ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ನಡೆಯುವ ‘ನ್ಯಾಯ ಬೆಲೆ ಅಂಗಡಿ’ಗಳನ್ನು ತೆರೆಯಲು (Nyaya Bele Angadi Application) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ…
ರಾಜ್ಯದ ಪಡಿತರ ಫಲಾನುಭವಿಗಳಿಗೆ ಉಚಿತ ಹಾಗೂ ರಿಯಾಯ್ತಿ ದರದಲ್ಲಿ ಆಹಾರಧಾನ್ಯಗಳನ್ನು ವಿತರಿಸುವ ಹಿನ್ನಲೆಯಲ್ಲಿ ನ್ಯಾಯ ಬೆಲೆ ಅಂಗಡಿಗಳನ್ನು ತೆರೆಯಲಾಗಿದೆ. ಕಮೀಷನ್ ಆಧಾರದ ಮೇಲೆ ಖಾಸಗಿ ಅಭ್ಯರ್ಥಿಗಳಿಗೆ ಇವುಗಳ ನಿರ್ವಹಣೆಯನ್ನು ನೀಡಲಾಗುತ್ತಿದ್ದು; ಆಗಾಗ ಅರ್ಜಿ ಆಹ್ವಾನಿಸಲಾಗುತ್ತದೆ.
ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಡಿ ಸದ್ಯ ರಾಜ್ಯಲ್ಲಿ ಒಟ್ಟು 20,473 ನ್ಯಾಯ ಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿವೆ. ಈ ಅಂಗಡಿಗಳ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳಿಗೆ ಶೇ.24ರಷ್ಟು ಮೀಸಲಾತಿ ಇರಿಸಿ ಹೊಸ ನಿಯಮ ಹೊರಡಿಸಲಾಗಿದೆ.
ಈ ಜಿಲ್ಲೆಯಿಂದ ಅರ್ಜಿ ಆಹ್ವಾನ
ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಸ ಹೊಸ ನ್ಯಾಯಬೆಲೆ ಅಂಗಡಿಗಳ ಆರಂಭಕ್ಕೆ ಅರ್ಜಿ ಆಹ್ವಾನಿಸುತ್ತಿದ್ದು; ಇದೀಗ ಹಾವೇರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಕರೆಯಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್, ಹಾವೇರಿ ಹಾಗೂ ರಾಣೇಬೆನ್ನೂರು ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ಹೊಸ ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಗೆ ಸಂಘ-ಸAಸ್ಥೆಗಳು, ಸ್ತ್ರೀ ಶಕ್ತಿ ಗುಂಪುಗಳ ಮತ್ತು ಮಹಿಳಾ ಸ್ವ-ಸಹಾಯ ಸಂಘಗಳು ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾವೆಲ್ಲ ಗ್ರಾಮಗಳಲ್ಲಿ ಅವಕಾಶ
ಹಾನಗಲ್ ತಾಲೂಕು ವ್ಯಾಪ್ತಿಯ ತಿಳವಳ್ಳಿ, ಬೊಮ್ಮನಹಳ್ಳಿ, ಬೈಲವಾಳ, ಮ ಅರೇಗೊಪ್ಪ, ಹಿರೇಬಾಸೂರು, ಹೋತನಹಳ್ಳಿ, ಸಾಂವಸಗಿ, ಬ್ಯಾಗವಾದಿ, ಹಿರೇಹುಲ್ಲಾಳ, ಕಲಗುಡ್ಡಿ, ಶಿವಪೂರ, ಗೆಜ್ಜಿಹಳ್ಳಿ, ಮಲಗುಂದ, ಆಲದಕಟ್ಟಿ, ಆರೇಗೊಪ್ಪ, ಸೋಮಾಪುರ, ಡೊಳ್ಳೇಶ್ವರ, ವರ್ದಿ, ಮಕರವಳ್ಳಿ, ಕೋಣನಕೊಪ್ಪ, ಅಕ್ಕಿಆಲೂರು, ಹಾನಗಲ್ ಪಟ್ಟಣದ ವಾರ್ಡ್ ನಂ.16 ಕುಂಬಾರ ಓಣಿ, ವಾರ್ಡ್ ನಂ.4 ಹೊಸ ಬಸ್ಸ್ಟ್ಯಾಂಡ್ ಬಡಾವಣೆ
ಹಾವೇರಿ ತಾಲೂಕು ನೆಗಳೂರು, ಕಳ್ಳಿಹಾಳ ಹಾಗೂ ರಾಣೇಬೆನ್ನೂರು ತಾಲೂಕು ಇಟಗಿ ಗ್ರಾಮದಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 26ರ ಸಂಜೆ 5.30ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇದನ್ನೂ ಓದಿ: E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು
ಎಲ್ಲಿ ಅರ್ಜಿ ಸಲ್ಲಿಸಬೇಕು?
ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು; ಅರ್ಜಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ಉಪನಿರ್ದೆಶಕರ ಕಚೇರಿಗೆ ನೇರವಾಗಿ ಸಲ್ಲಿಸುವಂತೆ ಆಹಾರ ಇಲಾಖೆಯ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ವಿಳಾಸ:
- ಉಪನಿರ್ದೆಶಕರ ಕಚೇರಿ
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
ಜಿಲ್ಲಾಡಳಿತ ಭವನ
ದೇವಗಿರಿ-ಹಾವೇರಿ- 581110
PhonePe Personal Loan- ₹5 ಲಕ್ಷದ ವರೆಗೆ ಫೋನ್ಪೇ ಪರ್ಸನಲ್ ಲೋನ್ | ಮೊಬೈಲ್ನಲ್ಲೇ ಅರ್ಜಿ ಹಾಕಿ…

Founder and Editor-in-Chief of mahitimane.com, a credible news portal. He has over 20 years of rich experience in the print media and has worked as a reporter, sub-editor, and editor. In line with the changing landscape of journalism, he has recently been actively engaged in the digital media space, focusing on delivering accurate and trustworthy news to readers.