ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ: ಯಾವ ಬೆಳೆಗೆ ಎಷ್ಟು ಹಣ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ… Mnarega Subsidy for Horticulture Crops

Spread the love

Mnarega Subsidy for Horticulture Crops : 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ (Department of Horticulture) ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು; ಈ ಪೈಕಿ ತೋಟಗಾರಿಕೆ ಬೆಳೆಗಳಿಗೆ ಗ್ರಾಮ ಪಂಚಾಯತಿಯಿ೦ದಲೇ ಅನುದಾನ ಪಡೆಯಬಹುದಾಗಿದೆ. ಯಾವೆಲ್ಲ ಬೆಳೆಗಳಿಗೆ ಎಷ್ಟೆಷ್ಟು ಸಹಾಯಧನ ಪಡೆಯಬಹುದು? ಇಲ್ಲಿದೆ ಸಮಗ್ರ ಮಾಹಿತಿ…

WhatsApp Group Join Now
Telegram Group Join Now

2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾದ ಯೋಜನೆಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಲು ಇಚ್ಛಿಸುವ ರೈತರು, ಕೂಲಿಕಾರರು ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ ವರಗೆ ವೈಯಕ್ತಿಕ ಕಾಮಗಾರಿ ಪಡೆಯಲು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲಕ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ: ರಾಜ್ಯಾದ್ಯಂತ 50 ಲಕ್ಷ ರೇಷನ್ ಕಾರ್ಡ್ ರದ್ದು | ನಿಮ್ಮ ಕಾರ್ಡ್ ಈ ಪಟ್ಟಿಯಲ್ಲಿದೆಯಾ? 50 lakh ration card cancellation

ಯಾವೆಲ್ಲ ವೈಯಕ್ತಿಕ ಕಾಮಗಾರಿಗಳು ಸಿಗಲಿವೆ?

ತೋಟಗಾರಿಕೆ ಇಲಾಖೆಯಿಂದ ತೆಂಗು, ಮಾವು, ದಾಳಿಂಬೆ, ಪೇರಲೆ, ನುಗ್ಗಿ, ಗುಲಾಬಿ, ವೀಳ್ಯದೆಲೆ, ಮಲ್ಲಿಗೆ, ಲಿಂಬೆ, ಬಾಳೆ, ಪಪ್ಪಾಯ, ಡ್ರ‍್ಯಾಗನ್ ಫ್ರೂಟ್, ಕಾಳುಮೆಣಸು, ಹಲಸು ಸೇರಿದಂತೆ ಅನೇಕ ತೋಟಗಾರಿಕೆ ಪ್ರದೇಶಾಭಿವೃದ್ಧಿಗೆ ಅರ್ಥಿಕ ನೆರವು ಸಿಗಲಿದೆ.

ರೇಷ್ಮೆ ಇಲಾಖೆಯಿಂದ ಹಿಪ್ಪುನೆರಳೆ ನಾಟಿ ಪದ್ಧತಿ ಸಹಾಯಧನ ಲಭ್ಯವಿದೆ.ಜಾನುವಾರುಗಳನ್ನು ಬಿಸಿಲು, ಮಳೆಯಿಂದ ರಕ್ಷಿಸಲು ಕುರಿ-ಮೇಕೆ, ದನ, ಕೋಳಿ, ಹಂದಿ ಶೆಡ್ ನಿರ್ಮಾಣ ಹಾಗೂ ಅಜೋಲಾ ಫಿಟ್ ನಿರ್ಮಾಣಕ್ಕೂ ಸಹಾಯಧನ ಸಿಗಲಿದೆ.

ಕೃಷಿ ಇಲಾಖೆಯಿಂದ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿಹೊಂಡ, ಕೊಳವೆ ಬಾವಿ ಮರುಪೂರಣ ಘಟಕ ಹಾಗೂ ಉತ್ತಮ ಆರೋಗ್ಯಕ್ಕಾಗಿ ಬಚ್ಚಲುಗುಂಡಿ (ಜೋನ್ ಫಿಟ್) ಮತ್ತು ಪೌಷ್ಟಿಕ ತೋಟ ನಿರ್ಮಾಣಕ್ಕೂ ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬಹುದಾಗಿದೆ.

ಇದನ್ನೂ ಓದಿ: ದನದ ಕೊಟ್ಟಿಗೆ ನಿರ್ಮಾಣಕ್ಕೆ 57,000 ಸಹಾಯಧನ | ಹೀಗೆ ಅರ್ಜಿ ಸಲ್ಲಿಸಿ… Cattle Shed Mgnrega Subsidy

Mnarega Subsidy for Horticulture Crops
ಯಾವ ಬೆಳೆಗೆ ಎಷ್ಟೆಷ್ಟು ಸಹಾಯಧನ?

ತೋಟಗಾರಿಕೆ ಬೆಳೆಗಳಿಗೆ ಮತ್ತು ತೋಟಗಾರಿಕೆ ಚಟುವಟಿಕೆಗಳಿಗೆ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಸಣ್ಣ ಮತ್ತು ಅತೀ ಸಣ್ಣ ರೈತರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಅಭಿವೃದ್ಧಿಪಡಿಸಿಕೊಳ್ಳಲು ಈ ಎಲ್ಲ ಸಹಾಯಧನ ಸೌಲಭ್ಯವಿರುತ್ತದೆ. ಪ್ರತಿ ಹೆಕ್ಟೇರ್‌ಗೆ ಫಲಾನುಭವಿಗಳಿಗೆ ನೀಡುವ ಸಹಾಯಧನ ಸೌಲಭ್ಯದ ಮೊತ್ತದ ವಿವರ ಈ ಕೆಳಗಿನಂತಿದೆ:

  • ತೆಂಗು ₹65,565
  • ಗೇರು ₹63,086
  • ಮಾವು / ಸಪೋಟ (10X10 ಮೀಟರ್) ₹56,279
  • ದಾಳಿಂಬೆ ₹68,834
  • ಸೀಬೆ (6X6 ಮೀಟರ್) ₹131,431
  • ದಾಲ್ಚಿನ್ನಿ ₹173,595
  • ಕಾಳುಮೆಣಸು (ಅಡಿಕೆ ತೋಟದ ಅಂತರ ಬೆಳೆ) ₹108,922
  • ನುಗ್ಗೆ ₹70,362
  • ಬಾಳೆ (ಅಂಗಾಂಶ) ₹205,195
  • ಪಪಾಯ (2.4X2.4 ಮೀಟರ್) ₹117,965
  • ಪಪಾಯ (1.8X1.8 ಮೀಟರ್) ₹205,411
  • ತೆಂಗು ಪುನಶ್ಚೇತನ (ಎತ್ತರ ತಳಿ) ₹61,999
  • ಅಡಿಕೆ ಪುನಶ್ಚೇತನ (25% ಮರುನಾಟಿ) ₹60,381
  • ಅಡಿಕೆ ಹೊಸ ಪ್ರದೇಶ ವಿಸ್ತರಣೆ ₹167,682
  • ವೀಳೆದೆಲೆ (2X2.5 ಮೀಟರ್) ಅರ್ಧ ಎಕರೆ ₹57,701
  • ತಾಳೆಬೆಳೆ ₹34,456

ಇದನ್ನೂ ಓದಿ: 2024-25ನೇ ಸಾಲಿನ ಪಶುಪಾಲನಾ ಇಲಾಖೆ ಸಹಾಯಧನ, ಸಬ್ಸಿಡಿ ಯೋಜನೆಗಳು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Animal Husbandry Schemes

ಈ ಸಹಾಯಧನ ಪಡೆಯುವುದು ಹೇಗೆ?

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಜಾಬ್ ಕಾರ್ಡ್ ಹೊಂದಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನಮೂನೆ 1ನ್ನು ಭರ್ತಿ ಮಾಡಿ ಕುಟುಂಬದ 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲಾ ಸದಸ್ಯರ ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಇವುಗಳ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಜಾಬ್‌ಕಾರ್ಡ್ ಪಡೆಯಬಹುದು.

ಉದ್ಯೋಗ ಚೀಟಿ ಪಡೆಯಲು ಕುಟುಂಬದ ಪ್ರತಿಯೊಬ್ಬ ವಯಸ್ಕ ಸದಸ್ಯರ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಅಗತ್ಯ. ಉದ್ಯೋಗಕ್ಕಾಗಿ ನಮೂನೆ-6ರಲ್ಲಿ ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡೆಯುವ ಮೂಲಕ ತೋಟಗಾರಿಕೆ ಬೆಳೆಗಳಿಗೆ ಹಾಗೂ ತೋಟಗಾರಿಕೆ ಚಟುವಟಿಕೆಗಳಿಗೆ ಸಹಾಯಧನ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ನಿಮ್ಮ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು…

ಇದನ್ನೂ ಓದಿ: ರೈತರಿಗೆ ಸಿಗುವ ತೋಟಗಾರಿಕೆ ಇಲಾಖೆ ಸಬ್ಸಿಡಿ ಯೋಜನೆಗಳು Horticulture Department Subsidy Schemes


Spread the love
WhatsApp Group Join Now
Telegram Group Join Now

Leave a Comment

error: Content is protected !!