
2025ನೇ ಸಾಲಿನ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ ವರ್ಷ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪದವಿ ಮೊದಲ ವರ್ಷದ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುತ್ತ ಬಂದಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಮ್ಮ ಪದವಿ ಕಾರ್ಯಕ್ರಮದ ಅವಧಿಯಲ್ಲಿ 2 ಲಕ್ಷ ರೂ. ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಅರ್ಹತೆಯ ಮಾನದಂಡಗಳು
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಭಾರತೀಯ ನಿವಾಸಿಯಾಗಿರಬೇಕು. ಕನಿಷ್ಠ 60% ಅಂಕಗಳೊಂದಿಗೆ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. 2025-26ನೇ ಸಾಲಿನ ಪ್ರಸ್ತುತ ಯಾವುದೇ ಸ್ಟ್ರೀಮ್‌ನಲ್ಲಿ ಪದವಿ ಕೋರ್ಸ್’ನಲ್ಲಿ 1ನೇ ವರ್ಷದಲ್ಲಿ ದಾಖಲಾಗಿರಬೇಕು. ಕೌಟಂಬಿಕ ವಾರ್ಷಿಕ ಆದಾಯವು 2.5 ಲಕ್ಷ ರೂ. ಹೊಂದಿರುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಎರಡನೇ ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷದಲ್ಲಿರುವ ಪದವಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು, 10ನೇ ತರಗತಿಯ ನಂತರ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ 2 ವರ್ಷ ಮತ್ತು 6 ವರ್ಷದ ಪದವಿ ಕೋರ್ಸ್’ಗಳನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರಲ್ಲ.

ಆಯ್ಕೆ ಪ್ರಕ್ರಿಯೆ ಹೇಗೆ?
ಎಲ್ಲಾ ಅರ್ಜಿದಾರರಿಗೆ ಆನ್‌ಲೈನ್ ಆಪ್ಟಿಟ್ಯೂಡ್ ಪರೀಕ್ಷೆ ಕಡ್ಡಾಯವಾಗಿರುತ್ತದೆ. ಪರೀಕ್ಷೆಯು 60 ನಿಮಿಷಗಳ ಕಾಲ ನಡೆಯಲಿದ್ದು, 60 ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಘಟಕಗಳಲ್ಲಿ ಮೌಖಿಕ ಸಾಮರ್ಥ್ಯ, ವಿಶ್ಲೇಷಣಾತ್ಮಕ ಮತ್ತು ತಾರ್ಕಿಕ ಸಾಮರ್ಥ್ಯ ಮತ್ತು ಸಂಖ್ಯಾತ್ಮಕ ಸಾಮರ್ಥ್ಯ ಸೇರಿವೆ.
ಅರ್ಜಿಗಳನ್ನು ಆಪ್ಟಿಟ್ಯೂಡ್ ಟೆಸ್ಟ್ ಸ್ಕೋರ್, ಶೈಕ್ಷಣಿಕ ಮತ್ತು ವೈಯಕ್ತಿಕ ಮಾಹಿತಿಯ ಸಂಯೋಜನೆಯನ್ನು ಬಳಸಿಕೊಂಡು ಮೌಲ್ಯಮಾಪನ ಮಾಡಲಾಗುತ್ತದೆ. ಎಲ್ಲಾ ಅಭ್ಯರ್ಥಿಗಳನ್ನು ಅರ್ಹತೆ ಮತ್ತು ಮೌಲ್ಯಮಾಪನ ಆಧಾರದ ಆಯ್ಕೆ ಮಾಡಲಾಗುತ್ತದೆ.
LIC Recruitment- LICಯ 841 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ
ಅರ್ಜಿ ಸಲ್ಲಿಕೆ ಹೇಗೆ?
ವಿದ್ಯಾರ್ಥಿಗಳು ಈ ಲೇಖನದ ಕೊನೆಯಲ್ಲಿ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು. ವೈಯಕ್ತಿಕ ಮತ್ತು ಸಂಪರ್ಕ ಮಾಹಿತಿ, ಶೈಕ್ಷಣಿಕ ಮಾಹಿತಿ, ಸಹಾಯಕ ದಾಖಲೆಗಳನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಅಕ್ಟೋಬರ್ 4, 2025
ಯಾವುದೇ ಹೆಚ್ಚುವರಿ ಪ್ರಶ್ನೆಗಳಿಗೆ, 7977 100 100ಗೆ WhatsAppನಲ್ಲಿ ‘ಹಾಯ್’ ಎಂದು ಸಂದೇಶ ಕಳುಹಿಸಿ, ಅಥವಾ ಸಹಾಯವಾಣಿಗೆ (011) 4117 1414 ಗೆ ಕರೆ ಮಾಡಿ ಅಥವಾ RF.UGScholarships@reliancefoundation.orgಗೆ ಇಮೇಲ್ ಮಾಡಿ.
ಅರ್ಜಿ ಲಿಂಕ್: scholarships.reliancefoundation.org