Morarji Free PUC Admission- ಮೊರಾರ್ಜಿ ವಸತಿ ಪಿಯು ಕಾಲೇಜುಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

Spread the love

WhatsApp Group Join Now
Telegram Group Join Now

ಮೊರಾರ್ಜಿ ದೇಸಾಯಿ ಪಿಯು ಕಾಲೇಜುಗಳಲ್ಲಿ (Morarji Desai PU College) ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ (PUC Free Admission) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟ ಸಹಿತ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ (Directorate of Minorities) ಅಧೀನದಲ್ಲಿ ರಾಜ್ಯಾದ್ಯಂತ 21 ಪದವಿಪೂರ್ವ ಕಾಲೇಜುಗಳನ್ನು ಸ್ಥಾಪಿಸಲಾಗಿದೆ.

ಈ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು, ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬಹುದು.

Additional Pension Hike- ಸರ್ಕಾರಿ ನೌಕರರಿಗೆ 100% ವರೆಗೆ ಹೆಚ್ಚುವರಿ ಪಿಂಚಣಿ | ಸರ್ಕಾರದ ಮಹತ್ವದ ಅಧಿಸೂಚನೆ

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಮೊರಾರ್ಜಿ ದೇಸಾಯಿ ಹಾಗೂ ಮೌಲಾನಾ ಆಜಾದ್ ವಸತಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳು ಉಚಿತವಾಗಿ ಒದಗಿಸಲಾಗುತ್ತದೆ. ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು:

ಜಾತಿ ಮತ್ತು ಸಮುದಾಯ: ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್, ಪಾರ್ಸಿ ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರೆ ಹಿಂದುಳಿದ ವರ್ಗಗಳು (OBC) ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: ಕರ್ನಾಟಕ ರಾಜ್ಯದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ರಾಜ್ಯದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿAದ ವಿದ್ಯಾಭ್ಯಾಸ ಮಾಡಿಕೊಂಡಿರಬೇಕು.

ಆದಾಯ ಮಿತಿಯ: ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷಕ್ಕಿಂತ ಕಡಿಮೆಯಾಗಿರಬೇಕು ಅಭ್ಯರ್ಥಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಮೊರಾರ್ಜಿ ದೇಸಾಯಿ ಪಿಯು ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ...
Morarji Free PUC Admission 2025

New Ration Card- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಸ್ಥಾನ ಮೀಸಲಾತಿ ವಿವರಗಳು

ಮೊರಾರ್ಜಿ ದೇಸಾಯಿ ಹಾಗೂ ಮೌಲಾನಾ ಆಜಾದ್ ವಸತಿ ಪಿಯು ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ವಿಶೇಷಚೇತನ ವಿದ್ಯಾರ್ಥಿಗಳಿಗೂ ಈ ಕಾಲೇಜುಗಳಲ್ಲಿ ಪ್ರವೇಶಾತಿಗಾಗಿ ಶೇಕಡಾವಾರು ಮೀಸಲಾತಿ ಕಲ್ಪಿಸಲಾಗಿದೆ. ಮೀಸಲಾತಿ ವಿವರ ಈ ಕೆಳಗಿನಂತಿದೆ:

  • ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಗೆ: 75%
  • ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ: 25%
  • ವಿಶೇಷಚೇತನ ವಿದ್ಯಾರ್ಥಿಗಳಿಗೆ: ಶೇಕಡಾ 4%
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು
  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  • ಜಾತಿ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ನಿವಾಸ ಪ್ರಮಾಣಪತ್ರ
  • ಅಲ್ಪಸಂಖ್ಯಾತ ಸಮುದಾಯದ ಪ್ರಮಾಣಪತ್ರ (ಅಗತ್ಯವಿದ್ದರೆ)
  • ವಿಶೇಷಚೇತನರಿಗೆ ಆರೋಗ್ಯ ಪ್ರಮಾಣಪತ್ರ

PM Surya Ghar Free Solar Power- ಮನೆ ಮನೆಗೆ ಉಚಿತ ಸೋಲಾರ್ ವಿದ್ಯುತ್ | ಈಗಲೇ ಅರ್ಜಿ ಸಲ್ಲಿಸಿ…

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾವುದೇ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸುವ ಜಾಲತಾಣದ ವಿಳಾಸ:  sevasindhuservices.karnataka.gov.in

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಕೆ ಪ್ರಾರಂಭ: 03-05-2025
  • ಅರ್ಜಿ ಸಲ್ಲಿಕೆ ಕೊನೆ: 17-05-2025

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿ ಮತ್ತು ಕಾಲೇಜಿನ ಪ್ರಾಂಶುಪಾಲರ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ ಸಂಪರ್ಕಿಸಬಹುದಾಗಿದೆ. ಸಹಾಯವಾಣಿ ಸಂಖ್ಯೆ: 8277799990

CBSE 10th 12th Result 2025- ಸಿಬಿಎಸ್‌ಇ SSLC-PUC ಫಲಿತಾಂಶ ಈ ದಿನ ಪ್ರಕಟ | ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now


Spread the love
error: Content is protected !!