ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ 5,500 ದೈಹಿಕ ಶಿಕ್ಷಕರ ನೇಮಕಾತಿ : ಖಾಲಿ ಹುದ್ದೆಗಳ ವಿವರ ಇಲ್ಲಿದೆ… Physical Education Teachers Recruitment 2024

Spread the love

Physical Education Teachers Recruitment 2024 : ಕರ್ನಾಟಕ ರಾಜ್ಯಾದ್ಯಂತ ಪ್ರೌಢಶಾಲೆಗಳಲ್ಲಿ, ಪದವಿಪೂರ್ವ ಕಾಲೇಜುಗಳಲ್ಲಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಅವಶ್ಯಕತೆ ಇರುವ 5,500 ದೈಹಿಕ ಶಿಕ್ಷಕರ ನೇಮಕಾತಿಗಾಗಿ ಸಿದ್ಧತೆ ಆರಂಭವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತ ಹೇಳಿಕೆ ನೀಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೊಡಲು ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅವಶ್ಯಕತೆ ಇರುವ ದೈಹಿಕ ಶಿಕ್ಷಕರ ನೇಮಕಾತಿಗಾಗಿ ಹಣಕಾಸು ಇಲಾಖೆಯಿಂದ ಶೀಘ್ರದಲ್ಲಿಯೇ ಒಪ್ಪಿಗೆ ಸಿಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಚಿತ್ರಕಲಾ ಶಿಕ್ಷಕರ ಕೊರತೆ ಕೂಡ ಇದ್ದು, ಈ ಹುದ್ದೆಗಳನ್ನು ಸಹ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಒಟ್ಟಾರೆ ಕರ್ನಾಟಕ ರಾಜ್ಯದ್ಯಂತ 40,000 ಶಿಕ್ಷಕರ ಅಗತ್ಯವಿದ್ದು, ಹಂತ ಹಂತವಾಗಿ ಈ ಎಲ್ಲಾ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Anganwadi Teacher Jobs 2024

ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗಳ ವಿವರ

ಪ್ರಸ್ತುತ ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 2,000 ಹುದ್ದೆಗಳು, ಪ್ರೌಢಶಾಲೆಗಳಲ್ಲಿ 1,500 ಹುದ್ದೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು 2,000 ಹುದ್ದೆಗಳು ಖಾಲಿ ಇವೆ. ಎಲ್ಲಾ ಸೇರಿ ಕರ್ನಾಟಕ ರಾಜ್ಯಾದ್ಯಂತ ಒಟ್ಟು 5,500 ಹುದ್ದೆಗಳು ಖಾಲಿ ಇವೆ.

ದೈಹಿಕ ಶಿಕ್ಷಕರ ನೇಮಕಾತಿಯ ಕುರಿತು ಮಾತನಾಡಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವುದರಿಂದ ಶೀಘ್ರದಲ್ಲಿಯೆ ಇದಕ್ಕೆ ಅನುಮೋದನೆ ದೊರೆಯಲಿದೆ’ ಎಂದು ತಿಳಿಸಿರುತ್ತಾರೆ.

ಸರಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ವರದಿ ಆಗಸ್ಟ್’ನಲ್ಲಿ ಜಾರಿ? | ಸಿಎಂ ಸಿದ್ದರಾಮಯ್ಯ ಸೂಚನೆ ಏನು? Karnataka Govt Employees Good News

Physical Education Teachers Recruitment 2024
ದೈಹಿಕ ಶಿಕ್ಷಕ ಹುದ್ದೆಗಳಿಗೆ ಅರ್ಹತೆಗಳು
  • ಕರ್ನಾಟಕದ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗಿಕೃತ ವಿಶ್ವವಿದ್ಯಾಲಯದಿಂದ ಬಿಪಿ.ಇಡಿ ಶಿಕ್ಷಣ ಹೊಂದಿರಬೇಕು.
  • ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಪಿ.ಇಡಿ ಶಿಕ್ಷಣವನ್ನು ಪಡೆದಿರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯ ವಿವರವನ್ನು ಅಧಿಕೃತ ಅಧಿಸೂಚನೆ ಬಿಡುಗಡೆಯಾದ ಮೇಲೆ ತಿಳಿಸಲಾಗುವುದು.

SSLC ಅಭ್ಯರ್ಥಿಗಳಿಂದ ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ | 215 ಹುದ್ದೆಗಳು Bagalkot Cooperative Bank Recruitment 2024

ಆಯ್ಕೆ ಪ್ರಕ್ರಿಯೆ Selection Procedure

ಅರ್ಜಿ ಸಲ್ಲಿಸಲು ಎಲ್ಲಾ ಅರ್ಹತೆಗಳನ್ನು ಹೊಂದಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (Written test) ನಡೆಸಿ ದಾಖಲೆ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

3,000 ಕರ್ನಾಟಕ ಪಬ್ಲಿಕ್ ಶಾಲೆಗಳು ಆರಂಭ

Karnataka Government Public School ಒಂದೇ ಸೂರಿನಡಿ ವಿದ್ಯಾರ್ಥಿಗಳಿಗೆ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ಅವರಿಗೆ 14 ವರ್ಷಗಳ ಕಾಲ ಶಿಕ್ಷಣ ಸಿಗಲಿ ಎಂಬ ಕಾರಣದಿಂದಾಗಿ ಹೊಸದಾಗಿ 3,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಕರ್ನಾಟಕ ಸರ್ಕಾರವು ನಿರ್ಧರಿಸಿದೆ. ಇದರಿಂದ ಕರ್ನಾಟಕ ರಾಜ್ಯದ ಬಡ ಪ್ರತಿಭಾವಂತ ಮಕ್ಕಳಿಗೆ ತುಂಬಾ ಅನುಕೂಲವಾಗಲಿದೆ.

10,000 ಸರಕಾರಿ ಶಾಲೆ ಶಿಕ್ಷಕರ ನೇಮಕಾತಿ | ಶೀಘ್ರದಲ್ಲಿಯೇ ಅರ್ಜಿ ಆಹ್ವಾನ Karnataka Govt School Teacher Recruitment 2024


Spread the love
WhatsApp Group Join Now
Telegram Group Join Now

4 thoughts on “ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ 5,500 ದೈಹಿಕ ಶಿಕ್ಷಕರ ನೇಮಕಾತಿ : ಖಾಲಿ ಹುದ್ದೆಗಳ ವಿವರ ಇಲ್ಲಿದೆ… Physical Education Teachers Recruitment 2024”

Leave a Comment

error: Content is protected !!