EducationGovt Schemes

Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

Spread the love

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಯಾವೆಲ್ಲ ನೆರವುಗಳು ಸಿಗಲಿವೆ?

ಈ ಯೋಜನೆಯಡಿ ರಾಜ್ಯ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಈ ಕೆಳಕಂಡ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ:

  • ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post-Matric Scholarship): ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಸೇರಿದಂತೆ ಮೆಟ್ರಿಕ್ ನಂತರದ ಎಲ್ಲಾ ಹಂತದ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್ ಪಡೆಯಬಹುದು.
  • ಶುಲ್ಕ ಮರುಪಾವತಿ (Fee Reimbursement): ಕಾಲೇಜು ಪ್ರವೇಶಕ್ಕಾಗಿ ವಿದ್ಯಾಸಂಸ್ಥೆಗಳಿಗೆ ಪಾವತಿಸಿರುವ ಕೋರ್ಸ್ ಶುಲ್ಕದ ಭಾಗಶಃ ಅಥವಾ ಸಂಪೂರ್ಣ ಮರುಪಾವತಿಗೆ ಆರ್ಥಿಕ ನೆರವು ಒದಗಿಸಲಾಗುತ್ತದೆ.
  • ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ: ಬಡಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ವೆಚ್ಚಕ್ಕಾಗಿ ವಿಶೇಷ ಸಹಾಯಧನ ನೀಡಲಾಗುತ್ತದೆ.

Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಯಾರೆಲ್ಲ ಅರ್ಜಿ ಸಲ್ಲಿಸಬಹುದು?
  • ಮೆಟ್ರಿಕ್ ನಂತರದ (PUC, Diploma, Degree, PG, etc.) ವಿದ್ಯಾಭ್ಯಾಸ ಮಾಡುತ್ತಿರುವವರು.
  • ಹಿಂದುಳಿದ ವರ್ಗಗಳು (OBC) ಹಾಗೂ ಪ್ರವರ್ಗ – 1, ಅಲೆಮಾರಿ ಮತ್ತು ಅರೆ ಅಲೆಮಾರಿ ವರ್ಗದ ವಿದ್ಯಾರ್ಥಿಗಳು
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಮಿತಿಯನ್ನು ಸರ್ಕಾರಿ ನಿಯಮಗಳಂತೆ ಮೀರದೇ ಇರುವವರು
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ...
Post Matric Scholarship 2025
ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್‌ಲೈನ್’ನಲ್ಲಿ ನಡೆಯುತ್ತದೆ. ಅರ್ಜಿದಾರರು ಇಲಾಖೆಯ ಅಧಿಕೃತ ವೆಬ್‌ಸೈಟ್ ssp.postmatric.karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾಭ್ಯಾಸ ದಾಖಲಾತಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆ ವಿವರ, ಕಾಲೇಜು ಅಡ್ಮಿಷನ್ ದಾಖಲಾತಿ ಇತ್ಯಾದಿ ನಿಗದಿತ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

LIC BIMA SAKHI Scheme- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಂದ ಎಲ್‌ಐಸಿ ಉದ್ಯೋಗಕ್ಕೆ ಅರ್ಜಿ ಆಹ್ವಾನ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡಿ…

ಅರ್ಜಿ ಸಲ್ಲಿಕೆ ಕೊನೇ ದಿನಾಂಕ: ಸೆಪ್ಟೆಂಬರ್ 30, 2025

ಹೆಚ್ಚಿನ ಮಾಹಿತಿಗಾಗಿ ಹಾಗೂ ಯಾವುದೇ ತಾಂತ್ರಿಕ ಸಹಾಯಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಅಧಿಕೃತ ವೆಬ್‌ಸೈಟ್ bcwd.karnataka.gov.inಗೆ ಭೇಟಿ ನೀಡಬಹುದು.

ಅರ್ಜಿ ಲಿಂಕ್: Apply Now

BSF Constable Recruitment 2025- ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ 3,588 ಕಾನ್‌ಸ್ಟೆಬಲ್‌ಗಳಿಗೆ ಅರ್ಜಿ ಆಹ್ವಾನ | ಮಹಿಳೆಯರಿಗೂ ಅವಕಾಶ


Spread the love
WhatsApp Group Join Now
Telegram Group Join Now

Related Articles

Back to top button
error: Content is protected !!