AgricultureNews

Montha Cyclone Effect- ಮೋಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೋರು ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

Montha Cyclone Effect

Spread the love

ಮೋಂಥಾ ಚಂಡಮಾರುತದ ಪರಿಣಾಮವಾಗಿ (Montha Cyclone Effect) ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಮೋಂಥಾ ಚಂಡಮಾರುತ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ತೀರದ ಮೂಲಕ ಹಾದುಹೋಗಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಅಂದರೆ ಅಕ್ಟೋಬರ್ 29ರ ವರೆಗೂ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರ ಅವಧಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದ್ದು; ಬೆಂಗಳೂರು ಹವಾಮಾನ ಕೇಂದ್ರದ ತಜ್ಞ ಸಿ. ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Domestic Workers Welfare Bill 2025- ಮನೆ ಕೆಲಸದವರಿಗೂ ಇನ್ಮುಂದೆ ಸರ್ಕಾರಿ ನೌಕರರಂತೆ ಸಂಬಳ-ಸವಲತ್ತುಗಳು | ‘ಕಲ್ಯಾಣ’ ಮಸೂದೆ ಮಂಡನೆ

ಉಲ್ಬಣಿಸಿದ ಮೋಂಥಾ ಚಂಡಮಾರುತ

ಮೋಂಥಾ ಚಂಡಮಾರುತವು ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ, ಚೆನ್ನೈನಿಂದ 520 ಕಿಲೋ ಮೀಟರ್ ಮತ್ತು ಆಂಧ್ರಪ್ರದೇಶದ ಕಾಕಿನಾಡದಿಂದ 570 ಕಿಲೋ ಮೀಟರ್ ದೂರದಲ್ಲಿದ್ದು, ವಾಯವ್ಯ ದಿಕ್ಕಿನಲ್ಲಿ ಮತ್ತಷ್ಟು ಚಲಿಸುವ ಮತ್ತು ತೀವ್ರಗೊಳ್ಳುವ ಸಂಭವವಿದೆ.

ಅಕ್ಟೋಬರ್ 28ರಂದು ಸಂಜೆ ಅಥವಾ ರಾತ್ರಿ ಕಾಕಿನಾಡ ಕರಾವಳಿಯನ್ನು ದಾಟುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಗಾಳಿಯ ವೇಗ ಗಂಟೆಗೆ 90 ರಿಂದ 100 ಕಿ.ಮೀ., ಕೆಲವೊಮ್ಮೆ ಗಂಟೆಗೆ 110 ಕಿ.ಮೀ. ತಲುಪುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೋಂಥಾ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ...
Montha Cyclone Effect

ಇದನ್ನೂ ಓದಿ: Free Nati Kolimari – ಗ್ರಾಮೀಣ ಮಹಿಳೆಯರಿಗೆ ಉಚಿತ ನಾಟಿ ಕೋಳಿಮರಿ ವಿತರಣೆಗೆ ಅರ್ಜಿ ಆಹ್ವಾನ

ಕರ್ನಾಟಕದ ಈ ಜಿಲ್ಲೆಗಳಿಗೆ ಅಲರ್ಟ್

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಮಂಗಳವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಅಕ್ಟೋಬರ್ 27ರ ಸೋಮವಾರ ಹೆಚ್ಚಿನ ಪ್ರಮಾಣದ ಮಳೆಯಾಗಿದ.

ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಹಲವೆಡೆ ಮಳೆ ಅಬ್ಬರಿಸಿದೆ. ಗದಗದಲ್ಲಿ – 7 ಸೇ.ಮಿ. ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ – 3 ಸೇ.ಮೀ. ಹಾಗೂ ಮಂಡ್ಯದಲ್ಲಿ- 3 ಸೇ.ಮಿ. ಮಳೆಯಾದ ವರದಿಯಾಗಿದೆ.

ಇದನ್ನೂ ಓದಿ: Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | ಯಾವ ಬೆಳೆಗೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಕ್ಟೋಬರ್ 26 ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಂಗಳೂರಿನಲ್ಲಿ ಅಕ್ಟೋಬರ್ 27ರ ಬೆಳಗ್ಗೆಯಿಂದಲೇ ಜೋರಾದ ಮಳೆಯಾಗುತ್ತಿದೆ.

ಇನ್ನೂ ಎರಡು ದಿನ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯ ಎಲ್ಲಾ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಕ್ಟೋಬರ್ 28ರ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರ ಮಳೆ ಮುಂದುವರಿಯುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ.

E-Swathu- ಇನ್ಮುಂದೆ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಕೇವಲ 15 ದಿನಗಳಲ್ಲಿ ಇ-ಸ್ವತ್ತು ವಿತರಣೆ | ಹೊಸ ಅಧಿಸೂಚನೆ ಬಿಡುಗಡೆ


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!