Motor Vehicle Inspector Recruitment 2024 : ಕರ್ನಾಟಕ ಲೋಕಸೇವಾ ಆಯೋಗವು (KPSC) ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಿದೆ. ಉಳಿಕೆ ಮೂಲವೃಂದದ 70 ಹಾಗೂ ಹೈದರಾಬಾದ್ ಕರ್ನಾಟಕ ವಲಯದ 6 ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್ 14ರಂದು ಪ್ರತ್ಯೇಕ ಅಧಿಸೂಚನೆ ಹೊರಡಿಸಿತ್ತು.
ಸದರಿ ಅಧಿಸೂಚನೆಯಲ್ಲಿ ಏಪ್ರಿಲ್ 22ಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿ, ಮೇ 21 ಕೊನೆಯ ದಿನವೆಂದು ತಿಳಿಸಲಾಗಿತ್ತು. ಆದರೆ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಾಹನ ಚಾಲನಾ ಪರವಾನಿಗೆಗೆ (DL) ಸಂಬಂಧಿಸಿದಂತೆ ಅರ್ಜಿಯಲ್ಲಿ DL ಸಂಖ್ಯೆಯನ್ನು ನಮೂದಿಸಿದಾಗ DLನ ಸಂಪೂರ್ಣ ಮಾಹಿತಿಯು Application Programming Interface (API) ತಂತ್ರಾಂಶದ ಮೂಲಕ ಅರ್ಜಿಯಲ್ಲಿ ಬರುವಂತೆ ವ್ಯವಸ್ಥೆ ಮಾಡಲಾಗುತ್ತಿದ್ದು, ತಾಂತ್ರಿಕ ಕಾರಣಗಳಿಂದ ಈ ಕಾರ್ಯವು ವಿಳಂಬವಾಗುತ್ತಿರುವುರಿ೦ದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕಾಲಮಿತಿಯನ್ನು ಮುಂದೂಡಲಾಗಿತ್ತು.
ಈ ಕಾರಣದಿಂದ ಅರ್ಜಿ ಸಲ್ಲಿಕೆ ಆರಂಭವನ್ನು 02-05-2024ಕ್ಕೆ ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 01-06-2024ಕ್ಕೆ ನಿಗದಿಪಡಿಸಿ ಪ್ರಕಟಣೆ ಹೊರಡಿಸಲಾಗಿತ್ತು. ಎರಡನೇ ಬಾರಿ ದಿನಾಂಕ ನಿಗದಿಪಡಿಸಿದ ಮೇಲೂ ಪತ್ತೆ ತಾಂತ್ರಿಕ ಸಮಸ್ಯೆ ಎದುರಾದ್ದರಿಂದ ಪುನಃ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಶೀಘ್ರದಲ್ಲಿಯೇ ಅರ್ಜಿ ಸಲ್ಲಿಕೆ ಆರಂಭದ ಮಾಹಿತಿ ನೀಡಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಡಾ.ಕೆ. ರಾಕೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ.
ಶೈಕ್ಷಣಿಕ ವಿದ್ಯಾರ್ಹತೆ ಏನು?
ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆ ನಡೆಸಲಿರುವ ಒಟ್ಟು 76 (70+6) ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ಹುದ್ದೆಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ ಈ ಕೆಳಗಿನಂತಿದೆ:
10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ತೇರ್ಗಡೆಯಾಗಿರಬೇಕು.ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮ (3 ವರ್ಷ) ಪಾಸ್ ಮಾಡಿರಬೇಕು ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಾಸ್. ಅಥವಾ ಬಿ.ಟೆಕ್ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಬಿ.ಟೆಕ್ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಸAಬಳ ಮತ್ತು ವಯೋಮಿತಿ ವಿವರ
ಸಾರಿಗೆ ಇಲಾಖೆಯ ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು 33,450 ರೂ. ಯಿಂದ 62,600 ರೂ. ವರೆಗೆ ವೇತನ ಇರಲಿದೆ. ವಯೋಮಿತಿ ನೋಡುವುದಾದರೆ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
- 2ಎ, 2ಬಿ, 3ಎ, 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
- ಪ.ಜಾ / ಪ.ಪಂ / ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ : 40 ವರ್ಷ
ಅರ್ಜಿ ಶುಲ್ಕದ ವಿವರ
ಸಾರಿಗೆ ಇಲಾಖೆಯ ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ. ಈ ಪೈಕಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 600 ಶುಲ್ಕ ನಿಗದಿಪಡಿಸಲಾಗಿದೆ.
ಇನ್ನು 2A, 2B, 3A, 3B ಪ್ರವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕ ನಿಗದಿಯಾಗಿದ್ದು; ಎಸ್‌ಸಿ / ಎಸ್‌ಟಿ ಮತ್ತು ಪ್ರವರ್ಗ 1 ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ.
- ಅರ್ಜಿ ಲಿಂಕ್ : kpsconline.karnataka.gov.in
- ಅಧಿಕೃತ ಅಧಿಸೂಚನೆ : Download