾರ್ಥಿಗಳು ಕೂಡ ಇಲ್ಲಿ ಉಚಿತ ವಸತಿ ಸಹಿತ ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ.

Free Electric Scooter- ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ | ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು
  • ವಿದ್ಯಾರ್ಥಿಯ ಶಾಲಾ ಸಂಖ್ಯೆ (SATs ID)
  • ಆಧಾರ್ ಕಾರ್ಡ್ ಪ್ರತಿ
  • ವಿದ್ಯಾರ್ಥಿಯ ಪಾಸ್‌ಪೋರ್ಟ್ ಗಾತ್ರದ ಫೋಟೋ
  • ಪೋಷಕರ ಆಧಾರ್ ಸಂಖ್ಯೆ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಅಂಗವಿಕಲ ಪ್ರಮಾಣ ಪತ್ರ (ಅಗತ್ಯವಿದ್ದರೆ)
ಅರ್ಜಿ ಸಲ್ಲಿಸುವ ವಿಧಾನ

ಮೇಲ್ಕಾಣಿಸಿದ ದಾಖಲಾತಿಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in/ ಬಳಸಿಕೊಂಡು ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸಲ್ಲಿಕೆಯಲ್ಲಿ ತೊಂದರೆ ಉಂಟಾದಲ್ಲಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಅಥವಾ ಮೌಲಾನಾ ಆಜಾದ್ ಮಾದರಿ ಶಾಲೆಗಳು ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿ, ಅಧಿಸೂಚನೆ, ಪ್ರವೇಶ ಕೈಪಿಡಿ ಮತ್ತು ಇತರ ವಿವರಗಳ ಲಿಂಕುಗಳನ್ನು ಕೆಳಗೆ ನೀಡಲಾಗಿದೆ.

Gold Loan- ಗೋಲ್ಡ್ ಲೋನ್ ಆರ್‌ಬಿಐ ಹೊಸ ನಿಯಮ | ಹೆಚ್ಚಲಿದೆ ಚಿನ್ನ ಸಾಲದ ಬೇಡಿಕೆ

ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-04-2025
  • ಅರ್ಜಿ ಸಲ್ಲಿಕೆ ಕೊನೇ ದಿನಾಂಕ: 10-05-2025
  • ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ: 25-05-2025
ಪ್ರವೇಶಾತಿ ಅಧಿಸೂಚನೆ ಹಾಗೂ ಮಾಹಿತಿ ಲಿಂಕುಗಳು
  • ಪ್ರವೇಶಾತಿ ಅಧಿಸೂಚನೆ: Download
  • ಪ್ರವೇಶ ಕೈಪಿಡಿ: Download
  • ಸೇವಾ ಸಿಂಧು ಪೋರ್ಟಲ್ ಲಿಂಕ್: Click Here

RTE Free Education Admission- ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ | ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯುವ ಸದಾವಕಾಶ


Spread the love
WhatsApp Group Join Now
Telegram Group Join Now
error: Content is protected !!